AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯ ಕೆರೂರಿನಲ್ಲಿ ಗುಂಪು ಘರ್ಷಣೆ ಪ್ರಕರಣ: ಚಾಕು ಇರಿತಕ್ಕೆ ಒಳಗಾದ ಅರುಣ ಕಟ್ಟಿಮನಿ ಮೊದಲ ಪ್ರತಿಕ್ರಿಯೆ

ನಾನು ಹಿಂದು ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ನಾನು ಅನೇಕ ಹಿಂದು ಧರ್ಮದ ಪರವಾಗಿ ಹೋರಾಟ ಮಾಡುತ್ತಾ ಬಂದವನು. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.

ಬಾಗಲಕೋಟೆಯ ಕೆರೂರಿನಲ್ಲಿ ಗುಂಪು ಘರ್ಷಣೆ ಪ್ರಕರಣ: ಚಾಕು ಇರಿತಕ್ಕೆ ಒಳಗಾದ ಅರುಣ ಕಟ್ಟಿಮನಿ ಮೊದಲ ಪ್ರತಿಕ್ರಿಯೆ
ಹಿಂದು ಜಾಗರಣವೇದಿಕೆ ಜಿಲ್ಲಾ ಕಾರ್ಯದರ್ಶಿ ಅರುಣ ಕಟ್ಟಿಮನಿ
TV9 Web
| Edited By: |

Updated on: Jul 10, 2022 | 11:02 AM

Share

ಬಾಗಲಕೋಟೆ: ಕೆರೂರು ಘರ್ಷಣೆ (Clash) ವಿಚಾರ ಹಿನ್ನೆಲೆ ಚಾಕು ಇರಿತಕ್ಕೆ ಒಳಗಾದ ಹಿಂದು ಜಾಗರಣವೇದಿಕೆ ಜಿಲ್ಲಾ ಕಾರ್ಯದರ್ಶಿ ಅರುಣ ಕಟ್ಟಿಮನಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ನಾನು ಯಂಡಿಗೇರಿ ಗ್ರಾಮಕ್ಕೆ ಹೊರಟಿದ್ದೆ. ಅದಕ್ಕಾಗಿ ಕೆರೂರು ಬಸ್ ನಿಲ್ದಾಣಕ್ಕೆ ಹೋಗಿದ್ದೆ. ಆಗ ಒಬ್ಬ ಹೆಣ್ಣುಮಗಳು ಬುರ್ಖಾ ಹಾಕಿಕೊಂಡು ನನ್ನ ಬಳಿ ಬಂದಳು. ನನ್ ಮಗನನ್ನ ಯಾಕೆ ಹೊಡೆದೆ ಅಂತ ಕೇಳಿದಳು. ನಿಮ್ ಮಗನನ್ನು ನಾನ್ಯಾಕೆ ಹೊಡಿಲಿ ಅಂತ ಹೇಳಿದೆ. ಆಗ ಆಕೆಯ ಮಗ ಹಿಂದೆಯಿಂದ  ನನ್ನ ಮೇಲೆ ಹಲ್ಲೆ ಮಾಡೋಕೆ ಬಂದ. ಆಗ ಆತನ ತಾಯಿ ಎಳನೀರು ಕಡಿಯುವ ಮಚ್ಚು ತಂದು ಮಗನಿಗೆ ಕೊಟ್ಟಳು. ನನ್ನ ಭುಜ ಹಾಗೂ ತಲೆಗೆ ಆಕೆಯ ಮಗ ಹೊಡೆದ. ನಂತರ ಒಮ್ಮೆಲೆ 30 ಜನರು ದಾಳಿ ಮಾಡಿದರು. ತಲೆ ಒಡೆದು ತೀವ್ರ ರಕ್ತಸ್ರಾವವಾಯಿತು ಎಂದು ಅರುಣ ಕಟ್ಟಿಮನಿ ಹೇಳಿದರು.

ಇದನ್ನೂ ಓದಿ: ಬಾಗಲಕೋಟೆ: ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ಘರ್ಷಣೆ, ಉದ್ವಿಗ್ನ ವಾತಾವರಣ, ಶಾಲೆಗಳಿಗೆ ರಜೆ

ನಾನು ಹಿಂದು ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ನಾನು ಅನೇಕ ಹಿಂದು ಧರ್ಮದ ಪರವಾಗಿ ಹೋರಾಟ ಮಾಡುತ್ತಾ ಬಂದವನು. ಹಿಂದೆ ಕನ್ಹಯ್ಯಾಲಾಲ್ ಹತ್ಯೆಯನ್ನು ಖಂಡಸಿ ಹೋರಾಟ ಮಾಡಿದ್ದೆ. ಹಿಂದು ಹೋರಾಟದಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದರು. ಇನ್ನು ಘಟನಾ ಸ್ಥಳದಲ್ಲಿ ಐದು ಪೊಲೀಸ್ ಸಿಬ್ಬಂದಿಗಳಿದ್ದರು.

ಇದನ್ನೂ ಓದಿ: ಬಾಗಲಕೋಟೆ ಕೆರೂರಿನಲ್ಲಿ ಹಿಂದೂ-ಮುಸ್ಲಿಂ ಯುವಕರ ನಡುವೆ ಘರ್ಷಣೆ ಪ್ರಕರಣ; ಯುವತಿಯರನ್ನು ಚೂಡಾಯಿಸಿದ್ದೇ ಗಲಾಟೆಗೆ ಕಾರಣ!

ಎಎಸ್ ಐ ಪಠಾಣ್, ಕಾನ್ಸ್ಟೇಬಲ್​​ಗಳಾದ ಚಂದ್ರಶೇಖರ್, ಮಲ್ಲು ಪೂಜಾರಿ, ರಮೇಶ್ ದೊಡ್ಡಮನಿ, ಶಶಿಕುಮಾರ ಮಸೂತಿ ಸ್ಥಳದಲ್ಲಿದ್ದರು. ಅವರಿಗೆ ಸರ್ ನನ್ನ ಮರ್ಡರ್ ಮಾಡುತ್ತಾರೆ ಅಂತ ಹೇಳಿದೆ. ಆದರೂ ಅವರು ಕೇರ್ ಮಾಡಲಿಲ್ಲ ಎಂದು ಅರುಣ ಕಟ್ಟಿಮನಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಜುಲೈ 6ರಂದು ನಡೆದಿತ್ತು. ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ, ಯಮನೂರ ಚುಂಗಿನ ಮೇಲೆ‌ ಹಲ್ಲೆ ಮಾಡಲಾಗಿತ್ತು.

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ