ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್ ಹರಿದು ಗಂಡ-ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಬಲಿ

| Updated By: ಸಾಧು ಶ್ರೀನಾಥ್​

Updated on: Sep 30, 2022 | 7:11 PM

ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗ್ತಿದ್ದಾಗ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ.

ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್ ಹರಿದು ಗಂಡ-ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಬಲಿ
ನಿಯಂತ್ರಣ ತಪ್ಪಿದ ಕೆಎಸ್ಆರ್ ಟಿಸಿ ಬಸ್ ಹರಿದು ಗಂಡ-ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಬಲಿ
Follow us on

ಬಾಗಲಕೋಟೆ: ಕೆಎಸ್ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿದ ಪರಿಣಾಮ ಗಂಡ ಮತ್ತು ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಬಸ್ ಪಾಟಾ ಕಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗ್ತಿದ್ದ ವೆಂಕುಬಾಯಿ ರಾಮಣ್ಣ ಚವ್ಹಾಣ್ (35) ಎಂಬ ಮಹಿಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿತ್ತು.

ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗ್ತಿದ್ದಾಗ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ. ಮೃತ ವೆಂಕುಬಾಯಿ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಾಳಾಪುರ ತಾಂಡಾ ನಿವಾಸಿ. ವೆಂಕುಬಾಯಿ ಹಾಗೂ ಕುಟುಂಬ ಬಾದಾಮಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ರು. ಅದೃಷ್ಟವಶಾತ್ ಬಸ್ ಪಲ್ಟಿಯಾಗದ ಹಿನ್ನೆಲೆ ಎಲ್ಲರೂ ಬಚಾವ್ ಆಗಿದ್ದಾರೆ. ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳ್ಳಂಬೆಳ್ಳ ಬಸ್ ನಿಲ್ದಾಣ ಬಳಿ ಅಪಘಾತ: ಮಹಿಳೆ ಸಾವು

ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಸ್ ನಿಲ್ದಾಣ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ಮಹಿಳೆಗೆ ಲಾರಿಯೊಂದು ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ಇಳಿದು ಮನೆಯ ಕಡೆ ಹೋಗುತ್ತಿದ್ದ ಮಹಿಳೆ ಚಂದ್ರಮ್ಮ (45) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಅಪಘಾತ ನಡೆದಿದೆ. ರಂಗಸ್ವಾಮಿ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಶಿರಾ ಸಾರ್ವಜನಿಕ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:36 pm, Fri, 30 September 22