ಬಾಗಲಕೋಟೆ: ನಿಂತ ಟ್ರ್ಯಾಕ್ಟರ್​ಗೆ ಬೈಕ್‌ ಡಿಕ್ಕಿ; ಇಬ್ಬರು ಸಹೋದರರು ಸ್ಥಳದಲ್ಲೇ ಸಾವು

ರಾಜ್ಯಾದ್ಯಂತ ಇಂದು(ಸೆ.06) ಒಂದೇ ದಿನ ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅದರಂತೆ ಇದೀಗ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮಥಾಳ ಕ್ರಾಸ್ ಬಳಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಬಾಗಲಕೋಟೆ: ನಿಂತ ಟ್ರ್ಯಾಕ್ಟರ್​ಗೆ ಬೈಕ್‌ ಡಿಕ್ಕಿ; ಇಬ್ಬರು ಸಹೋದರರು ಸ್ಥಳದಲ್ಲೇ ಸಾವು
ನಿಂತ ಟ್ರ್ಯಾಕ್ಟರ್​ಗೆ ಬೈಕ್‌ ಡಿಕ್ಕಿ; ಇಬ್ಬರು ಸಹೋದರರು ಸ್ಥಳದಲ್ಲೇ ಸಾವು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 06, 2024 | 10:43 PM

ಬಾಗಲಕೋಟೆ, ಸೆ.06: ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮಥಾಳ ಕ್ರಾಸ್ ಬಳಿ ನಡೆದಿದೆ. ಇಳಕಲ್ ಪಟ್ಟಣದ ನಿವಾಸಿಗಳಾದ ಅಮರೇಶ್ ಬೆನಕನಾಳಮಠ(21), ಶರಣಯ್ಯ ಬೆನಕನಾಳಮಠ(19) ಮೃತಪಟ್ಟ ಬೈಕ್ ಸವಾರರು. ಸ್ಥಳಕ್ಕೆ ಅಮೀನಗಢ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಐವರಿಗೆ ಗಂಭೀರ ಗಾಯ

ಹಾವೇರಿ: ಜಿಲ್ಲೆಯ ಹಾನಗಲ್​ ತಾಲೂಕಿನ ಹಿರೂರು ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಐವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಈ ಯುವಕರು ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಹೋಗಿ ಬಿದ್ದಿದೆ. ಗಾಯಾಳು ಯುವಕರಿಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಯುವತಿ ಸಾವು, ಐವರಿಗೆ ಗಾಯ; ಅಪಘಾತದ ದೃಶ್ಯ ಸೆರೆ

ಗದ್ದೆಯಲ್ಲಿ ಉಳುಮೆ ಮಾಡ್ತಿದ್ದಾಗ ಟ್ರ್ಯಾಕ್ಟರ್​ ಪಲ್ಟಿಯಾಗಿ ಚಾಲಕ ಸಾವು

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಂದಿವಾರಪಲ್ಲಿ ಗ್ರಾಮದ ಗದ್ದೆಯಲ್ಲಿ ಉಳುಮೆ ಮಾಡ್ತಿದ್ದಾಗ ಟ್ರ್ಯಾಕ್ಟರ್​ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದಾನೆ. ಟ್ರ್ಯಾಕ್ಟರ್​ ಚಾಲಕ ಜನಾರ್ದನ್(42) ಮೃತ ರ್ದುದೈವಿ. ಈ ಕುರಿತು ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಕ್ಷಿಣೆ ಕಿರುಕುಳ ಆರೋಪ, ಎಂಟು ತಿಂಗಳ ಗರ್ಭಿಣಿ ಆತ್ಮಹತ್ಯೆ

ಮೈಸೂರು: ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಎಂಟು ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕನಕಗಿರಿಯಲ್ಲಿ ಚೈತ್ರಾ ಅಲಿಯಾಸ್​ ಚಿಕ್ಕದೇವಿ(23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗಂಡ ಶರತ್​​ರಾಜುನನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಡ, ಮಾವ ಮುತ್ತುರಾಜ್, ಅತ್ತೆ ಪದ್ಮಾ, ಚಿಕ್ಕತ್ತೆ ಮಂಜು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. 2 ವರ್ಷಗಳ ಹಿಂದೆ ಕನಕಗಿರಿಯ ಶರತ್‌ರಾಜು ಜೊತೆ ವಿವಾಹ ಮಾಡಿಕೊಡಲಾಗಿತ್ತು. ಕಿರುಕುಳ ತಾಳಲಾರದೆ ಚೈತ್ರಾ ಆತ್ಮಹತ್ಯೆ ಎಂದು ಆರೋಪಿಸಿ ನಾಲ್ವರ ವಿರುದ್ಧ ಚೈತ್ರಾ ಪೋಷಕರು ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 pm, Fri, 6 September 24

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ