Bagalakot News: ಗೋ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ಗುಳೇದಗುಡ್ಡ ಬಂದ್​​​

ಬಕ್ರಿದ್ ಹಬ್ಬದಂದು ಜಿಲ್ಲೆಯ ಬಾದಾಮಿತಾಲೂಕಿನ ಹೊರವಲಯದಲ್ಲಿ ಗೋವುಗಳನ್ನು ಹತ್ಯೆ ಮಾಡಲಾಗಿದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿವೆ.

Bagalakot News: ಗೋ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ಗುಳೇದಗುಡ್ಡ ಬಂದ್​​​
ಹಿಂದೂ ಕಾರ್ಯಕರ್ತ ಪ್ರತಿಭಟನೆ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Jul 05, 2023 | 1:12 PM

ಬಾಗಲಕೋಟ: ಬಕ್ರಿದ್ ಹಬ್ಬದಂದು (Eid al-Adha) ಜಿಲ್ಲೆಯ ಬಾದಾಮಿ (Badami) ತಾಲೂಕಿನ ಹೊರವಲಯದಲ್ಲಿ ಗೋವುಗಳನ್ನು ಹತ್ಯೆ ಮಾಡಲಾಗಿದನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯಬಾರದು ಜೊತೆಗೆ ಕಾನೂನನ್ನು ಇನ್ನು ಹೆಚ್ಚು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು ಗುಳೇದಗುಡ್ಡ ಬಂದ್ ಕರೆ ಕೊಟ್ಟಿವೆ.

ಅಮರೇಶ್ವರ ಮಠದ ನೀಲಕಂಠ ಸ್ವಾಮೀಜಿ, ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಗುರುಬಸವ ದೇವರು, ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಗೋಮಾತೆಗೆ ಆಹಾರ ತಿನ್ನಿಸುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಗುಳೇದಗುಡ್ಡ ಪಟ್ಡಣದ ಬನ್ನಿಕಟ್ಟಿಯ ತ್ರಯಂಬಕೇಶ್ವರ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿದೆ. ಮೆರವಣಿಗೆ ಉದ್ದಕ್ಕೂ ಹೆಚ್ಚಿನ‌ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಬಾದಾಮಿ ಪಟ್ಟಣದ ಹೊರವಲಯದಲ್ಲಿ ಗೋ ಹತ್ಯೆ

ಬಕ್ರೀದ್ ಹಬ್ಬದಂದು ಬಾದಾಮಿ ಪಟ್ಟಣದ ಹೊರವಲಯದಲ್ಲಿ ಗೋವುಗಳನ್ನು ಹತ್ಯೆ ಮಾಡಲಾಗಿತ್ತು. ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಗೋ ಹತ್ಯೆಗೈದವರನ್ನು ಕೂಡಲೆ ಬಂಧಿಸಬೇಕೆಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಬಾಗಲಕೋಟೆ: ಬಿಜೆಪಿ ಸಭೆಯಲ್ಲಿ ಜಟಾಪಟಿ, ಬೊಮ್ಮಾಯಿ, ಯತ್ನಾಳ್ ಭಾಗವಹಿಸಿದ್ದ ಸಭೆಯಲ್ಲೇ ಕಾರ್ಯಕರ್ತರ ಗಲಾಟೆ

ಸಹಸ್ರಾರು ಹಿಂದೂ ಕಾರ್ಯಕರ್ತರು ಬಾದಾಮಿ ಪಟ್ಟಣದಲ್ಲಿ ಸೇರಿ ಬಾದಾಮಿಯ ರಾಮದುರ್ಗ ಸರ್ಕಲ್​ನಿಂದ ಬಸವೇಶ್ವರ ಸರ್ಕಲ್​ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದ್ದರು. ಸಹಸ್ರಾರು ಹಿಂದೂ ಕಾರ್ಯಕರ್ತರು ಬಾದಾಮಿ ಪಟ್ಟಣದಲ್ಲಿ ಸೇರಿ ಬಾದಾಮಿಯ ರಾಮದುರ್ಗ ಸರ್ಕಲ್​ನಿಂದ ಬಸವೇಶ್ವರ ಸರ್ಕಲ್​ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು. ಸ್ಥಳಕ್ಕೆ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಚರ್ಚೆ ನಡೆಸಿದ್ದರು.

ಬಳಿಕ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಮತ್ತು ಎರಡು ಗೋವುಗಳನ್ನು ರಕ್ಷಣೆ ಮಾಡಿದ್ದರು. ಒಂದು ಗೋವನ್ನು ಹತ್ಯೆ ಮಾಡಲಾಗಿತ್ತು. ಒಟ್ಟು ಮೂರು ಗೋವುಗಳನ್ನು ಹತ್ಯೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ತೆರಳಿ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಗೋಶಾಲೆಗೆ ಬಿಟ್ಟಿದ್ದರು. ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Wed, 5 July 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ