ರೀಲ್ಸ್, ಗೇಮ್​ ಗೀಳು: ಐಪೋನ್ ಕೊಡಿಸಲಿಲ್ಲವೆಂದು ಮನೆ ಬಿಟ್ಟು ಹೋದ ಬಾಲಕ​

ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದವರು ಕೂಡ ಮೊಬೈಲ್ ಗೀಳು ಬೆಳಸಿಕೊಂಡಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ಆ್ಯಕ್ಟೀವ್​ ಆಗಿದ್ದಾರೆ. ಅದರಂತೆ ​ಬಾಗಲಕೋಟೆ(Bagalkote) ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ರೀಲ್ಸ್, ಇನ್ಸ್ಟಾಗ್ರಾಮ್ ಹಾಗೂ ಗೇಮ್​ ಗೀಳಿಗೆ ಬಿದ್ದ ಬಾಲಕನೊಬ್ಬ ಪೋಷಕರು ಐಪೋನ್ ಕೊಡಿಸದ ಹಿನ್ನೆಲೆ ಮನೆ ಬಿಟ್ಟು ಹೋಗಿದ್ದಾನೆ.

ರೀಲ್ಸ್, ಗೇಮ್​ ಗೀಳು: ಐಪೋನ್ ಕೊಡಿಸಲಿಲ್ಲವೆಂದು ಮನೆ ಬಿಟ್ಟು ಹೋದ ಬಾಲಕ​
ಮನೆಬಿಟ್ಟು ಓಡಿ ಹೋದ ಬಾಲಕ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 16, 2024 | 6:37 PM

ಬಾಗಲಕೋಟೆ, ಏ.16: ರೀಲ್ಸ್, ಇನ್ಸ್ಟಾಗ್ರಾಮ್ ಹಾಗೂ ಗೇಮ್​ ಗೀಳಿಗೆ ಬಿದ್ದ ಬಾಲಕನೊಬ್ಬ ಪೋಷಕರು ಐಪೋನ್ ಕೊಡಿಸದ ಹಿನ್ನೆಲೆ ಮನೆ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ(Bagalkote) ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಶ್ರವಣಕುಮಾರ ಮನೆ ಬಿಟ್ಟು ಹೋದ ಬಾಲಕ. ಇತ ಒಂಬತ್ತನೇ ತರಗತಿ ಮುಗಿಸಿ ಇದೀಗ ಹತ್ತನೇ ತರಗತಿಗೆ ತೇರ್ಗಡೆಯಾಗಿದ್ದ. ಕಳೆದ ಶನಿವಾರ(ಏ.13) ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಮನೆಯಿಂದ ಹೋಗಿದ್ದಾನೆ.

ಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲು

ಇನ್ನು ಮನೆಯ ಹಿರಿಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದು, ಶ್ರವಣಕುಮಾರನನ್ನ ನೆನೆದು ತಂದೆ-ತಾಯಿ, ಸಹೋದರ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಎಲ್ಲೇ ಇದ್ದರೂ ಮನೆಗೆ ಬಾ ಎಂದು ಪೋಷಕರು ಹಾಗೂ ಪ್ರೀತಿಯ ಅಜ್ಜ ಫೋಟೋ ಹಿಡಿದು ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ:ಆನೇಕಲ್: ಮೊಬೈಲ್​​ಗಾಗಿ ಸೋದರಿಯರಿಬ್ಬರ ಜಗಳ: ಅತ್ತಿಗೆಯನ್ನೇ ಹತ್ಯೆಗೈದ ಮೈದುನ

ಕಣ್ಣೀರಿಡುತ್ತಿರುವ ತಾಯಿ ಕರುಳು

ಕಳೆದ ಕೆಲ ದಿನಗಳಿಂದ ಐಪೋನ್ ಕೊಡಿಸಿ ಎಂದು ಮನೆಯಲ್ಲಿ ಪಟ್ಟು ಹಿಡಿದಿದ್ದ. ಪೋಷಕರು ಕೊಡಿಸೋದಾಗಿ ಹೇಳಿ ಹದಿನೈದು ಸಾವಿರ ಹಣ ಸಂಗ್ರಹ ಮಾಡಿದ್ದರು. ಮತ್ತೆ ಹಠ ಮಾಡಿದಾಗ ತಾಯಿ ಸ್ವಲ್ಪ ಬೈದು ಬುದ್ದಿವಾದ ಹೇಳಿದ್ದಾಳೆ. ಅಷ್ಟಕ್ಕೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ಮಗ ನಿಲ್ಲದ ಮನೆಯಲ್ಲಿ ತಾಯಿ ಕರುಳು ಕಿತ್ತು ಬರುತ್ತಿದೆ. ಮಗ‌ ಎಲ್ಲಿದ್ದಾನೊ, ಹೇಗಿದ್ದಾನೊ, ಏನಾದರೂ ತಿಂದನೋ ಇಲ್ಲವೋ ಎಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲೇ ಇದ್ದರೂ ಮಗನೆ ಮನೆಗೆ ಬಂದು ಬಿಡು ಎಂದು ತಾಯಿ ಕರುಳು ಮಗನ ಕೂಗಿ ಕರೆಯುತ್ತಿದೆ.

ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಶ್ರವಣಕುಮಾರ

ಇನ್ನು ಸುವರ್ಣಾ ಹಾಗೂ ಗುರುನಾಥ ತಳವಾರಗೆ ಇಬ್ಬರು ಗಂಡು ಮಕ್ಕಳು, ಶ್ರವಣಕುಮಾರ ಹಿರಿಮಗ. ಗುರುನಾಥ ಕೆಎಸ್​ಆರ್​ಟಿಸಿ ಕಂಡಕ್ಟರ್ ಕಂ ಚಾಲಕ. ತಾಯಿ ಗೃಹಿಣಿಯಾಗಿದ್ದಾಳೆ. ಬಾಲಕ ಶಾಲೆಯಲ್ಲಿ ತುಂಬಾ ಜಾಣನಾಗಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದಾನೆ. ಒಂಬತ್ತನೇ ತರಗತಿಯಲ್ಲಿ 92 ಪ್ರತಿಶತ ಅಂಕ ಗಳಿಸಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಶ್ರವಣಕುಮಾರ ಮನೆ ಬಿಟ್ಟು ಹೋಗಿದ್ದು, ಕುಟುಂಬಸ್ಥರಿಗೆ ಧಿಕ್ಕು ತೋಚದಂತಾಗಿದೆ. ಎಲ್ಲೇ ಇದ್ದರೂ ನನ್ನ ಮಗನ ಕಳಿಸಿ ಕೊಡಿ ಎಂದು ತಂದೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಅಜ್ಜ ಬೇಗ ಮನೆಗೆ ಬಾರೊ‌ ಮೊಮ್ಮಗನೇ ಎಂದು ಕಣ್ಣೀರಿಡುತ್ತಿದ್ದಾನೆ. ಈತನ ಗುರುತು ಸಿಕ್ಕವರು 9380526652 ನಂಬರ್​ಗೆ ಕರೆ ಮಾಡಬಹುದಾಗಿದೆ.

ಒಟ್ಟಿನಲ್ಲಿ ಐಪೋನ್ ಗೀಳು ಹಚ್ಚಿಕೊಂಡ ಬಾಲಕ ನಾಲ್ಕು ದಿನಗಳಾದರೂ ಸಂಪರ್ಕಕ್ಕೆ ಸಿಕ್ಕಿಲ್ಲ.ಇಡೀ ಕುಟುಂಬಸ್ಥರು ಪ್ರತಿಕ್ಷಣವೂ ಮಗನ ನೆನೆಪಿನಲ್ಲೇ ಕಾಲ ಕಳೆಯುತ್ತಿದ್ದಾರೆ.ಎಲ್ಲೆ ಇರಲಿ ಮಗ ಸುರಕ್ಷಿತವಾಗಿ ಮನೆಗೆ ಬರಲಿ ಎಂಬುದು ಎಲ್ಲರ ಆಶಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Tue, 16 April 24

ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ
ವಿರಾಟ್ ಕೊಹ್ಲಿ ಒಂದಂಕಿಗೆ ಔಟ್ ಆಗುತ್ತಿದ್ದಂತೆ ಸ್ಟೇಡಿಯಂ ಖಾಲಿ ಖಾಲಿ