Tammannappa Budni: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತಾಂಬೆಯ ಪಾದ ಸೇರಿದ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬಡ್ನಿ

94 ವರ್ಷದ ತಮ್ಮಣ್ಣಪ್ಪ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಚಕಂಡಿ ಗ್ರಾಮದವರು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಜ್ಯದಲ್ಲಿ ನಾವು ಕಾಣಬಹುದಿದ್ದ ಕೆಲವೇ ಕೆಲವು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಇವರೂ ಒಬ್ಬರು.

Tammannappa Budni: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತಾಂಬೆಯ ಪಾದ ಸೇರಿದ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬಡ್ನಿ
ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬಡ್ನಿ
TV9kannada Web Team

| Edited By: Ayesha Banu

Aug 16, 2022 | 5:53 PM


ಬೆಂಗಳೂರು: ಭಾರತ ತನ್ನ 75ನೇ ಸ್ವಾತಂತ್ರ್ಯೋತ್ಸವವನ್ನು(Independence Day 2022) ಆಚರಿಸುತ್ತಿದ್ದ ಸಂದರ್ಭದಲ್ಲೇ ಸ್ವಾತಂತ್ರ್ಯ ದಿನದಂದು ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬಡ್ನಿ(94)(Tammannappa Budni) ಸೋಮವಾರ ಕೊನೆಯುಸಿರೆಳೆದಿದ್ದಾರೆ. ತಮ್ಮಣ್ಣಪ್ಪರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಟ್ವೀಟ್ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತಮ್ಮಣ್ಣಪ್ಪ ಬಡ್ನಿ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯುವ ನಿರೀಕ್ಷೆಯಿದೆ.

94 ವರ್ಷದ ತಮ್ಮಣ್ಣಪ್ಪ ಅವರು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಚಕಂಡಿ ಗ್ರಾಮದವರು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಜ್ಯದಲ್ಲಿ ನಾವು ಕಾಣಬಹುದಿದ್ದ ಕೆಲವೇ ಕೆಲವು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಇವರೂ ಒಬ್ಬರು. ಇವರು ಗಾಂಧಿ ತತ್ವಗಳ ಅನುಯಾಯಿ ಮತ್ತು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ವಿನೋಭಾ ಭಾವೆ ಅವರ ಕಟ್ಟಾ ಬೆಂಬಲಿಗರಾಗಿದ್ದರು. 1947 ರಲ್ಲಿ ಭಾರತವು ಬ್ರಿಟಿಷ್ ಸರ್ಕಾರದಿಂದ ಸ್ವಾತಂತ್ರ್ಯವನ್ನು ಸಾಧಿಸಿದಾಗ ತಮ್ಮಣ್ಣಪ್ಪ ಬಡ್ನಿ ಅವರಿಗೆ 24 ವರ್ಷ ವಯಸ್ಸಾಗಿತ್ತು.

ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮಣ್ಣಪ್ಪ ಬಡ್ನಿ ಅವರ ನಿಧನಕ್ಕೆ ಟ್ವೀಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಶ್ರೀ ತಮ್ಮಣ್ಣಪ್ಪ ಬುದ್ನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಬಾಗಲಕೋಟೆಯವರಾದ ಶ್ರೀಯುತರು ಅಪ್ರತಿಮ ದೇಶಭಕ್ತ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದರು ಹಾಗೂ ವಿನೋಬಾ ಭಾವೆ ಅವರ ಕಟ್ಟಾ ಅನುಯಾಯಿ ಆಗಿದ್ದರು. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಟ್ವೀಟ್ ಮಾಡಿದ್ದು ಬಾಗಲಕೋಟೆಯ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ, ಅಪ್ಪಟ ಗಾಂಧಿವಾದಿ ಶ್ರೀ ತಮ್ಮಣ್ಣಪ್ಪ ಬುದ್ನಿ ಅವರ ನಿಧನರಾದ ವಾರ್ತೆ ತೀವ್ರ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಬಂಧು ವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಫೇಸ್ ಬುಕ್ ಮೂಲಕ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada