ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಬಳಿ ನಡೆದಿದೆ.
ಬಾಗಲಕೋಟೆ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವಂತಹ ಘಟನೆ ತಾಲ್ಲೂಕಿನ ಸೀಗಿಕೇರಿ ಕ್ರಾಸ್ನಲ್ಲಿ ನಡೆದಿದೆ. ಶ್ರೀನಿವಾಸ ಹಂಸನೂರು (32), ಈಶ್ವರ ಮಾಚಕನೂರು (54) ಮೃತರು. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುದ್ದೆಬಿಹಾಳದಿಂದ ಬಾಗಲಕೋಟೆ ಮಾರ್ಗವಾಗಿ ಬಸ್ ಬರುತ್ತಿದ್ದು, ಬಾಗಲಕೋಟೆಯಿಂದ ಸೀಗಿಕೇರಿ ಕಡೆ ಬೈಕ್ ಸವಾರರು ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಇನ್ನೂ ಅದೇ ತಾಲೂಕಿನ ಸೀಗಿಕೇರಿ ಕ್ರಾಸ್ ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೊಲ್ಲಾಪುರದಿಂದ ಗದಗ ಮಾರ್ಗವಾಗಿ ಹೊರಟಿದ್ದ ಪ್ಯಾಸೆಂಜರ್ ರೈಲಿಗೆ ಸಿಲುಕಿ ಯಲ್ಲಪ್ಪ ಅಂಬಿಗೇರ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೃತ ಯಲ್ಲಪ್ಪ ಅಂಬಿಗೇರ್ ಬಾದಾಮಿ ತಾಲೂಕಿನ ಪಟ್ಟದಕಲ್ಲು ಗ್ರಾಮದ ನಿವಾಸಿ. ಸ್ಥಳಕ್ಕೆ ಬಾಗಲಕೋಟೆ ರೇಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಇಲ್ಲದೆ ವ್ಯಕ್ತಿ ಸಾವು
ಚಾಮರಾಜನಗರ: 108 ವಾಹನದಲ್ಲಿ ಆಕ್ಸಿಜನ್, ವೆಂಟಿಲೇಟರ್ ಇಲ್ಲದಿದ್ದಕ್ಕೆ ರೋಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಅನಿಲ್ ಕುಮಾರ್ ಸಾವನ್ನಪ್ಪಿದ ರೋಗಿ. ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಕಲಾಗಿದ್ದು, ಆಸ್ಪತ್ರೆಯ ಅವ್ಯವಸ್ಥೆಯಿಂದ ಮೈಸೂರಿನ ಅನಿಲ್ ಕುಮಾರ್ ಸಾವನ್ನಪ್ಪಿದ್ದಾನೆ. ಹಿಮದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪತ್ನಿ ಜೊತೆ ಅನಿಲ್ ಬಂದಿದ್ದ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದಿಂದ ವಾಪಸ್ ಬರುವಾಗ ಅನಿಲ್ಗೆ ಉಸಿರಾಟದ ತೊಂದರೆ ಆಗಿದೆ. ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಇಲ್ಲದೆ ಅನಿಲ್ ಕುಮಾರ್ ಮೃತಪಟ್ಟಿದ್ದು, ಪತಿ ಅನಿಲ್ ಕುಮಾರ್ ಮೃತದೇಹದ ಮುಂದೆ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ನೆಲಮಂಗಲ: ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಬಳಿ ನಡೆದಿದೆ. ಹುಲಿಕುಂಟೆ ಶಿವಕುಮಾರ (20) ಮೃತ ದುರ್ದೈವಿ. ಬೈಕ್ ಸವಾರ ರಸ್ತೆ ಬಲಬದಿಗೆ ಬಿದ್ದ ಪರಿಣಾಮ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಬೈಕ್ ಹಿಂಬದಿ ಕುಳಿತ ಸವಾರ ಸಿದ್ದಲಿಂಗಯ್ಯಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪಾರಾಗಿದ್ದಾನೆ. ಟಿಪ್ಪರ್ ಲಾರಿ ಸಹಿತ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
ಕಲಬುರಗಿ ಹಳೇ ಜೇವರ್ಗಿ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಕಲಬುರಗಿಯ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಜಮೀರ್(23) ಹತ್ಯೆಯಾದ ಯುವಕ. ಕಳದೆ ರಾತ್ರಿ ಐದಾರು ಜನ ದುಷ್ಕರ್ಮಿಗಳು ಸೇರಿಕೊಂಡು ಬರ್ಬರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಜಮೀರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸ್ನೇಹಿತೆಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ
ಬೆಂಗಳೂರು: ಸ್ನೇಹಿತೆಯ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೀತಾ ಅರೆಸ್ಟ್ ಆದ ಆರೋಪಿ. ಆ.16ರಂದು ವಿದ್ಯಾರಣ್ಯಪುರದಲ್ಲಿರುವ ಸ್ನೇಹಿತೆ ಲಕ್ಷ್ಮೀ ಮನೆಗೆ ಗೀತಾ ಬಂದಿದ್ದರು. ಈ ವೇಳೆ ಡಿಸೈನ್ ನೋಡುವ ನೆಪದಲ್ಲಿ 8-10 ಲಕ್ಷ ಮೌಲ್ಯದ ಆಭರಣಗಳನ್ನ ಕದ್ದು ಪರಾರಿಯಾಗಿದ್ದರು. ಬಂಧಿತರಿಂದ 9.84 ಲಕ್ಷ ಮೌಲ್ಯದ 216 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:06 pm, Mon, 19 September 22