ಹೃದಯಾಘಾತದಿಂದ ರೈಲ್ವೆ ಟಿಕೆಟ್ ಕಲೆಕ್ಟರ್ ಸಾವು, ಬಳಿಕ ದೃಢಪಟ್ಟ ಕೊರೊನಾ

|

Updated on: Jun 23, 2020 | 1:05 PM

ಬಾಗಲಕೋಟೆ: ರೈಲ್ವೆ ಟಿಕೆಟ್ ಕಲೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಅವರಿಗೆ ಕೊರೊನಾ ಸೋಂಕು ಇದ್ದದ್ದು ಬಾಗಲಕೋಟೆ ಕೋವಿಡ್ ಆಸ್ಪತ್ರೆ ದೃಢಪಡಿಸಿದೆ. ಖಚಿತತೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿಯನ್ನು ಬೆಂಗಳೂರಿಗೆ ಕಳಿಸಿದ್ದಾರೆ. ಮೃತ ವ್ಯಕ್ತಿ ಹುಬ್ಬಳ್ಳಿಯ ಮಿರಜ್ ಮಾರ್ಗದ ರೈಲ್ವೆಯಲ್ಲಿ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ನಿವಾಸಿ. ಇವರಿಗೆ 57 ವರ್ಷ ವಯಸ್ಸಾಗಿತ್ತು. ನಿನ್ನೆ ಮೃತಪಟ್ಟ ಬಳಿಕ ಗಂಟಲು ಮಾದರಿಯನ್ನು ಪರೀಕ್ಷಿಸಲಾಗಿತ್ತು. ಬಾಗಲಕೋಟೆ ಕೋವಿಡ್ ಆಸ್ಪತ್ರೆಯ ವರದಿಯಲ್ಲಿ ಸೋಂಕು ಇರುವುದು […]

ಹೃದಯಾಘಾತದಿಂದ ರೈಲ್ವೆ ಟಿಕೆಟ್ ಕಲೆಕ್ಟರ್ ಸಾವು, ಬಳಿಕ ದೃಢಪಟ್ಟ ಕೊರೊನಾ
Follow us on

ಬಾಗಲಕೋಟೆ: ರೈಲ್ವೆ ಟಿಕೆಟ್ ಕಲೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾವಿನ ಬಳಿಕ ಅವರಿಗೆ ಕೊರೊನಾ ಸೋಂಕು ಇದ್ದದ್ದು ಬಾಗಲಕೋಟೆ ಕೋವಿಡ್ ಆಸ್ಪತ್ರೆ ದೃಢಪಡಿಸಿದೆ. ಖಚಿತತೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿಯನ್ನು ಬೆಂಗಳೂರಿಗೆ ಕಳಿಸಿದ್ದಾರೆ.

ಮೃತ ವ್ಯಕ್ತಿ ಹುಬ್ಬಳ್ಳಿಯ ಮಿರಜ್ ಮಾರ್ಗದ ರೈಲ್ವೆಯಲ್ಲಿ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ನಿವಾಸಿ. ಇವರಿಗೆ 57 ವರ್ಷ ವಯಸ್ಸಾಗಿತ್ತು. ನಿನ್ನೆ ಮೃತಪಟ್ಟ ಬಳಿಕ ಗಂಟಲು ಮಾದರಿಯನ್ನು ಪರೀಕ್ಷಿಸಲಾಗಿತ್ತು.

ಬಾಗಲಕೋಟೆ ಕೋವಿಡ್ ಆಸ್ಪತ್ರೆಯ ವರದಿಯಲ್ಲಿ ಸೋಂಕು ಇರುವುದು ದೃಢವಾಗಿದೆ. ಆದರೆ ಬೆಂಗಳೂರಿನಿಂದ ಪಾಸಿಟಿವ್ ವರದಿ ಬರಬೇಕಿದೆ. ಆರೋಗ್ಯಾ ಇಲಾಖೆ ಅಧಿಕಾರಿಗಳಿಗೆ ಮೃತ ವ್ಯಕ್ತಿ ಮಹಾರಾಷ್ಟ್ರದಿಂದ ಬಂದಿದ್ದ ಬಗ್ಗೆ ಸ್ಥಳೀಯರು ಮಾಹಿತಿ‌ ನೀಡಿದ್ದಾರೆ. ಸದ್ಯ ಚಿಕ್ಕಮ್ಯಾಗೇರಿ ಗ್ರಾಮ ಸೀಲ್​ಡೌನ್ ಆಗಿದೆ. ಕೋವಿಡ್ ನಿಯಮಾವಳಿ ಪ್ರಕಾರ ನಿನ್ನೆ ಅಂತ್ಯಕ್ರಿಯೆ ನೆರವೇರಿದೆ.

Published On - 1:04 pm, Tue, 23 June 20