AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಕರ್ನಾಟಕ ರಾಜ್ಯಸಭಾ ಸದಸ್ಯನ ಕುಟುಂಬ: ಎಲೆಕ್ಟ್ರಿಕ್ ಸ್ಟವ್ ಬಳಕೆ, ಸೈಕಲ್ ಸವಾರಿ

ಪ್ರಧಾನಿ ಮೋದಿಯವರ ಮಿತವ್ಯಯದ ಕರೆಗೆ ಸ್ಪಂದಿಸಿದ ಬಾಗಲಕೋಟೆಯ ರಾಜ್ಯಸಭಾ ಸದಸ್ಯನ ಕುಟುಂಬ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಗ್ಯಾಸ್ ಬದಲು ಎಲೆಕ್ಟ್ರಿಕ್ ಸ್ಟೋವ್, ಚಿನ್ನಾಭರಣ ಖರೀದಿಸದಿರುವುದು, ಕಾರು ಬಿಟ್ಟು ಸೈಕಲ್ ಹಾಗೂ ರೈಲಿನಲ್ಲಿ ಪ್ರಯಾಣಿಸಿ ಇಂಧನ ಮತ್ತು ಆರ್ಥಿಕ ಉಳಿತಾಯ ಮಾಡುತ್ತಿದೆ.

ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಕರ್ನಾಟಕ ರಾಜ್ಯಸಭಾ ಸದಸ್ಯನ ಕುಟುಂಬ: ಎಲೆಕ್ಟ್ರಿಕ್ ಸ್ಟವ್ ಬಳಕೆ, ಸೈಕಲ್ ಸವಾರಿ
ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: May 15, 2026 | 10:24 PM

Share

ಬಾಗಲಕೋಟೆ, ಮೇ 15: ಅಗತ್ಯ ವಸ್ತುಗಳ ಮಿತವ್ಯಯ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ್ದ ಕರೆಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ಆರಂಭವಾಗಿವೆ. ಆದರೆ, ಈ ಮಧ್ಯೆ ಬಾಗಲಕೋಟೆಯ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ (Narayansa Bhandage) ಕುಟುಂಬ ಪ್ರಧಾನಿಯವರ ಕರೆಯನ್ನು ಅಕ್ಷರಶಃ ಪಾಲಿಸುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಿದೆ. ಇಂಧನ, ಗ್ಯಾಸ್ ಹಾಗೂ ಆರ್ಥಿಕ ಮಿತವ್ಯಯಕ್ಕಾಗಿ ಈ ಕುಟುಂಬ ಕೈಗೊಂಡಿರುವ ನಿರ್ಧಾರಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ.

ಮುಖ್ಯಾಂಶಗಳು

  • ಇಂಧನ ಉಳಿತಾಯ: ಗ್ಯಾಸ್‌ನಿಂದ ಎಲೆಕ್ಟ್ರಿಕ್ ಸ್ಟೋವ್‌ಗೆ ಬದಲಾವಣೆ
  • ಆರ್ಥಿಕ ಮಿತವ್ಯಯ: ಚಿನ್ನಾಭರಣ ಖರೀದಿಗೆ ತಾತ್ಕಾಲಿಕ ಬ್ರೇಕ್​​
  • ಸೈಕಲ್ ಸವಾರಿ: ಪರಿಸರ ಸ್ನೇಹಿ ಪ್ರಯಾಣದ ಮೂಲಕ ಇಂಧನ ಉಳಿತಾಯ

ಇಂಧನ, ಅಡುಗೆ ಅನಿಲ ಉಳಿತಾಯ ಸೇರಿದಂತೆ ಆರ್ಥಿಕ ಸಂಪತ್ತಿನ ಮಿತವ್ಯಯ ಬಳಕೆಗೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಈ ಕರೆಗೆ ಓಗೊಟ್ಟು, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಅವರ ಕುಟುಂಬ ಅದರ ಪಾಲನೆಗೆ ಮುಂದಾಗಿದೆ. ನಾರಾಯಣಸಾ ಬಾಂಡಗೆಯವರ ಮನೆಯಲ್ಲಿ ಸದ್ಯ ಗ್ಯಾಸ್ ಬಳಕೆ ನಿಲ್ಲಿಸಲಾಗಿದ್ದು, ಸಂಪೂರ್ಣವಾಗಿ ಎಲೆಕ್ಟ್ರಿಕ್ ಸ್ಟೋವ್‌ನಲ್ಲಿ ಅಡುಗೆ ಮಾಡಲಾಗುತ್ತಿದೆ. ಅತಿ ಅವಶ್ಯಕತೆ ಇದ್ದರೆ ಮಾತ್ರ ಸಿಲಿಂಡರ್ ಬಳಸಲು ನಿರ್ಧರಿಸಲಾಗಿದೆ.

Ttet

ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಕುಟುಂಬ

ಇಷ್ಟೇ ಅಲ್ಲದೆ, ಪ್ರಧಾನಿ ಕರೆಯಂತೆ ದೇಶದ ಆರ್ಥಿಕ ಹಿತದೃಷ್ಟಿಯಿಂದ ಕನಿಷ್ಠ ಒಂದು ವರ್ಷದವರೆಗೆ ಯಾವುದೇ ಚಿನ್ನಾಭರಣಗಳನ್ನು ಖರೀದಿಸದಿರಲು ಮನೆಯ ಮಹಿಳೆಯರು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.

ಇದನ್ನೂ ಓದಿ: ನಾನು ಸಿಎಂ ಆಗ್ಲಾ? ಎಂದವನ ಬಂಡವಾಳ ಬಯಲು: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಇಷ್ಟಕ್ಕೆ ಈ ಕುಟುಂಬದ ಮಿತವ್ಯಯದ ನಿರ್ಧಾರ ಮುಗಿಯುವುದಿಲ್ಲ. ಇಂಧನ ಉಳಿತಾಯದ ಹಿನ್ನೆಲೆಯಲ್ಲಿ ಕಾರು ಸಂಚಾರಕ್ಕೂ ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ. ಹೌದು, ಮೋದಿ ಕರೆಗೆ ಗೌರವ ಕೊಟ್ಟು ಈ ಕುಟುಂಬ ಈಗ ಸೈಕಲ್ ಸವಾರಿಗೆ ಮೊರೆ ಹೋಗಿದೆ. ಅತಿ ಜರೂರಿ ಕೆಲಸಗಳಿದ್ದರೆ ಮಾತ್ರ ಕಾರು ಮುಟ್ಟುವ ಕುಟುಂಬಸ್ಥರು, ನಿತ್ಯದ ಮನೆಗೆಲಸ ಹಾಗೂ ವ್ಯವಹಾರಗಳಿಗಾಗಿ ಸೈಕಲ್ ಮೂಲಕವೇ ಸಂಚರಿಸುತ್ತಿದ್ದಾರೆ.

ಯಾರು ಏನಾದರೂ ಹೇಳಲಿ ನಾವು ಮೋದಿ ಕರೆ ಪಾಲಿಸುತ್ತೇವೆ: ಗಿರೀಶ್ ಬಾಂಡಗೆ

ನಾರಾಯಣಸಾ ಬಾಂಡಗೆ ಅವರ ಪುತ್ರ ಗಿರೀಶ್ ಬಾಂಡಗೆ ನಿತ್ಯ ಸೈಕಲ್ ಮೇಲೆಯೇ ತಮ್ಮ ಅಂಗಡಿ ಮತ್ತು ವ್ಯವಹಾರಗಳಿಗೆ ತೆರಳುತ್ತಿದ್ದಾರೆ. ನಗರದಾದ್ಯಂತ ಸೈಕಲ್‌ನಲ್ಲೇ ಸಂಚರಿಸಲು ನಿರ್ಧರಿಸಿರುವ ಇವರು, ದೂರದ ಊರುಗಳಿಗೆ ಹೋಗಲು ಮಾತ್ರ ಕಾರು ಬಳಸುತ್ತಿದ್ದಾರೆ. ವಿಶೇಷವೆಂದರೆ, ಸ್ವತಃ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಅವರು ಕೂಡ ಕುಟುಂಬ ಸಮೇತ ದೇಶಾದ್ಯಂತ ಪ್ರವಾಸಕ್ಕೆ ತೆರಳಿದ್ದು, ಎಲ್ಲೂ ಕಾರು ಬಳಸದೆ ರೈಲಿನಲ್ಲೇ ಪ್ರಯಾಣಿಸುತ್ತಿದ್ದಾರೆ. ಇದು ದೇಶದ ಹಿತ ಹಾಗೂ ದೇಹದ ಆರೋಗ್ಯಕ್ಕೂ ಒಳ್ಳೆಯದು. ಯಾರು ಏನಾದರೂ ಹೇಳಲಿ ನಾವು ಮೋದಿ ಕರೆ ಪಾಲಿಸುತ್ತೇವೆ ಎಂದು ಗಿರೀಶ್ ಬಾಂಡಗೆ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಇಂಧನ ಮಿತವ್ಯಯದ ಕರೆ: ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ

ಒಟ್ಟಿನಲ್ಲಿ, ಪ್ರಧಾನಿ ಮೋದಿಯವರ ಮಿತವ್ಯಯದ ಕರೆಗೆ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕರಲ್ಲಿ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಆದರೆ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಕುಟುಂಬ ಮಾತ್ರ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ, ಪ್ರಧಾನಿ ಕರೆಯನ್ನು ಅಚ್ಚುಕಟ್ಟಾಗಿ ಪಾಲಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿ ನಿಂತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!