AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಗೆ ಮನೆಯಲ್ಲಿ ವಿರೋಧ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು

ಬೆಳಗ್ಗೆ ಸಪ್ತಪದಿ ತುಳಿದು ಮಧ್ಯಾಹ್ನದ ವೇಳೆಗೆ ಮಚ್ಚಿನಿಂದ ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ವಧು ಮೃತಪಟ್ಟಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ವಿರುದ್ಧವೆಂಬಂತೆ ಮನೆಯವರು ಮದುವೆಗೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಮದ್ವೆಗೆ ಮನೆಯಲ್ಲಿ ವಿರೋಧ: ಒಂದೇ ಮರಕ್ಕೆ ನೇಣಿಗೆ ಶರಣಾದ ಪ್ರೇಮಿಗಳು
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Aug 09, 2024 | 2:41 PM

Share

ಬಾಗಲಕೋಟೆ, (ಆಗಸ್ಟ್​ 09): ಮನೆಯಲ್ಲಿ ತಮ್ಮ ಮದುವೆ ಒಪ್ಪಲಿಲ್ಲವೆಂದು ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದಿದೆ. ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳು. ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಸಾವಿನ ಹಾದಿ ಹಿಡಿದಿದೆ.

ಇದನ್ನೂ ಓದಿ: ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಚಿನ್‌ ದಳವಾಯಿ, ಪ್ರಿಯಾ ಮಡಿವಾಳರ ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕು ಎಂದು ನಿರ್ಧಾರ ತೆಗೆದುಕೊಂಡಿದ್ದರು. ಇಬ್ಬರದ್ದು ಬೇರೆ ಬೇರೆ ಜಾತಿಯಾಗಿದ್ದರಿಂದ ಸಚಿನ್‌ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯವನ್ನು ಸಚಿನ್‌, ತಮ್ಮ ಪ್ರೇಯಸಿ ಪ್ರಿಯಾಳಿಗೆ ತಿಳಿಸಿದ್ದಾನೆ. ಇದರಿಂದ ಮನನೊಂದ ಪ್ರೇಮಿಗಳು ಗುರುವಾರ ರಾತ್ರಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ