
ಬಾಗಲಕೋಟೆ, (ಆಗಸ್ಟ್ 09): ಸಹಪಾಠಿಗಳ ರ್ಯಾಗಿಂಗ್ ಗೆ (Raging) ಮನನೊಂದ ಎಂಎ ಅಂತಿಮ ವರ್ಷದ ವಿದ್ಯಾರ್ಥಿನಿ (Student) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ (Baglkot) ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ರ್ಯಾಗಿಂಗ್ ಬಗ್ಗೆ ಡೆತ್ ನೋಟ್ (Death Note) ಬರೆದಿಟ್ಟು ಅಂಜಲಿ ಮುಂಡಾಸ(21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಅಂಜಲಿ, ನಿನ್ನೆ ಕಾಲೇಜಿನಲ್ಲಿ ನಡೆದ ರ್ಯಾಗಿಂಗ್, ಮಾನಸಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಾವಿಗೆ ಶರಣಾಗಿದ್ದಾರೆ. ಇನ್ನು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರ ಹೆಸರು ಹಾಗೂ ಅವರ ಮೊಬೈಲ್ ನಂಬರ್ ಬರೆದಿಟ್ಟಿದ್ದಾಳೆ.
ನನ್ನ ಸಾವಿಗೆ ಕಾರಣ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಕಾರಣ. ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ, ನನಗೆ ಮಾರಕವಾಗಿದ್ದಾರೆ. ಇವರನ್ನು ಸುಮ್ಮನೆ ಬಿಡಬೇಡಿ. ಗುಡ್ ಬೈ ಎಂದು ಸಹಿ ಮಾಡಿ ಆತ್ಮಹತ್ಯಗೆ ಶರಣಾಗಿದ್ದಾಳೆ. ಈ ಸಂಬಂಧ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಾಲೇಜಿನ ಓರ್ವ ವಿದ್ಯಾರ್ಥಿ ಜೊತೆ ಸ್ನೇಹಕ್ಕೆ ಅಪಾರ್ಥ ಕಲ್ಪಿಸಿ ಒಂದು ತಾಸು ಕೊಠಡಿಯಲ್ಲಿ ಕೂಡಿ ಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಿಯುಸಿ ಕಾಲೇಜು ರೂಮ್ ನಂ 21ಕ್ಕೆ ಕರೆದೊಯ್ದು ರ್ಯಾಗಿಂಗ್ ಮಾಡಿರುವ ಆರೋಪಿಸಲಾಗಿದ್ದು, ಸದ್ಯ ಪೊಲೀಸರು ಕಾಲೇಜಿನ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.
ನನ್ನ ಸಾವಿಗೆ ಕಾರಣವಾದ ಈ ಮೂವರು ವ್ಯಕ್ತಿಗಳು ನನ್ನ ಬದುಕಿನಲ್ಲಿ ಪರಿಣಾಮವನ್ನು ಬೀರಿದ್ದಾರೆ.ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು ನನ್ನ ಬಗ್ಗೆ ನನ್ನನ್ನು ಮಾನಸೀಕವಾಗಿ ಕುಗ್ಗಿಸಿದ್ದಾರೆ. ಮತ್ತು ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. Saying Good Bye ಎಂದು ಸಹಿ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:12 pm, Sat, 9 August 25