ಬಾಗಲಕೋಟೆ, ಜುಲೈ.13: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮಾದರಿಯಲ್ಲಿ ಬಾಗಲಕೋಟೆಯಲ್ಲಿ (Bagalkote) ಮತ್ತೊಂದು ವಂಚನೆ ಬಯಲಾಗಿದೆ. ಪ್ರವಾಸೋದ್ಯಮ ಇಲಾಖೆಯ 2,47,73,999 ರೂ. ಹಣ ಅಕ್ರಮ ವರ್ಗಾವಣೆ ಆಗಿದೆ. ಪ್ರವಾಸೋದ್ಯಮ ಇಲಾಖೆಯ ಹಣ ಐಡಿಬಿಐ ಬ್ಯಾಂಕ್ ಖಾತೆ ಮೂಲಕ ವಿವಿಧ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಗಲಕೋಟೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ FIR ದಾಖಲಾಗಿದೆ.
ಜುಲೈ 11 ರಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಎಂಬುವವರು ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. 28-10-2021 ರಿಂದ 22/2/2024ರ ವರೆಗೆ ಡಿಸಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಹೆಸರಲ್ಲಿ ಐಡಿಬಿಐ ಬ್ಯಾಂಕ್ ಖಾತೆ ಮೂಲಕ ವಂಚನೆ ನಡೆದಿದೆ. ಮೊದಲಿಗೆ ಬ್ಯಾಂಕ್ನಲ್ಲಿ ಖಾತೆ ತೆರೆದು ಮೂರು ಅಕೌಂಟ್ ನಂ ನಿಂದ ವಿವಿಧ ಅಕೌಂಟ್ ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು
ಇನ್ನು ಐಡಿಬಿಐ ಬ್ಯಾಂಕ್ ಖಾತೆ ನಂಬರ್ 1 071104000160063 ಮೂಲಕ 28.10.2021 ರಿಂದ 22/2024ರ ವರೆಗೆ ಒಟ್ಟು 1,35,96,500 ರೂ, ಖಾತೆ ನಂ 1071104000165228 ಮೂಲಕ 4-5-2022 ರಿಂದ 7-11-2022 ವರೆಗೆ 1,01,33,750 ರೂ, ಮೂರನೇ ಖಾತೆ 1071104000165501 ಖಾತೆ ಮೂಲಕ 11.10.2022 ರಂದು 10, 43,749 ರೂ. ಸೇರಿ ಒಟ್ಟು 2,47,73,999 ರೂ. ಹಣವನ್ನು 28.10.2021 ರಿಂದ 22-2-2024ರ ವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ಅನುಮತಿಯಿಲ್ಲದೆ, ಇಲಾಖೆ ಅಧಿಕಾರಿಗಳಿಗೆ ಗೊತ್ತಿಲ್ಲದಂತೆ, ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಹಣವನ್ನು ಆರೋಪಿತರು ತಮಗೆ ಬೇಕಾದ ರೀತಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಇಲಾಖೆ ಹಣ ತೆಗೆದುಕೊಂಡು ಸರಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ 1860(us 403,406,409,420) ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:09 am, Sat, 13 July 24