ಪತಿ ನೇಣು ಹಾಕಿಕೊಂಡಿದ್ದನ್ನು ಕಂಡು ಪತ್ನಿಯೂ ಆತ್ಮಹತ್ಯೆ: ಸಂಸಾರದಲ್ಲಿ ಆಗಿದ್ದೇನು?

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೊದಲು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಪತ್ನಿ ಕೂಡ ನೇಣು ಬಿಗಿದುಕೊಂಡಿದ್ದಾರೆ. ಸದ್ಯ ಘಟನೆ ಸಂಬಂಧ FIR ದಾಖಲಾಗಿದ್ದು, ಮುಧೋಳ ಪೊಲೀಸರು ತನಿಖೆ ನಡೆಸಿದ್ದಾರೆ.

ಪತಿ ನೇಣು ಹಾಕಿಕೊಂಡಿದ್ದನ್ನು ಕಂಡು ಪತ್ನಿಯೂ ಆತ್ಮಹತ್ಯೆ: ಸಂಸಾರದಲ್ಲಿ ಆಗಿದ್ದೇನು?
ದಂಪತಿ ಆತ್ಮಹತ್ಯೆ
Edited By:

Updated on: Nov 20, 2026 | 7:17 PM

ಬಾಗಲಕೋಟೆ, ನವೆಂಬರ್​ 20: ಕೌಟುಂಬಿಕ ಕಲಹ ಹಿನ್ನೆಲೆ ಪತಿ ಮತ್ತು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಶಿ ಶಿವಪ್ಪ ನಡುವಿನಮನಿ (35) ಮತ್ತು ರಾಜೇಶ್ವರಿ ನಡುವಿನಮನಿ (30) ಮೃತಪಟ್ಟ ದಂಪತಿ. ಗುರುವಾರ ರಾತ್ರಿ ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಆತ್ಮಹತ್ಯೆ ಮಾಡಿಕೊಂಡಿರುವ ಅಪ್ಪಾಶಿ ನಡುವಿನಮನಿ ಮತ್ತು ಪತ್ನಿ ರಾಜೇಶ್ವರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಕುಳಲಿಯ ನಿವಾಸಿಗಳು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Loading...

ಇದನ್ನೂ ಓದಿ: ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ: 15 ಕಿಮೀ ಬೈಕ್‌ನಲ್ಲಿ ಶವ ಹೊತ್ತೊಯ್ದು ವಿಲಕ್ಷಣ ಕೃತ್ಯ!

ಬೆಳಗಿನ ಜಾವ 3ರಿಂದ 3.30ರ ನಡುವೆ ಮೊದಲು ಅಪ್ಪಾಶಿ ಅವರು ಮನೆಯ ಹೊರಗಿರುವ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಆತ್ಮಹತ್ಯೆಯನ್ನು ಕಂಡ ಪತ್ನಿ ರಾಜೇಶ್ವರಿ ಕೂಡ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಂಪತಿ ಆತ್ಮಹತ್ಯೆ ಬಗ್ಗೆ ಎಸ್​​ಪಿ ಸಿದ್ದಾರ್ಥ ಗೋಯಲ್ ಹೇಳಿದ್ದಿಷ್ಟು 

ಇನ್ನು ಘಟನೆ ಬಗ್ಗೆ ಬಾಗಲಕೋಟೆ ಎಸ್​​ಪಿ ಸಿದ್ದಾರ್ಥ ಗೋಯಲ್​​ ಪ್ರತಿಕ್ರಿಯಿಸಿದ್ದು, ‘ಗುರುವಾರ ರಾತ್ರಿ ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಳಲಿ ಗ್ರಾಮದ ತೋಟದ ಮನೆಯಲ್ಲಿ ಗಂಡ-ಹೆಂಡತಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ 3 ರಿಂದ 3:30ರ ನಡುವೆ ಘಟನೆ ನಡೆದಿದೆ. ಮೊದಲು ಪತಿ ಮನೆಯ ಹೊರಗಡೆ ದನದ ಶೆಡ್‌ನಲ್ಲಿ ನೇಣು ಹಾಕಿಕೊಂಡಿದ್ದಾರೆ. ಇದನ್ನು ನೋಡಿ ಬೇಜಾರಾದ ಪತ್ನಿ ಕೂಡ ಮನೆಯೊಳಗೆ ನೇಣು ಹಾಕಿಕೊಂಡಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಟ್ರಂಕ್​​​ನಲ್ಲಿ ಪತ್ತೆ: ಹಣ ವರ್ಗಾವಣೆಯಿಂದಲೇ ಕೊಲೆ ರಹಸ್ಯ ಬಯಲು

‘ಇನ್ನು ಮುಧೋಳ ಠಾಣೆಯಲ್ಲಿ ಪತ್ನಿಯ ಮನೆಯವರ ಕಡೆಯಿಂದ ದೂರು ಪಡೆದು ಎಫ್​ಐಆರ್​ ಮಾಡಲಾಗಿದೆ. ಘಟನೆಗೆ ಏನು ಕಾರಣ ಎಂಬ ಬಗ್ಗೆ ಮುಂದಿನ ತನಿಖೆಯಿಂದ ತಿಳಿಯಲಿದೆ’ ಎಂದು ಎಸ್​​ಪಿ ಸಿದ್ದಾರ್ಥ ಗೋಯಲ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Loading...
Unable to load recommendations.
Follow Us