ಬಾಗಲಕೋಟೆ: ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬದಲ್ಲೇ ಹೆಸ್ಕಾಂ ಗುತ್ತಿಗೆದಾರ ಕಾರ್ಮಿಕ ಸಾವನ್ನಪ್ಪಿದ್ದಾರೆ. ಚಿತ್ತರಗಿ ಗ್ರಾಮದಲ್ಲಿ 33 ವರ್ಷದ ಹನುಮಂತ ಮುಕಾಶಿ ಮರಣಿಸಿದ್ದಾರೆ. ಬಿ.ಎನ್. ಜಾಲಿಹಾಳ ಗ್ರಾಮದ ಹನುಮಂತ ಮುಕಾಶಿ ಮೃತ ದುರ್ದೈವಿ. ಟ್ರಾನ್ಸ್ಫಾರ್ಮರ್ ಅಳವಡಿಸುವಾಗ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಲೈನ್ ಕ್ಲಿಯರ್ ಇಲ್ಲದೆ ಕಂಬ ಏರಿಸಿ ಗುತ್ತಿಗೆದಾರನ ಎಡವಟ್ಟಿನಿಂದ ಹೀಗೆ ಆಗಿದೆ ಎಂದು ತಿಳಿದುಬಂದಿದೆ. ಹುನಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೋಲಾರ: ವಿದ್ಯುತ್ ಸ್ಪರ್ಶಿಸಿ ಸೀಮೆ ಹಸು ಸಾವು
ವಿದ್ಯುತ್ ಸ್ಪರ್ಷಿಸಿ ಸೀಮೆ ಹಸು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಅಯ್ಯಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜುಳಾ ಕುಮಾರ್ಗೆ ಸೇರಿದ ಹಸು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದೆ. ಸೂಕ್ತ ಪರಿಹಾರ ಕಲ್ಪಿಸುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. ಸುಮಾರು 60 ಸಾವಿರ ಬೆಲೆ ಬಾಳುವ ಸೀಮೆ ಹಸು ಸಾವನ್ನಪ್ಪಿದೆ.
ಇದನ್ನೂ ಓದಿ: ಒಂಟಿ ಸಲಗ ದಾಳಿಯಿಂದ ಜೈವಿಕ ಉದ್ಯಾನವನದ ಆನೆ ಸಾವು, ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರ ಆರೋಪ
ಇದನ್ನೂ ಓದಿ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ
Published On - 8:52 pm, Wed, 13 October 21