15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ

ಕೊವಿಡ್ ಲಸಿಕೆ ನೀಡುವ ವೇಳೆ ಶಾಲೆ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತದೆ. ಏನೇ ಆರೋಗ್ಯ ಸಮಸ್ಯೆ ಎದುರಾದರೂ ಆಸ್ಪತ್ರೆಗೆ ದಾಖಲಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲು ಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ.

15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 02, 2022 | 10:13 AM

ಬೆಂಗಳೂರು: 15 ರಿಂದ 18 ವರ್ಷದ ಮಕ್ಕಳಿಗೆ ನಾಳೆಯಿಂದ (ಜನವರಿ 03) ಕೊರೊನಾ ಲಸಿಕೆ (corona vaccine) ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದ ಮಕ್ಕಳಿಗೆ (Children) ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದ ಮರು ದಿನ ರಜೆ (Leave) ನೀಡುವುದಕ್ಕೆ ತೀರ್ಮಾನ ಮಾಡಲಾಗಿದೆ. ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತಿದೆ. ಅಂದರೆ ಒಂದು ಶಾಲೆಯಲ್ಲಿ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡಲಾಗುತ್ತದೆ.

ಕೊವಿಡ್ ಲಸಿಕೆ ನೀಡುವ ವೇಳೆ ಶಾಲೆ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತದೆ. ಏನೇ ಆರೋಗ್ಯ ಸಮಸ್ಯೆ ಎದುರಾದರೂ ಆಸ್ಪತ್ರೆಗೆ ದಾಖಲಿಸಿ ಮಕ್ಕಳಿಗೆ ಚಿಕಿತ್ಸೆ ನೀಡಲು ಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ. ಮೊದಲ ಬಾರಿ ಮಕ್ಕಳಿಗೆ ವ್ಯಾಕ್ಸಿನ್ ಹಾಕುವ ಹಿನ್ನೆಲೆ, 30 ನಿಮಿಷ ಕಾಯುವ ಕೋಣೆಗೆ ಆದ್ಯತೆ ನೀಡಲಾಗಿದೆ. ವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗೆ ಕೈನೋವು, ಸುಸ್ತು, ಜ್ವರ ಕಾಣಿಸಿಕೊಂಡರೆ ರಜೆ ಪಡೆಯಬಹುದು

ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುವುದು. ಕರ್ನಾಟಕ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಲಸಿಕಾ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಶನಿವಾರ ಹೇಳಿಕೆ ನೀಡಿದ್ದಾರೆ.

ಶಿಕ್ಷಕರು, ಪೋಷಕರ ಜತೆ ಸಭೆ ನಡೆಸಿ ಹಂತಹಂತವಾಗಿ ಲಸಿಕೆ ನೀಡಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುತ್ತೇವೆ. ಮಕ್ಕಳು ಲಸಿಕೆ ಹಾಕಿಸಿಕೊಳ್ಳುವುದರಿಂದ ಸಹಕಾರಿಯಾಗಲಿದೆ. ಲಸಿಕೆ ಪಡೆಯಲು ನೋಂದಣಿ ಮಾಡಿಸುವುದು ಕಡ್ಡಾಯವಲ್ಲ. ಐಡಿ ಕಾರ್ಡ್​ ತೋರಿಸಿ ಸ್ಥಳದಲ್ಲೇ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ವಿವರಣೆ ನೀಡಿದ್ದಾರೆ.

ಪೋಷಕರಿಗೆ ಯಾವುದೇ ಆತಂಕ ಬೇಡ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕಾ ಕಾರ್ಯಕ್ರಮ ಆಯೋಜನೆ ಆಗುತ್ತದೆ. ಲಸಿಕೆ ಪಡೆಯಲು ಯಾವುದೇ ಒತ್ತಾಯ ಇರೋದಿಲ್ಲ. ಆದರೆ ಪ್ರಸ್ತುತ ಮಕ್ಕಳಿಗೆ ಕೊವಿಡ್ ಬಾಧಿಸುತ್ತಿದೆ. ಲಸಿಕೆ ಪಡೆಯದವರಿಗೆ ಕೊರೊನಾ ಕಾಡುತ್ತಿದೆ. ಈ ಸಾಲಿನಲ್ಲಿ ಮಕ್ಕಳಿದ್ದು, ಅವರ ರಕ್ಷಣೆಗೆ ಲಸಿಕೆ ಸಹಾಯಕಾರಿ ಆಗಲಿದೆ. ಶಾಲೆ ಕಾಲೇಜಿಗೆ ಹೋಗುತ್ತಿರುವ ಮಕ್ಕಳಿಗೆ ಆದ್ಯತೆ ನೀಡಿ ಕೇಂದ್ರ ಸರ್ಕಾರ ಈ ಲಸಿಕಾ ಅಭಿಯಾನ ಆರಂಭಿಸಿದೆ ಎಂದು ಅವರು ತಿಳಿಸಿದ್ದಾರೆ.

ಜನವರಿ 3 ರಿಂದ 15 ವರ್ಷದಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 79 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲು ತಯಾರಿ ಮಾಡಲಾಗಿದೆ. ಲಸಿಕೆ ನೀಡಿಕೆ ಬಗ್ಗೆ ಈಗಾಗಲೆ ಪೋಷಕರ ಜೊತೆ ಸಬೆ ನಡೆಸಲಾಗಿದೆ. ಯಾವುದೇ ಪೋಷಕರು ಭಯ ಇಲ್ಲದೆ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಹಾಸನದಲ್ಲಿ ಡಿಸಿ ಆರ್ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ 3ನೇ ಡೋಸ್​ಗಾಗಿ ಕಾರ್ಬೆವ್ಯಾಕ್ಸ್​ ಬಳಕೆ?-3ನೇ ಹಂತದ ಕ್ಲಿನಕಲ್​ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

Published On - 10:02 am, Sun, 2 January 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ