ಜಾತಿಗಣತಿ ವೇಳೆ ಉಪಜಾತಿ ಬರೆಸಬೇಡಿ ಎಂಬ ನಿರ್ಣಯಕ್ಕೆ ಪಂಚಮಸಾಲಿ ಶ್ರೀ ವಿರೋಧ

ಧರ್ಮ ಕಾಲಂನಲ್ಲಿ ಲಿಂಗಾಯತ ಎಂದು ಬರೆಯಿಸಬೇಕೆಂಬ ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ವೇಳೆ ಉಪಜಾತಿ ಬರೆಸಬೇಡಿ ಎಂಬ ನಿರ್ಣಯಕ್ಕೆ  ಪಂಚಮಸಾಲಿ ಶ್ರೀ ವಿರೋಧ
ಜಯಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 26, 2023 | 11:33 AM

ಬಾಗಲಕೋಟೆ, (ಡಿಸೆಂಬರ್ 25): ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ. ವೀರಶೈವ ಮಹಾಸಭಾದವರು ಆಯಾ ಉಪಜಾತಿಗಳ ಸಮಾಜಿಕ ಸೌಲಭ್ಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಮೂಗು ತೂರಿಸುವುದು ಸರಿಯಲ್ಲ. ಈ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು ಎಂದು ಸಲಹೆಯ‌ನ್ನು ಮಹಾಸಭೆಗೆ ಕೊಡಲು ಇಚ್ಚಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಸೇರಿದಂತೆ 8 ನಿರ್ಣಯ ಮಂಡನೆ

ಜಾತಿಗಣತಿ ವೇಳೆ ಉಪಜಾತಿ  ಬರೆಯಿಸಿಬೇಕೆಂದು ಈಗಾಗಲೇ ನಮ್ಮ ಸಮಾಜ ಬಾಂಧವರಿಗೆ ನಾವು ಕರೆ ಕೊಟ್ಟಿದ್ದೇವೆ. ಉಪಜಾತಿ ಕಾಲಂನಲ್ಲಿ ಪಂಚಮಸಾಲಿ ಅಂತಾನೆ ಬರೆಸಿ ಅಂತ ಹೇಳಿದ್ದೇವೆ. ಕಾರಣ ಅನೇಕ ಒಳಪಂಗಡದವರು ಈಗಾಗಲೇ ‌ಮೀಸಲಾತಿ ಪಡೆದುಕೊಂಡಿದ್ದಾರೆ. ಅವರು ಏನು ಬರೆಯಿಸುತ್ತಾರೋ ಬಿಡ್ತಾರೊ ಅವರಿಗೆ ಬಿಟ್ಟಿದ್ದು. ಆದರೆ ನಾವು ಮಾತ್ರ ನಮ್ಮ ಸಮಾಜದವರಿಗೆ ಪಂಚಮಸಾಲಿ ಅಂತಾನೆ ಬರಸಲು ಸಂದೇಶ ಕೊಟ್ಟಿದ್ದೇವೆ ಎಂದು ಹೇಳಿದರು.

Published On - 10:03 pm, Mon, 25 December 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM