ಬಾಗಲಕೋಟೆ: ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ

ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ನಡೆದಿದೆ. ಸಂಗನಗೌಡ ಗೌಡರ್​(50) ಎಂಬುವವರು ಮೃತ ರ್ದುದೈವಿ. ಇತ್ತ ಕೊಪ್ಪಳ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರಂತೆ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ.

ಬಾಗಲಕೋಟೆ: ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ
ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ವ್ಯಕ್ತಿ ಸಜೀವದಹನ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 11, 2024 | 8:52 PM

ಬಾಗಲಕೋಟೆ, ಮೇ.11: ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ಸಂಗನಗೌಡ ಗೌಡರ್​(50) ಎಂಬುವವರು ಸಜೀವ ದಹನವಾಗಿದ್ದಾರೆ. ಇನ್ನು ಬಾಗಲಕೋಟೆಯಿಂದ ಚಿಕ್ಕಮಾಗಿ ಕಡೆ ಹೊರಟಿದ್ದ py 05 y 8181 ನಂಬರಿನ ಕಾರು ಇದಾಗಿದ್ದು, ತಾಂತ್ರಿಕ ದೋಷದಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.  ಈ ಕುರಿತು ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.​

ಸಿಡಿಲಿಗೆ ರೈತ ಬಲಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮುಕರ್ತಿನನಾಳ ಗ್ರಾಮದಲ್ಲಿ ಸಿಡಿಲಿಗೆ ರೈತನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಡಿಲು ಬಡಿದು ರೈತ ಕನಕಪ್ಪ ಕಾಟಾಪುರ(22) ಮೃತ. ಗ್ರಾಮದ ಹೊರವಲಯದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಪುತ್ತೂರಿನಲ್ಲಿ ಯುವಕನ ಅನುಮಾನಾಸ್ಪದ ಸಾವು; ಮೃತನ ತಾಯಿ ಸೇರಿದಂತೆ ಮೂವರು ವಶಕ್ಕೆ

ಕಡಬದಲ್ಲಿ ಸಿಡಿಲಿಗೆ ಓರ್ವ ಬಲಿ, ಮತ್ತಿಬ್ಬರಿಗೆ ಗಾಯ

ದಕ್ಷಿಣ ಕನ್ನಡ: ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿ ಬದಿಯ ಶೆಡ್‌ನಲ್ಲಿದ್ದ ಬಿಹಾರ ಮೂಲದ ಕೂಲಿ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ. ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದವರು, ಈ ವೇಳೆ ದುರ್ಘಟನೆ ನಡೆದಿದೆ. ಇನ್ನು ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಡಿಲು ಬಡಿದು 5 ಮೇಕೆಗಳು ಸಾವು, ರೈತನಿಗೆ ಗಾಯ

ರಾಯಚೂರು: ಲಿಂಗಸುಗೂರು ತಾಲೂಕಿನ ಜಂಗಿರಾಂಪುರ ತಾಂಡಾದಲ್ಲಿ ಸಿಡಿಲು ಬಡಿದು 5 ಮೇಕೆಗಳು ಸಾವನ್ನಪ್ಪಿದ್ದು, ರೈತ ಹನುಮಂತಗೆ ಗಾಯವಾಗಿದೆ. ಕೂಡಲೇ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ಹೊಲದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Sat, 11 May 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ