ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಸಹೋದರನ ವಿರುದ್ಧ ಎಫ್​​ಐಆರ್

ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಸಹೋದರನ ವಿರುದ್ಧ ಎಫ್​​ಐಆರ್
ಮಾಜಿ ಸಚಿವ ಮುರುಗೇಶ್ ನಿರಾಣಿ
Edited By: Rakesh Nayak Manchi

Updated on: Aug 28, 2023 | 10:25 PM

ಬಾಗಲಕೋಟೆ, ಆಗಸ್ಟ್ 28: ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಂದು ಬೆಳಗ್ಗೆ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿತ್ತು. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅಯ್ಯೋ ಶಿವನೇ! ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಮೀಟರ್​ ರೀಡರ್​ ಮೇಲೆ ಹಲ್ಲೆ

ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಹನುಮಂತ ಶಿಂಧೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂದು ಬೆಳಿಗ್ಗೆ 10,10 ಕ್ಕೆ ನಾನು, ಯಲ್ಲಪ್ಪ ಹೆಗಡೆ, ಡ್ರೈವರ್, ಇನ್ನಿಬ್ಬರು ಬೀಳಗಿಯಲ್ಲಿ ಭಿಕ್ಷಾಟನೆ ಕಾರ್ಯಕ್ರಮಕ್ಕೆ ಹೊರಟಿದ್ದೆವು. ಇಂಗಳಗಿ ರಸ್ತೆ ಬೈಪಾಸ್ ರೋಡ್ ಬ್ರೆಕ್ ಹತ್ತಿರ ಮುರುಗೇಶ್ ರುದ್ರಪ್ಪ ನಿರಾಣಿ, ಸಂಗಮೇಶ್ ರುದ್ರಪ್ಪ ನಿರಾಣಿ ಇವರು ಆರು ಜನ ಮುಖವಾಡ ಧರಿಸಿರುವ ಗೂಂಡಾಗಳನ್ನು ಬೊಲೆರೊ ಗಾಡಿಯಲ್ಲಿ ಕಳಿಸಿ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Mon, 28 August 23

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us