ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!

Bagalakot News: ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಬದಲು, ಯಾವುದೇ ಅರ್ಹತೆ ಇಲ್ಲದ ಅವರ ಪತ್ನಿಯೇ ರೋಗಿಗಳಿಗೆ ಹಾಗೂ ಗರ್ಭಿಣಿಯರಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಇದೇ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಯನ್ನು ಸ್ಥಳೀಯರು ತರಾಟೆಗೂ ಪಡೆದಿದ್ದು, ಈ ಸಂಬಂಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ!
ವೈದ್ಯರ ಬದಲು ಅವರ ಪತ್ನಿಯಿಂದ ರೋಗಿಗಳಿಗೆ ಚಿಕಿತ್ಸೆ!
Image Credit source: Tv9 Kannada
Edited By:

Updated on: Jun 24, 2026 | 2:25 PM

ಮುಖ್ಯಾಂಶಗಳು

  • ವೈದ್ಯರ ಬದಲು ಅವರ ಪತ್ನಿಯಿಂದ ರೋಗಿಗಳಿಗೆ ಚಿಕಿತ್ಸೆ!
  • ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದದ ವಿರುದ್ಧ ಆರೋಪ
  • ಈ ಸಂಬಂಧ ಸೂಕ್ತ ಕಾನೂನು ಕ್ರಮಕ್ಕೆ ಸ್ಥಳೀಯರ ಆಗ್ರಹ

ಬೆಂಗಳೂರು, ಜೂನ್​​ 24: ಖಾಸಗಿ ಕ್ಲಿನಿಕ್​​ಗಳಿಗೆ ಹೋಗೋಣ ಎಂದರೆ ನಕಲಿ ಡಾಕ್ಟರ್​​ಗಳ ಹಾವಳಿ ಕಾರಣ ಮೊದಲೇ ಕಂಗಾಲಾಗಿರುವ ಜನರು ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲೆ ಅಲ್ಪಸ್ವಲ್ಪ ನಂಬಿಕೆ ಉಳಿಸಿಕೊಂಡಿದ್ದರು. ಆದರೆ ಬಾಗಲಕೋಟೆಯಲ್ಲಿ ನಡೆದಿರುವ ಘಟನೆ ಇನ್ನು ಯಾರನ್ನು ನಂಬಬೇಕು ಎಂಬ ಪ್ರಶ್ನೆಯನ್ನು ಸಾರ್ವಜನಿಕರಲ್ಲಿ ಹುಟ್ಟುಹಾಕಿದೆ. ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಬದಲು ಅವರ ಪತ್ನಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿಬಂದಿದೆ.

ಸ್ಥಳೀಯರ ಆಕ್ರೋಶ

ಹೌದು, ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರೋದು ಹೆಚ್. ವಿ. ಲೇಬಗಿರಿ. ಆದರೆ ಆಸ್ಪತ್ರೆಗೆ ಸಂಬಂಧಪಟ್ಟ ಯಾವುದೇ ಹುದ್ದೆಯಲ್ಲಿ ಇಲ್ಲದ ಅವರ ಪತ್ನಿ ರೋಗಿಗಳಿಗೆ ಚಿಕಿತ್ಸೆ ಮತ್ತು ಔಷಧ ವಿತರಣೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪತಿ ಜೊತೆಗೆ ಆಸ್ಪತ್ರೆಗೆ ಬಂದು ವೈದ್ಯರ ರೀತಿ ಚೇರ್​​ನಲ್ಲಿ ಕೂರುವ ಆಕೆ ಬರುವ ರೋಗಿಗಳ ತಪಾಸಣೆ ಮಾಡುತ್ತಾರಂತೆ. ಸಾಮಾನ್ಯ ರೋಗಿಗಳಿಗೆ ಮಾತ್ರವಲ್ಲದೆ ಗರ್ಭಿಣಿಯರಿಗೂ ವೈದ್ಯರ ಪತ್ನಿ ಚಿಕಿತ್ಸೆ ನೀಡುತ್ತಾರೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಏನಾದರೂ ವ್ಯಕ್ತಿರಿಕ್ತ ಪರಿಣಾಮವಾದರೆ ಯಾರು ಹೊಣೆ ಎಂದು ಸ್ಥಳೀಯರು ಆಕ್ರೋಶ ವ್ತಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ; ಹೇಳೋರು ಇಲ್ಲ ಕೇಳೋರು ಇಲ್ಲ!

ಇನ್ನು ಇದೇ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿ ಹೆಚ್. ವಿ. ಲೇಬಗಿರಿ ಅವರನ್ನು ಸ್ಥಳೀಯರು ತರಾಟೆಗೆ ಪಡೆದ ಘಟನೆಯೂ ನಡೆದಿದೆ. ಈ ವೇಳೆ ಪ್ರಿಸ್ಕ್ರಿಪ್ಶನ್​​ನಲ್ಲಿ ಇರೋದು ತನ್ನ ಪತ್ನಿಯ ಬರಹ ಅಲ್ಲವೇ ಅಲ್ಲ ಎಂದು ವಾದಿಸಿರುವ ಲೇಬಗಿರಿ ಅವರು ವಾದಿಸಿದರೆ, ಮೊಬೈಲ್​​ನಲ್ಲಿ ಮಾತನಾಡುವ ನೆಪದಲ್ಲಿ ವೈದ್ಯಾಧಿಕಾರಿಯ ಪತ್ನಿ ಆಸ್ಪತ್ರೆಯಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Loading...
Unable to load recommendations.
Follow Us