ಬಾಕಿ ದರ ನಿಗದಿ ಮಾಡದ ಸಕ್ಕರೆ ಕಾರ್ಖಾನೆ: ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್ ಹೊರತರಲು ರೈತರ ಪ್ರಯತ್ನ

ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬಾಕಿ ದರ ನಿಗದಿ ಮಾಡದ ಸಕ್ಕರೆ ಕಾರ್ಖಾನೆ: ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್ ಹೊರತರಲು ರೈತರ ಪ್ರಯತ್ನ
ಸಂಗ್ರಹ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 10, 2021 | 9:17 PM

ಬಾಗಲಕೋಟೆ: ಬಾಕಿ ಹಣ ಮತ್ತು ದರ ನಿಗದಿ ಮಾಡದ ಹಿನ್ನೆಲೆಯಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ, ಕಾರ್ಖಾನೆ ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್​ಗಳನ್ನು ಹೊರ ತರಲು ಮುಂದಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ನಡೆದಿದೆ. ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನ ಬಾಕಿ ಹಣ ಮತ್ತು ಪ್ರಸಕ್ತ ಸಾಲಿನ ದರ ನಿಗದಿ ಮಾಡಬೇಕೆಂದು ಒತ್ತಾಯಿಸಿದರು. ದರ ನಿಗದಿಗೊಳಿಸುವರೆಗೂ ಕಾರ್ಖಾನೆ ಆರಂಭಿಸಬಾರದು ಎಂದು ಪಟ್ಟು ಹಿಡಿದರು. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಕ್ಕರೆ ಕಾರ್ಖಾನೆಯು ಸಚಿವ ಮುರುಗೇಶ ನಿರಾಣಿ ಒಡೆತನದಲ್ಲಿದೆ. ಬಾಕಿ ಹಣ ಮತ್ತು ದರ ನಿಗದಿ ಮಾಡುವವರೆಗೂ ಕಾಖಾ೯ನೆ ಆರಂಭಿಸಬಾರದು ಎಂದು ಕಬ್ಬು ಬೆಳೆಗಾರ ರೈತರು ಒತ್ತಾಯಿಸುತ್ತಿದ್ದಾರೆ. ಕಾಖಾ೯ನೆ ಸುತ್ತಮುತ್ತ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಬಾಕಿ ಪಾವತಿಗೆ ಸರ್ಕಾರ ಸೂಚನೆ ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು ರೈತರಿಗೆ ಒಟ್ಟು ₹ 42 ಕೋಟಿ ಪಾವತಿಸುವುದನ್ನು ಬಾಕಿ ಉಳಿಸಿಕೊಂಡಿವೆ. ಶೀಘ್ರ ಬಾಕಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಈಚೆಗೆ ತಾಕೀತು ಮಾಡಿದ್ದರು. ಪ್ರಸ್ತಕ ಸಾಲಿನಲ್ಲಿ ಸಾಲಿನಲ್ಲಿ ಕಬ್ಬು ಅರೆಯುವಿಕೆ ಪ್ರಾರಂಭಿಸಲು ಪೂರ್ವ ಸಿದ್ಧತಾ ಯೋಜನೆಗಳು, ಕಾರ್ಖಾನೆಗಳ ಕಾರ್ಯ, ದೊರೆಯಬಹುದಾದ ಕಬ್ಬಿನ ಲಭ್ಯತೆಯನ್ನೂ ಸಚಿವರು ಚರ್ಚಿಸಿದ್ದರು.

ಇದನ್ನೂ ಓದಿ: ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ಅಸಮಾಧಾನ; ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಇದನ್ನೂ ಓದಿ: ರೈತರಿಗೆ ಹಣ ಪಾವತಿ ಬಾಕಿ ಇಟ್ಟುಕೊಂಡಿರುವ 7 ಸಕ್ಕರೆ ಕಾರ್ಖಾನೆಗಳಿಗೆ 2 ದಿನ ಗಡುವು ನೀಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ