ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಬಾಗಲಕೋಟೆ: ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದ ಶಾಲಾ ಬಸ್ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
Rakesh Nayak Manchi
|

Updated on:Jan 29, 2024 | 2:53 PM

ಬಾಗಲಕೋಟೆ, ಜ.29: ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ (Jamkhandi Accident) ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರು ಎಕ್ಸ್ (ಈ ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಗೆ ಬಾಂಗ್ಲಾ ನುಸುಳುಕೋರರು ಪ್ರವೇಶ ಮಾಡ್ತಿದ್ದಾರೆ -ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ

“ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಪೋಸ್ಟ್ ಮಾಡಲಾಗಿದೆ.

ಶಾಲಾ ಬಸ್-ಟ್ರ್ಯಾಕ್ಟರ್ ಡಿಕ್ಕಿ ಪ್ರಕರಣ

ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಮಧ್ಯರಾತ್ರಿ 12 ಗಂಟೆಗೆ ಸಂಭವಿಸಿತ್ತು. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು.

ಘಟನೆಯಲ್ಲಿ ಎಂಟಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಾಹವೀರ ಅಲ್ಪಾಂಖ್ಯಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಗಿಸಿಕೊಂಡು ಕವಟಗಿ ಗ್ರಾಮದ‌ ಕಡೆ ಶಾಲಾ ಬಸ್​ನಲ್ಲಿ ಹೊರಡುವಾಗ ದುರಂತ ಸಂಭವಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Mon, 29 January 24

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ