AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ತಂದೆಯ ಕಣ್ಣೆದುರೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ
ಮೃತರು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jan 15, 2026 | 4:10 PM

Share

ಬಾಗಲಕೋಟೆ, ಜನವರಿ 15: ರಾಜ್ಯದೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ (Sankranti) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ. ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಮೃತ ಮನೋಜ್ ಮತ್ತು ಪ್ರಮೋದ್ ಪ್ರಥಮ ಪಿಯುಸಿ ಓದುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ಕಾಲೇಜಿಗೆ ರಜೆ ಇದ್ದುದರಿಂದ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಆದರೆ ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮುಳುಗುತ್ತಿದ್ದ ಇನ್ನೊಬ್ಬ ಬಾಲಕನನ್ನು ಸ್ಥಳೀಯ ವ್ಯಕ್ತಿ ರಕ್ಷಿಸಿದ್ದಾರೆ.

ಇದನ್ನೂ ಓದಿ: ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ

ಇಬ್ಬರು ಬಾಲಕರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢ ಪಡಿಸಿದ್ದಾರೆ. ಇಬ್ಬರು ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ತಂದೆಯನ್ನೇ ಹೊಡೆದು ಕೊಲೆ‌ ಮಾಡಿದ ಪುತ್ರ

ಕುಡಿದ ಮತ್ತಿನಲ್ಲಿ ಅಸ್ಸಾಂ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದಿದ್ದು, ಈ ವೇಳೆ ತಂದೆಯನ್ನೇ ಹೊಡೆದು ಪುತ್ರ ಕೊಲೆ‌ ಮಾಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದ ದೇವಯ್ಯನ ತೋಟದ ಮನೆಯಲ್ಲಿ ಡಿ.‌12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೂನೋ (60) ಕೊಲೆಯಾದ ವ್ಯಕ್ತಿ. ಪ್ರಶಾಂತ್ (28) ಕೊಲೆ ಮಾಡಿದ ಪುತ್ರ.

ಇದನ್ನೂ ಓದಿ: ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ಕೊಲೆ‌ ಬಳಿಕ ಎಸ್ಟೇಟ್ ಮಾಲಿಕನಿಂದ ಮಡಿಕೇರಿಯ ಹಿಂದೂ ರುದ್ರ ಭೂಮಿಯಲ್ಲಿ ಶವ ಸಂಸ್ಕಾರ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಶಾಂತ್ ಮತ್ತು ಎಸ್ಟೇಟ್ ಮಾಲಿಕ ಮಂಡಿ ದೇವಯ್ಯ(65)ರನ್ನು ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್