
ಬಾಗಲಕೋಟೆ, ಜನವರಿ 15: ರಾಜ್ಯದೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ (Sankranti) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ. ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಮನೋಜ್ ಮತ್ತು ಪ್ರಮೋದ್ ಪ್ರಥಮ ಪಿಯುಸಿ ಓದುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆ ಕಾಲೇಜಿಗೆ ರಜೆ ಇದ್ದುದರಿಂದ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಆದರೆ ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮುಳುಗುತ್ತಿದ್ದ ಇನ್ನೊಬ್ಬ ಬಾಲಕನನ್ನು ಸ್ಥಳೀಯ ವ್ಯಕ್ತಿ ರಕ್ಷಿಸಿದ್ದಾರೆ.
ಇದನ್ನೂ ಓದಿ: ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ
ಇಬ್ಬರು ಬಾಲಕರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢ ಪಡಿಸಿದ್ದಾರೆ. ಇಬ್ಬರು ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕುಡಿದ ಮತ್ತಿನಲ್ಲಿ ಅಸ್ಸಾಂ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದಿದ್ದು, ಈ ವೇಳೆ ತಂದೆಯನ್ನೇ ಹೊಡೆದು ಪುತ್ರ ಕೊಲೆ ಮಾಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದ ದೇವಯ್ಯನ ತೋಟದ ಮನೆಯಲ್ಲಿ ಡಿ.12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೂನೋ (60) ಕೊಲೆಯಾದ ವ್ಯಕ್ತಿ. ಪ್ರಶಾಂತ್ (28) ಕೊಲೆ ಮಾಡಿದ ಪುತ್ರ.
ಇದನ್ನೂ ಓದಿ: ಸೀನಿಯರ್ನನ್ನೇ ಕೊಂದ ಜೂನಿಯರ್: ಎಸ್ಎಸ್ಎಲ್ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಕೊಲೆ ಬಳಿಕ ಎಸ್ಟೇಟ್ ಮಾಲಿಕನಿಂದ ಮಡಿಕೇರಿಯ ಹಿಂದೂ ರುದ್ರ ಭೂಮಿಯಲ್ಲಿ ಶವ ಸಂಸ್ಕಾರ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಶಾಂತ್ ಮತ್ತು ಎಸ್ಟೇಟ್ ಮಾಲಿಕ ಮಂಡಿ ದೇವಯ್ಯ(65)ರನ್ನು ಬಂಧಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.