AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆ ಗೇಟ್ ಬಿದ್ದು ದುರಂತ: ನಾಲ್ವರು ಮಕ್ಕಳಿಗೆ ಗಾಯ; ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ

ಬಾಗಲಕೋಟೆ ಜಿಲ್ಲೆಯ ಬಲಕುಂದಿ ಸರ್ಕಾರಿ ಶಾಲೆಯಲ್ಲಿ ಗೇಟ್ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗೊಂಡಿರುವ ಘಟನೆ ನಡೆದಿದೆ. ನಾಲ್ವರ ಪೈಕಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಗಾಯಗಾಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಓರ್ವ ಆಯಾಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ಸುರಕ್ಷತಾ ಕ್ರಮಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆ ಗೇಟ್ ಬಿದ್ದು ದುರಂತ: ನಾಲ್ವರು ಮಕ್ಕಳಿಗೆ ಗಾಯ; ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯ
ಶಾಲೆ ಗೇಟ್ ಬಿದ್ದು ದುರಂತImage Credit source: tv9 kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 06, 2026 | 4:19 PM

Share

ಮುಖ್ಯಾಂಶಗಳು

  • ಸರ್ಕಾರಿ ಶಾಲೆ ಗೇಟ್ ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
  • ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಘಟನೆ
  • ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಾಗಲಕೋಟೆ, ಜುಲೈ 06: ಸರ್ಕಾರಿ ಶಾಲೆಯ ಗೇಟ್ ಬಿದ್ದು (School Gate Fall) ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಾಲ್ವರು ಪೈಕಿ ಓರ್ವ ವಿದ್ಯಾರ್ಥಿನಿಗೆ ತೀವ್ರ ಸ್ವರೂಪದ ಗಾಯವಾಗಿ ರಕ್ತ ಸೋರಿಕೆ ಆಗಿದ್ದು, ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿಗೆ ಇಳಕಲ್​​​ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡೆದಿದ್ದೇನು?

ಗೇಟ್​ ತೆರೆಯುವಾಗ ಕೊಂಡಿ ಕಳಚಿ ಸುಮಾರು 5 ಕ್ವಿಂಟಲ್ ಭಾರದ ಗೇಟ್​​ ಬಿದ್ದಿದೆ. ನಯನಾಕುಮಾರಿ ಎಂಬ ವಿದ್ಯಾರ್ಥಿನಿ ಮೇಲೆಯೇ ಗೇಟ್ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದಾಳೆ. ಸದ್ಯ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳು ಸೇರಿದಂತೆ ಓರ್ವ ಆಯಾಗೂ ಗಾಯವಾಗಿದೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಇಲಕಲ್ ಬಿಇಓ ಜಾಸ್ಮಿನ್ ಕಿಲ್ಲೇದಾರ್​ ವಿದ್ಯಾರ್ಥಿನಿ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!

ಇನ್ನು ಮೂರನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ನಯನಾಕುಮಾರಿಯ ಪೋಷಕರು ಉತ್ತರ ಪ್ರದೇಶದಿಂದ ಬಲಕುಂದಿಗೆ ಬಂದು ನೆಲೆಸಿದ್ದಾರೆ. ವಿದ್ಯಾರ್ಥಿನಿ ತಂದೆ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಮಗಳು ಸಂಪೂರ್ಣ ಗುಣಮುಖಳಾಗಿ ಬರಬೇಕು ಎನ್ನುತ್ತಿದ್ದಾರೆ ಪೋಷಕರು. ಇನ್ನು ಇತ್ತ ಶಾಲೆಯಲ್ಲಿ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮುಂದುವರಿದ ಮಳೆ ಅಬ್ಬರ: 9 ಫಾಲ್ಸ್​ಗಳಿಗೆ ನಿರ್ಬಂಧ

ಪಶ್ಚಿಮಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಮುಖ 9 ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮಳೆಯಿಂದಾಗಿ ಜಲಪಾತಗಳಲ್ಲಿ ನೀರಿನ ಹರಿವು ಅಪಾಯಕಾರಿ ಮಟ್ಟಕ್ಕೆ ಏರಿಕೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ  ಮಹತ್ವದ ಆದೇಶ ಹೊರಡಿಸಿದ್ದಾರೆ. ಪ್ರಖ್ಯಾತ ಪ್ರವಾಸಿ ತಾಣಗಳಾದ ಬೆಟಣೆ ಜಲಪಾತ, ಚಿಕಲೆ ಜಲಪಾತ, ಚೋರ್ಲಾ ಜಲಪಾತ ಹಾಗೂ ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು ಒಂಬತ್ತು ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ