Kisan Samman Yojana: ಕಿಸಾನ್ ಸಮ್ಮಾನ್​ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಕಿಸಾನ್ ಸಮ್ಮಾನ್​ ಯೋಜನೆಯ 6ನೇ ಕಂತಿನ ಹಣವನ್ನು ಸಿಎಂ ಬೊಮ್ಮಾಯಿ ಅವರು ಇಂದು ಬಿಡುಡಗೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದ್ದಾರೆ.

Kisan Samman Yojana: ಕಿಸಾನ್ ಸಮ್ಮಾನ್​ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಕಿಸಾನ್ ಸಮ್ಮಾನ್​ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
Follow us
Rakesh Nayak Manchi
|

Updated on:Mar 21, 2023 | 8:13 PM

ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪಿಎಂ ಕಿಸಾನ್ ಯೋಜನೆಯ (PM Kisan Scheme) 6ನೇ ಕಂತಿನ ಹಣವನ್ನು ಫಲಾನುಭವಿ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 48,75,000 ರೈತರ ಬ್ಯಾಂಕ್​ ಖಾತೆಗೆ ಒಟ್ಟು 975 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್​ನವರಂತೆ ನಮ್ಮದು ಬೋಗಸ್ ಗ್ಯಾರಂಟಿ ಅಲ್ಲ. ನಿಮ್ಮ ಅವಧಿಯಲ್ಲಾದ ಅಭಿವೃದ್ಧಿ ಕೆಲಸಗಳ ಪಟ್ಟಿ ಬಿಡುಗಡೆ ಮಾಡಿ ಬಿಡುಗಡೆ ಮಾಡುತ್ತೇವೆ. ನೀವು (ಕಾಂಗ್ರೆಸ್) ನಿಮ್ಮ ಅವಧಿಯಲ್ಲಾದ ಅಭಿವೃದ್ಧಿ ಕೆಲಸಗಳ ಪಟ್ಟಿ ಬಿಡುಗಡೆ ಮಾಡಿ ಜನರ ಮುಂದಿಡಿ. ಎಲ್ಲವನ್ನೂ ಜನರು ತೀರ್ಮಾನ ಮಾಡುತ್ತಾರೆ ಎಂದ ಸಿಎಂ ಬೊಮ್ಮಾಯಿ, ದೀನ ದಲಿತರು, ಹಿಂದುಳಿದವರನ್ನು 5 ವರ್ಷ ಬಾವಿಯಲ್ಲಿ ಹಾಕುತ್ತೀರಾ ಚುನಾವಣೆ ಬಂದಾಗ ಮೇಲೆತ್ತಿ ಮತ್ತೆ ಬಾವಿಯಲ್ಲಿಡುವುದು ನಿಮ್ಮ ಕೆಲಸ ಎಂದು ವಾಗ್ದಾಳಿ ನಡೆಸಿದರು.

ಎಸ್​ಸಿ, ಎಸ್​ಟಿ ಮೀಸಲಾತಿ ವಿಚಾರಕ್ಕೆ ಕೈ ಹಾಕಬೇಡಿ ಎಂದು ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ, ಆ ಸಮುದಾಯಗಳಿಗೆ ನ್ಯಾಯ ಕೊಡಿಸಲು ಜೇನುಗೂಡಿಗೆ ಕೈಹಾಕಿದೆ. ಜೇನುಹುಳು ಕಡಿದರೂ ಸಹಿಸಿಕೊಂಡು ಸಿಹಿ ನೀಡಲು ಕೈಹಾಕಿದ್ದೆ. ಇದು ಒಬ್ಬ ಆಡಳಿತಗಾರನಿಗೆ ಇರಬೇಕಾದ ನಿಯತ್ತು, ನೀತಿ, ಧಮ್​​​ ಎಂದರು. ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಎಂ ಕಾರಜೋಳ, ಮುರುಗೇಶ್ ನಿರಾಣಿ, ಸಂಸದ ಗದ್ದಿಗೌಡರ್, ಶಾಸಕರಾದ ಸಿದ್ದು ಸವದಿ, ದೊಡ್ಡನಗೌಡ ಮತ್ತಿತರರಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ: ಸಿಎಂ ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಅದರಂತೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆದ ಸಮಾವೇಶದಲ್ಲಿ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಫಲಾನುಭವಿ ರೈತರಿಗೆ ಬಿಡುಗಡೆ ಮಾಡಿದ್ದರು. ಇದರೊಂದಿಗೆ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಿತ್ತು. ಆ ಮೂಲಕ ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ

ಕೇಂದ್ರ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಗಳಲ್ಲೊಂದಾದ ಪಿಎಂ ಕಿಸಾನ್ ಸ್ಕೀಮ್​ನ (PM Kisan Samman Nidhi) 13ನೇ ಕಂತಿನ ಒಟ್ಟು 6,800 ಕೋಟಿ ರೂ ಇಂದು (ಫೆ. 27) ಬಿಡುಗಡೆ ಆಗಿದೆ. ಪ್ರತೀ ಫಲಾನುಭವಿ ರೈತರ ಖಾತೆಗೆ ನೇರವಾಗಿ 2,000 ರೂ ಜಮೆ ಆಗುತ್ತಿದೆ. 2018 ಡಿಸೆಂಬರ್ 1ರಂದು ಚಾಲನೆಗೊಂಡ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತಿನ ಹಣ 2019, ಫೆಬ್ರುವರಿ 24ರಂದು ಬಿಡುಗಡೆ ಆಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ 12 ಕಂತುಗಳನ್ನು ರೈತರ ಖಾತೆಗೆ ಜಮೆ ಮಾಡಿದೆ. ಇವತ್ತು 13ನೇ ಕಂತು. ಕೇಂದ್ರ ಸರ್ಕಾರದ ಈ ಪಿಎಂ ಕಿಸಾನ್ ಯೋಜನೆಯಲ್ಲಿ ರೈತರ ಬೆಳೆ ಕಾರ್ಯಕ್ಕೆ ಅನುಕೂಲವಾಗಲೆಂದು ಪ್ರತೀ ವರ್ಷ ಒಟ್ಟು 6 ಸಾವಿರ ರೂ ಧನಸಹಾಯ ನೀಡಲಾಗುತ್ತದೆ. ಇದರಲ್ಲಿ ಪ್ರತೀ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂ ಮೊತ್ತದ ಕಂತು ಹಣ ಬಿಡುಗಡೆ ಆಗುತ್ತದೆ. ಕರ್ನಾಟಕ ಸರ್ಕಾರ ಇನ್ನೆರಡು ಕಂತುಗಳನ್ನು ಸೇರಿಸಿ ಕೊಡುತ್ತದೆ. ಅಂದರೆ ರಾಜ್ಯದ ರೈತರಿಗೆ ವರ್ಷಕ್ಕೆ 5 ಕಂತುಗಳು, ಅಂದರೆ ಒಟ್ಟು 10 ಸಾವಿರ ರೂ ಸಿಗುತ್ತದೆ. ಈ ಯೋಜನೆಯಲ್ಲಿ 8 ಕೋಟಿಗೂ ಹೆಚ್ಚು ರೈತರು ನೊಂದಣಿ ಮಾಡಿಕೊಂಡು ಫಲಾನುಭವಿಗಳೆನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Tue, 21 March 23

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ