AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ವೇಳೆ ಬಣ್ಣ ಎರಚುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ; ಇಬ್ಬರು ಯುವಕರಿಗೆ ಚಾಕು ಇರಿತ

ಬಾಗಲಕೋಟೆ ನಗರದ ಮಡುವಿನ ಓಣಿಯಲ್ಲಿ ಘಟನೆ ನಡೆದಿದೆ. ಅವಿನಾಶ್(24), ಬಸವರಾಜ್ಗೆ(22) ಕಿಡಿಗೇಡಿಗಳು ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೋಳಿ ಹಬ್ಬದ ವೇಳೆ ಬಣ್ಣ ಎರಚುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ; ಇಬ್ಬರು ಯುವಕರಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 20, 2022 | 11:02 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಅಂತಿಮ ದಿನದ ಹೋಳಿ ಹಬ್ಬದ ಸಂಭ್ರಮದ ವೇಳೆ ಬಣ್ಣ ಎರಚುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಬಾಗಲಕೋಟೆ ನಗರದ ಮಡುವಿನ ಓಣಿಯಲ್ಲಿ ಘಟನೆ ನಡೆದಿದೆ. ಅವಿನಾಶ್(24), ಬಸವರಾಜ್ಗೆ(22) ಕಿಡಿಗೇಡಿಗಳು ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಗಲಕೋಟೆಯ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸ್ಟೆಲ್ನ ಸ್ಟಡಿ ರೂಂ, ಕಂಪ್ಯೂಟರ್ ರೂಂನಲ್ಲಿ ಬೆಂಕಿ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ನಲ್ಲಿ ನಲ್ಲಿ ಅಗ್ನಿ ಅವಘಡವಾಗಿದ್ದು ಹಾಸ್ಟೆಲ್ನ ಸ್ಟಡಿ ರೂಂ, ಕಂಪ್ಯೂಟರ್ ರೂಂನಲ್ಲಿ ಬೆಂಕಿ ಹೊತ್ತುಕೊಂಡಿದೆ. ಬೆಂಕಿ ಹೊತ್ತಿಕೊಳ್ತಿದ್ದಂತೆ ವಿದ್ಯಾರ್ಥಿನಿಯರು ಹೊರ ಓಡಿ ಬಂದಿದ್ದಾರೆ. 156 ವಿದ್ಯಾರ್ಥಿನಿಯರಿರುವ ಹಾಸ್ಟೆಲ್ ಇದಾಗಿದ್ದು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಇಂಡಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ.

ಕಾರು ಪಲ್ಟಿಯಾಗಿ ವ್ಯಕ್ತಿ ಸಾವು ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಅಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗೋವಾಗೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿ ಸಿರಿಲ್ ಫರ್ನಾಂಡಿಸ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಇನ್ನು ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಗಾಯಗೊಂಡ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದೇಶಕ್ಕೆ ಹೋಗುತ್ತಿದ್ದ ಮಗನಿಗೆ ಗೋವಾ ಏರ್ಪೋಟ್​ಗೆ ಬಿಡಲು ಹೋಗಿದ್ದ ತಂದೆ‌ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಹೊನ್ನಾವರ ತಾಲೂಕಿನ ಗುಂಡಬಾಳ ನಿವಾಸಿ.

ಇದನ್ನೂ ಓದಿ: ನಾಳೆ ಮುಂಜಾನೆ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಶೆಲ್ ದಾಳಿಯಲ್ಲಿ ಮೃತಪಟ್ಟ ನವೀನ್ ಮೃತದೇಹ

IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

Published On - 8:07 pm, Sun, 20 March 22

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ