ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಿಆರ್​ಪಿಎಫ್ ಯೋಧ ಸಾವು

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಿಆರ್​ಪಿಎಫ್ ಯೋಧ ಸಾವು
ಮೃತ ಸಿಆರ್​ಪಿಎಫ್​ ಯೋಧ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 24, 2022 | 9:25 PM

ಬಾಗಲಕೋಟೆ: ಅಪಘಾತದಲ್ಲಿ (Accident) ಗಂಭೀರ ಗಾಯಗೊಂಡಿದ್ದ ಸಿಆರ್​ಪಿಎಫ್ ಯೋಧ (CRPF Soldier) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಚಿದಾನಂದ ಭಜಂತ್ರಿ (52) ಮೃತ ಯೋಧ. ಬಾಗಲಕೋಟೆ (Bagalakote) ಜಿಲ್ಲೆ ಇಳಕಲ್ ತಾಲ್ಲೂಕಿನ ಗುಡೂರು ಗ್ರಾಮ ಯೋಧ ಚಿದಾನಂದ ಭಜಂತ್ರಿ 1988ರಲ್ಲಿ ಸಿಆರ್​ಪಿಎಫ್ ಸೇರಿದ್ದರು. ಇವರು ಬೆಳಗಾವಿಯ ೩೨ ಸಿಆರ್​ಪಿಎಫ್ ಬಟಾಲಿಯನ್​ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪತ್ನಿಗೆ ಹುಷಾರಿಲ್ಲದ ಕಾರಣ ರಜೆ ಮೇಲೆ ಊರಿಗೆ ಬಂದಿದ್ದರು. ಅಗಷ್ಟ್ 9 ರಂದು ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬಳಿ ಇವರ ಬೈಕ್​ಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ಯೋಧ ಗಂಭೀರ ಗಾಯಗೊಂಡಿದ್ದು  ಬೆಳಗಾವಿಯ ಖಾಸಗಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇಂದು (ಆ 24) ರಾತ್ರಿ 8 ಗಂಟೆಗೆ ಗುಡೂರು ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಚಲಿಸುತ್ತಿದ್ದ ಬೈಕ್​​ಗೆ ಸಿಮೇಂಟ್ ಮಿಕ್ಸಿಂಗ್ ಲಾರಿ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಸಾವು

ಬೆಂಗಳೂರು: ಚಲಿಸುತ್ತಿದ್ದ ಬೈಕ್​​ಗೆ ಸಿಮೇಂಟ್ ಮಿಕ್ಸಿಂಗ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಸವಾರಿ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಬೈಕ್ ಚಿಕ್ಕಬಳ್ಳಾಪುರ ಕಡೆಯಿಂದ ಬೆಂಗಳೂರಿನತ್ತ ಬರುತ್ತಿತ್ತು. ಈ ವೇಳೆ ಹಿಂದಿನಿಂದ ಲಾರಿ ಡಿಕ್ಕಿ‌ ಹೊಡೆದಿದೆ. ಡಿಕ್ಕಿ ಹೊಡೆದ ರಬಸಕ್ಕೆ ಮಹಿಳೆ ಕೆಳಗೆ ಬಿದ್ದಿದ್ದು, ಮಹಿಳೆ ಮೆಲೆ ಲಾರಿ ಟೈರ್ ಹರಿದಿದೆ. ಪರಿಣಾಮ ಸ್ಥಳದಲ್ಲೆ ಮಹಿಳೆ ದುರ್ಮರಣ ಹೊಂದಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ‌ ಡಿಕ್ಕಿ, ಬೈಕ್ ಸವಾರ ಸಾವು

ರಾಯಚೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ‌ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾನ್ವಿ ಪಟ್ಟಣದ ಸರಕಾರಿ ಪದವಿ ಕಾಲೇಜು ಬಳಿ ನಡೆದಿದೆ. ಜಲಾಲಿ(35) ಮೃತ ಬೈಕ್ ಸವಾರ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಲಾರಿ ಕೆಳಗೆ ಸಿಲುಕಿದೆ. ಈ ವೇಳೆ ಜಲಾಲಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿಸಿದ್ದಾರೆ.

Published On - 7:18 pm, Wed, 24 August 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ