ಮುಸ್ಲಿಂ ಯುವತಿ ಪ್ರೀತಿಸಿ ಮದ್ವೆಯಾದ ಯುವಕ; ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ, ಪೊಲೀಸರಿಂದ ಲಾಠಿಚಾರ್ಜ್

ಬಾದಾಮಿ ಮೂಲದ ಮುಸ್ಲಿಂ ಯುವತಿ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಬಾಗಲಕೋಟೆ(Bagalakote) ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.

ಮುಸ್ಲಿಂ ಯುವತಿ ಪ್ರೀತಿಸಿ ಮದ್ವೆಯಾದ ಯುವಕ; ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ, ಪೊಲೀಸರಿಂದ ಲಾಠಿಚಾರ್ಜ್
ಬಾಗಲಕೋಟೆಯಲ್ಲಿ ಮುಸ್ಲಿಂ ಯುವತಿ ಪ್ರೀತಿಸಿ ಮದ್ವೆಯಾದ ಯುವಕ
Edited By: ಕಿರಣ್ ಹನುಮಂತ್​ ಮಾದಾರ್

Updated on: May 08, 2024 | 10:19 PM

ಬಾಗಲಕೋಟೆ, ಮೇ.08: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೀತಿಸಿ ಮದುವೆಯಾದ ಹಿನ್ನೆಲೆ ಮುಸ್ಲಿಂ‌ ಸಮುದಾಯದ ಪರ ಪೊಲೀಸರು ಇದ್ದಾರೆ ಎಂದು ಆರೋಪಿಸಿ ಬಾಗಲಕೋಟೆ(Bagalakote) ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಪ್ರತಿಭಟನೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ

ಹಿಂದೂ ಸಂಘಟನೆ ಪ್ರತಿಭಟನೆ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆ ಹಿಂದೂ ಪರ ಸಂಘಟನೆಗಳ ಮನೋಜ್, ಕುಮಾರಸ್ವಾಮಿ ಮತ್ತು ವಿಕ್ರಮ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ  ಪೊಲೀಸ್​​ ವರಿಷ್ಠಾಧಿಕಾರಿ ಅಮರನಾಥ್​ ರೆಡ್ಡಿ ಭೇಟಿ ನೀಡಿದ್ದು, ಎಸ್​ಪಿ ಜೊತೆ ಚರಂತಿಮಠ  ಮಾತುಕತೆ ನಡೆಸಿ, ಸಿಪಿಐ ರಾಮಣ್ಣ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ. ಅದಕ್ಕೆ ಎಸ್​​ಪಿ ಅಮರನಾಥ್ ರೆಡ್ಡಿ ಒಪ್ಪಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಮುಸ್ಲಿಂ ಯುವಕ ಅರೆಸ್ಟ್

ನಾಳೆ ಹಿಂದೂ ಪರ ಸಂಘಟನೆಗಳ ಸಭೆ ಕರೆದ ವೀರಣ್ಣ ಚರಂತಿಮಠ

ಇನ್ನು ಬಾದಾಮಿ ಮೂಲದ ರುಬಿನಾ ಹಾಗೂ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು. ಈ ವೇಳೆ ಈ ಘಟನೆ ನಡೆದಿದ್ದು, ಈ ಕುರಿತು ವೀರಣ್ಣ ಚರಂತಿಮಠ ನಾಳೆ ಹಿಂದೂ ಪರ ಸಂಘಟನೆಗಳ ಸಭೆ ಕರೆದಿದ್ದಾರೆ. ಇನ್ನು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾದ ಹಿನ್ನಲೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us