AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ!

ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ಕೈದಿಗಳ ಗಲಾಟೆ ನಿಯಂತ್ರಿಸಲು ಹೋದ ಜೈಲರ್ ವಿ.ಡಿ. ಕುಂಬಾರ ಅವರ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಈ ಆಘಾತಕಾರಿ ಘಟನೆಯಲ್ಲಿ ಜೈಲರ್ ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದೆ. ಅಕ್ರಮ ಅಕ್ಕಿ ಸಾಗಾಟ ಪ್ರಕರಣದ ಆರೋಪಿಗಳಾದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಆತನ ಗ್ಯಾಂಗ್ ಈ ದಾಳಿ ನಡೆಸಿದ್ದು, ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ!
ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: May 11, 2026 | 12:42 PM

Share

ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ ಗ್ಯಾಂಗ್‌ನ ಸದಸ್ಯರ ನಡುವೆ ಜೈಲಿನಲ್ಲಿ ಗಲಾಟೆ ಆರಂಭವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಜಗಳ ಬಿಡಿಸಲು ಜೈಲರ್ ವಿ.ಡಿ. ಕುಂಬಾರ ಅವರು ಮಧ್ಯಪ್ರವೇಶಿಸಿದ್ದರು. ಈ ವೇಳೆ ಕೆರಳಿದ ಕೈದಿಗಳು ಜೈಲರ್ ಮೇಲೆಯೇ ಎರಗಿ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!

ಹಲ್ಲೆ ನಡೆಸಿದ ಆರೋಪಿಗಳನ್ನು ಜಾಕೀರ್ ಹುಸೇನ್ ಮಕಾಂದಾರ್‌, ಫಯಾಜ್ ಮಕಾಂದಾರ್, ಅಶೋಕ ನಾಯ್ಕೊಡಿ, ಅರ್ಫಾತ್ ತಾಳಿಕೋಟಿ ಎಂದು ಗುರುತಿಸಲಾಗಿದೆ. ಜೈಲರ್ ಅವರ ಮೇಲೆ ಗುಂಪು ದಾಳಿ ನಡೆಸಿದ ಕೈದಿಗಳು ಅವರನ್ನು ಮನಬಂದಂತೆ ಥಳಿಸಿದ್ದಾರೆ. ಸದ್ಯ ಗಾಯಾಳು ಜೈಲರ್ ಜಮಖಂಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸುದದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More