AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕೆಪಿಎಸ್ ಚುನಾವಣೆ: ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆಯ ರನ್ನಬೆಳಗಲಿ ಗ್ರಾಮದಲ್ಲಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದು, ಅಕ್ಟೋಬರ್ 29ರಂದು ನಡೆದ ಘಟನೆ ವಿಡಿಯೋ ಈಗ ವೈರಲ್​ ಆಗಿದೆ.

ಪಿಕೆಪಿಎಸ್ ಚುನಾವಣೆ: ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾರಾಮಾರಿ
ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 02, 2025 | 2:55 PM

Share

ಬಾಗಲಕೋಟೆ, ನವೆಂಬರ್​ 02: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ಅಧ್ಯಕ್ಷ‌-ಉಪಾಧ್ಯಕ್ಷರ ಚುನಾವಣೆ ವೇಳೆ ಬಟ್ಟೆ ಹರಿಯುವ ರೀತಿ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಬಾಗಲಕೋಟೆಯ  ರನ್ನಬೆಳಗಲಿ ಗ್ರಾಮದಲ್ಲಿ ಅಕ್ಟೋಬರ್ 29ರಂದು ಘಟನೆ ನಡೆದಿದ್ದು, ಮಾರಾಮಾರಿಯ ವಿಡಿಯೋ ಈಗ ವೈರಲ್​ ಆಗಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಅ.29ರಂದು ನಿಗದಿಯಾಗಿತ್ತು. ಒಟ್ಟು 13 ಜನ ಸದಸ್ಯರ ಬಲ ಹೊಂದಿರುವ ಪಿಕೆಪಿಎಸ್​ಗೆ 6 ಜನ ಬಿಜೆಪಿ ಬೆಂಬಲಿತ, 6 ಜನ ಕಾಂಗ್ರೆಸ್​ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಇತರೆ ಓರ್ವ ಅಖಾಡದಲ್ಲಿದ್ದರು. ಆ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಗದೀಶ್​ ಮಾಳಗಿ, ಹರಳಯ್ಯ ಎಂಬುವರನ್ನು ಬಿಜೆಪಿಯವರು ಆಪರೇಷನ್ ಮೂಲಕ ಸೆಳೆದಿದ್ದಾರೆ. ಇವರಿಬ್ಬರು ಮತದಾನ ಮಾಡಲು ಪಿಕೆಪಿಎಸ್ ಕಚೇರಿಗೆ ಬಂದಾಗ ಅವರನ್ನ ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಇದೇ ವಿಚಾರಕ್ಕೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮಾರಾಮಾರಿ ನಡೆದಿದೆ.

ಇದನ್ನೂ ಓದಿ: ಮದುವೆಯಾಗು ಎಂದಿದ್ದಕ್ಕೆ ಮಹಿಳೆಯನ್ನ ಎಂಟು ಬಾರಿ ಚುಚ್ಚಿಕೊಂದ ಪ್ರೇಮಿ

ಕಟ್ಟಿಗೆ-ಕೋಲುಗಳಿಂದ ಪರಸ್ಪರ ಹಲ್ಲೆ

ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು ಮಾತ್ರವಲ್ಲದೆ ಕಟ್ಟಿಗೆ-ಕೋಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ವೇಳೆ ಉದ್ರಿಕ್ತರ ನಿಯಂತ್ರಣಕ್ಕೆ ಮುಧೋಳ ಪೊಲೀಸರು ಹರಸಾಹಸಪಟ್ಟಿದ್ದು, ಅಂತಿಮವಾಗಿ ಲಘುಲಾಠಿ ಪ್ರಹಾರ ಮಾಡಿ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯನ್ನ ಮುಂದೂಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Sun, 2 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್