ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ಸಾವು, ನಾಲ್ವರಿಗೆ ಗಾಯ

ಇತ್ತೀಚೆಗೆ ವಿದ್ಯುತ್​​ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿವೆ. ಅದರಂತೆ ಇಂದು (ಮಂಗಳವಾರ) ಬಾಗಲಕೋಟೆ ಜಿಲ್ಲೆಯ ತೇರದಾಳ(Terdal) ಪಟ್ಟಣದ ದಾಸರಮಡ್ಡಿಯಲ್ಲಿ ತಗಡಿನ ಶೆಡ್ ಮನೆ ಮೇಲೆ ಹೈಟೆನ್ಶನ್ ವಿದ್ಯುತ್ ತಂತಿ ಹರಿದು ಬಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ಸಾವು, ನಾಲ್ವರಿಗೆ ಗಾಯ
ವಿದ್ಯುತ್ ತಗುಲಿ ಇಬ್ಬರು ಸಾವು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 25, 2024 | 5:29 PM

ಬಾಗಲಕೋಟೆ, ಜೂ.25: ತಗಡಿನ ಶೆಡ್ ಮನೆ ಮೇಲೆ ಹೈಟೆನ್ಶನ್ ವಿದ್ಯುತ್ ತಂತಿ ಹರಿದು ಬಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ(Terdal) ಪಟ್ಟಣದ ದಾಸರಮಡ್ಡಿಯಲ್ಲಿ ನಡೆದಿದೆ. ಸಂತೋಷ ಸುಣಗಾರ(22), ಮತ್ತು ಸಂತೋಷ್​ ಅತ್ತೆ ಶೋಭಾ ಹುಲ್ಲೆಣ್ಣವರ (32) ಮೃತರು. ಇನ್ನುಳಿದಂತೆ ಶ್ರೀಕಾಂತ್ , ಮಹೇಶ್, ಕಸ್ತೂರಿ ಹಾಗೂ ಸಂಗೀತಾ ಕಾಮಶೆಟ್ಟಿ ಸೇರಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾತ್ರೆ ಸಂಭ್ರಮದ ಮಧ್ಯೆ ಸಂಭವಿಸಿದ ಅವಘಡ

ದಾಸರಮಡ್ಡಿಯಲ್ಲಿ ದುರ್ಗಾದೇವಿ ಜಾತ್ರೆಯಿತ್ತು. ಜಾತ್ರೆಗೆ ಎಲ್ಲರೂ ಮನೆಯಲ್ಲಿ ಸೇರಿದ್ದರು. ಜೊತೆಗೆ ಮೃತ ಸಂತೋಷ್​ ಹಾಗೂ ಗಾಯಗೊಂಡ ಸಂಗೀತಾ ನಡುವೆ ಎಂಗೇಜ್ ಮೆಂಟ್ ಆಗಿದ್ದು, ಇದೇ‌ ಜೂನ್ 28 ರಂದು ಮದುವೆಯಾಗಲಿದ್ದರು. ಆದರೆ, ಇದೀಗ ಈ ಅವಘಡ ಸಂಭವಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ‌ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ವಿದ್ಯುತ್ ಶಾಕ್​ನಿಂದ ಬಾಲಕ ಸಾವು; ಅಧಿಕಾರಿ, ಸಿಬ್ಬಂದಿ ಸೇರಿ 8 ಮಂದಿ ಸಸ್ಪೆಂಡ್

ವಿದ್ಯುತ್​ ಪ್ರವಹಿಸಿ ರೈತ ಸಾವು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಡೊಣ್ಣೆಗುಡ್ಡ ಗ್ರಾಮದಲ್ಲಿ ವಿದ್ಯುತ್​ ಪ್ರವಹಿಸಿ ರೈತ ಸಾವನ್ನಪ್ಪಿದ್ದಾನೆ. ಗ್ರಾಮದ ದುರಗಪ್ಪ ಗ್ವಾಡಿ(45) ಮೃತ ವ್ಯಕ್ತಿ. ಪಂಪ್​ಸೆಟ್​ ಮೋಟಾರ್​ ಆನ್​ ಮಾಡುವಾಗ ಈ ದುರಂತ ಸಂಭವಿಸಿದೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ವಿದ್ಯುತ್ ಶಾಕ್ ಹೊಡೆದು ಮೂರು ಅಂತಸ್ತಿನಿಂದ ಕೆಳಗೆ ಬಿದ್ದ ಕಾರ್ಮಿಕರು

ಶಿವಮೊಗ್ಗ: ಶಿವಮೊಗ್ಗ ನಗರದ ಕಾಶಿಪುರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ಪಕ್ಕದಲ್ಲೇ ಇದ್ದ ಹೈಟೆನಕ್ಷನ್ ಲೈನ್​ನಿಂದ ವಿದ್ಯುತ್ ಹರಿದು ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡದಿಂದ ಗಣೇಶ್ (26) ಮತ್ತು ರಾಜು(35) ಎಂಬ ಇಬ್ಬರು ಕಾರ್ಮಿಕರು ಬಿದ್ದಿದ್ದಾರೆ. ಮತ್ತೊಬ್ಬ ಕಾರ್ಮಿಕ ವಿದ್ಯುತ್ ಶಾಕ್​ನಿಂದ ನಿರ್ಮಾಣ ಹಂತದ ಕಟ್ಟಡಕ್ಕೆ ಅಳವಡಿಸಿದ ಸೆಂಟರಿಂಗ್ ಸಾರ್ವೆಯಲ್ಲಿ (ಕಬ್ಬಿಣದ ಸ್ಟ್ಯಾಂಡ್) ಸಿಕ್ಕು ಒದ್ದಾಡಿದ್ದಾನೆ. ಕೂಡಲೇ ಸ್ಥಳೀಯರು ಮತ್ತು ಇತರೆ ಕಟ್ಟಡ ಕಾರ್ಮಿಕರು ಇಬ್ಬರನ್ನು ರಕ್ಷಣೆ ಮಾಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ