AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಲಿಯಿಂದ ಹೆಂಡ್ತಿಯನ್ನು ಕೊಚ್ಚಿ ಕೊಂದ ಪತಿ: ಆರೋಪಿಗೆ ಜಾಮೀನಾಗಬಾರದೆಂದು ಗ್ರಾಮದಲ್ಲಿ ಡಂಗುರ

ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಿಸ್ನಾಳ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಪರಸಪ್ಪ ಬೀಳಗಿ ಎಂಬಾತ ಮೃತ ಪತ್ನಿ ರೇಖಾ ಬೀಳಗಿ(24)ಅವರನ್ನ ಕೊಡಲಿಯಿದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಅಪರೂಪದ ನಿರ್ಣಯವನ್ನ ಕೈಗೊಂಡಿದ್ದಾರೆ. ಏನದು ಅಂತೀರಾ? ಇಲ್ಲಿದೆ ನೋಡಿ.

ಕೊಡಲಿಯಿಂದ ಹೆಂಡ್ತಿಯನ್ನು ಕೊಚ್ಚಿ ಕೊಂದ ಪತಿ: ಆರೋಪಿಗೆ ಜಾಮೀನಾಗಬಾರದೆಂದು ಗ್ರಾಮದಲ್ಲಿ ಡಂಗುರ
ಆರೋಪಿ ವಿರುದ್ದ ಗ್ರಾಮದಲ್ಲಿ ಡಂಗುರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 05, 2023 | 2:07 PM

Share

ಬಾಗಲಕೋಟೆ: ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಬಿಸ್ನಾಳ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಪರಸಪ್ಪ ಬೀಳಗಿ ಎಂಬಾತ ಪತ್ನಿ ರೇಖಾ ಬೀಳಗಿ(24)ಅವರನ್ನ ಕೊಡಲಿಯಿದ ಕೊಚ್ಚಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೆಲ್ಲರೂ ಸೇರಿ ಅಪರೂಪದ ನಿರ್ಣಯವನ್ನ ಕೈಗೊಂಡಿದ್ದಾರೆ. ತಪ್ಪು ಮಾಡಿದವರು ಯಾರೇ ಆದರೂ, ಆತನಿಗೆ ತಕ್ಕ ಶಿಕ್ಷೆಯಾಗಬೇಕೆಂಬ ನಿಲುವಿನೊಂದಿಗೆ ಒಂದೊಳ್ಳೆ ನಿರ್ಧಾರ ಮಾಡಿದ್ದಾರೆ. ಹೌದು ಕೊಲೆ ಮಾಡಿದ ಪಾಪಿ ಪತಿ ಪರಸಪ್ಪ ಹಾಗೂ ಆತನ ಕುಟುಂಬಸ್ಥರಿಗೆ ಯಾರೂ ಜಾಮೀನಾಗಬಾರದೆಂದು, ಊರಿನ ತುಂಬ ಹಿರಿಯರು ಸೇರಿ ಡಂಗುರ ಹೊಡೆಸಿದ್ದಾರೆ. ಇನ್ನು ಈ ಕೊಲೆ ಕೇಸ್​ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಲಗೆ ಬಾರಿಸಿ ಡಂಗುರ ಸಾರಿದ ವ್ಯಕ್ತಿ

ಎರಡು ವರ್ಷದ ಹಿಂದೆ ಮದುವೆಯಾಗಿದ್ದ. ಜೊತೆಗೆ ಒಂದು ವರ್ಷದ ಮಗು ಕೂಡ ಇತ್ತು. ಈ ಮಧ್ಯೆ ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯನ್ನೇ ಕೊಲೆ ಮಾಡಿದ ಆರೋಪಿಗೆ ಯಾರು ಸಹಾಯ ಮಾಡಬಾರದು ಎಂಬ ನಿರ್ಣಯವನ್ನು ಕೈಗೊಂಡ ಗ್ರಾಮಸ್ಥರು, ಯಾರು ಅವರ ಸಹಾಯಕ್ಕೆ ಹೋಗಬಾರದು ಎಂದು ನಿರ್ಧರಿಸಿದ್ದಾರೆ. ಒಂದು ವೇಳೆ ಜಾಮೀನು ನೀಡುವ ಮೂಲಕ ಅವರಿಗೆ ಸಹಾಯ ಮಾಡಿದ್ದು ಕಂಡುಬಂದರೆ. ಅವರನ್ನೇ ಠಾಣೆಗೆ ಒಪ್ಪಿಸುತ್ತೇವೆ ಎಂದು ಡಂಗುರ ಸಾರಿದ್ದಾರೆ.

ಇದನ್ನೂ ಓದಿ:ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರದ ಹೆನ್ನಾಗರ ಬಳಿಯ A2B ಹೋಟೆಲ್ ಬಳಿ ಕಾರಿನ ಗ್ಲಾಸ್ ಹೊಡೆದು ಹಣ, ಚಿನ್ನಾಭರಣ, ಲ್ಯಾಪ್ಟಾಪ್​ನ್ನು ಕಳ್ಳರು ಎಗರಿಸಿದ ಘಟನೆ ನಿನ್ನೆ(ಜು.4) ಸಂಜೆ ನಡೆದಿದೆ. ಉದ್ಯಮಿ ನವೀನ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, 2 ರೂ ಲಕ್ಷ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ. ರಾತ್ರಿ 7 ಗಂಟೆಯ ಸಮಯದಲ್ಲಿ ಊಟ ಮಾಡಲು ಹೋಟೆಲ್​ಗೆ ತೆರಳಿದ್ದಾಗ, ಕಳ್ಳರು  ಕ್ಷಣಮಾತ್ರದಲ್ಲಿ ಕೈಚಳಕ ತೋರಿಸಿ ಎಸ್ಕೇಪ್ ಆಗಿದ್ದಾರೆ. ಊಟ ಮುಗಿಸಿ ಕಾರ್ ಪಾರ್ಕಿಂಗ್​ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Wed, 5 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್