ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗದ ಹಿನ್ನೆಲೆ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

| Updated By: ವಿವೇಕ ಬಿರಾದಾರ

Updated on: Jul 04, 2022 | 4:10 PM

ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗದ ಹಿನ್ನೆಲೆ ಹುನಗುಂದ ತಾಲೂಕಿನ ಐಹೊಳೆ ಗ್ರಾಮದ ಕೂಲಿಕಾರ್ಮಿಕರು ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗದ ಹಿನ್ನೆಲೆ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ
ಕೂಲಿ ಕಾರ್ಮಿಕರ ಪ್ರತಿಭಟನೆ
Follow us on

ಬಾಗಲಕೋಟೆ: ಉದ್ಯೋಗ ಖಾತರಿ ಯೋಜನೆಯಡಿ (Employment Guarantee Scheme MGNREGA) ಕೆಲಸ ಸಿಗದ ಹಿನ್ನೆಲೆ ಹುನಗುಂದ (Hunagunda) ತಾಲೂಕಿನ ಐಹೊಳೆ ಗ್ರಾಮದ ಕೂಲಿಕಾರ್ಮಿಕರು ಪಂಚಾಯತಿಗೆ (Gram Panchayat) ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿಯ  ಕಂಪ್ಯೂಟರ್ (Computer) ಆಪರೇಟರ್ ಎಚ್.ಎನ್‌. ಮಠ ಕೆಲವರಿಗೆ ಮಾತ್ರ ಎನ್.ಎಮ್ಆರ್ ತೆಗೆದು ಉದ್ಯೋಗ ನೀಡುತ್ತಿದ್ದಾನೆ.  ಹೀಗಾಗಿ ಸುಮಾರು ಐನೂರಕ್ಕೂ ಹೆಚ್ಚು ಜನ ಕಾರ್ಮಿಕ ಪ್ರತಿಭಟನೆ ಮಾಡುತ್ತಿದ್ದು, ಕಂಪ್ಯೂಟರ್ ಆಪರೇಟರ್​​ನನ್ನು ಕೂಡಲೆ ಅಮಾನತು ಮಾಡಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದ್ದು, ನಮಗೆ ಕೆಲಸ ಕೊಡಿ ಎಂದು ಕಾರ್ಮಿಕರು ಪಟ್ಟು ಹಿಡದಿದ್ದಾರೆ.

ಇದನ್ನು ಓದಿ: ಕೊಡಗು ಮತ್ತೆ ತತ್ತರ, ಸ್ಥಳೀಯ ಆಡಳಿತ ನಿರುತ್ತರ – ಟಿವಿ9 ಡಿಜಿಟಲ್​ ಲೈವ್​ನಲ್ಲಿ ಚರ್ಚೆ

ಗುತ್ತಿಗೆ ಪೌರ ಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

ಹಾವೇರಿ: ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗುತ್ತಿಗೆ ಪೌರ ಕಾರ್ಮಿಕರು ಅರೆಬೆತ್ತಲೆ ಪ್ರತಿಭಟನೆ ಮಾಡುತ್ತಿದ್ದಾರೆ. ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರಂತೆ ನೇರ ವೇತನ ನೀಡಬೇಕು ಮತ್ತು ನೇರವೇತನಕ್ಕೆ ಪೌರ ಕಾರ್ಮಿಕರಾಗಿ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ಇದನ್ನು ಓದಿ: ACB ಕಲೆಕ್ಷನ್ ಸೆಂಟರ್ ಆರೋಪ: ಎಸಿಬಿ ಎಡಿಜಿಪಿ ಸರ್ವಿಸ್ ರೆಕಾರ್ಡ್ ಹಾಜರುಪಡಿಸಲು ಹೈಕೋರ್ಟ್ ಸೂಚನೆ

ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ‌ ಜುಲೈ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.  ಈ ಸಂಬಂಧ ಪ್ರತಿಭಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಭೇಟಿ, ಗುತ್ತಿಗೆ ಪೌರ ಕಾರ್ಮಿಕರ ಸಮಸ್ಯೆ ಆಲಿಸಿ ಸಮಸ್ಯೆಗಳನ್ನು ಆಲಿಸಿ ಸರಕಾರದ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಆದರೆ  ಗುತ್ತಿಗೆ ಪೌರ ಕಾರ್ಮಿಕರು ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಅಂತ ಪಟ್ಟು ಹಿಡದಿದ್ದಾರೆ.