ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ!

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ 62 ಗ್ರಾಂ ಚಿನ್ನ ಹಾಗೂ ಸಿಇಐಆರ್ ಪೋರ್ಟಲ್ ನೆರವಿನಿಂದ 30 ಮೊಬೈಲ್‌ಗಳನ್ನು ರಿಕವರಿ ಮಾಡಿದ್ದಾರೆ. ಪೊಲೀಸರ ಈ ಅದ್ಭುತ ಕಾರ್ಯಕ್ಷಮತೆಯನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ಇಡೀ ತಂಡಕ್ಕೆ ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ!
ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
Edited By:

Updated on: Jun 03, 2026 | 2:09 PM

ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ (Gold) ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮುಖ್ಯಾಂಶಗಳು

  • ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ.
  • ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ.
  • ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ.

13 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಸ್ವತ್ತು

ಮಹಾಲಿಂಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 2025-26ನೇ ಸಾಲಿನಲ್ಲಿ ಸಾರ್ವಜನಿಕರ ಮನೆ ಹಾಗೂ ವಿವಿಧೆಡೆ ಕಳುವಾಗಿದ್ದ ಒಟ್ಟು 62 ಗ್ರಾಂ ಬಂಗಾರದ ಆಭರಣಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಇದರ ಅಂದಾಜು ಮೌಲ್ಯ 9 ಲಕ್ಷದ 15 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದರೊಂದಿಗೆ, ಸಾರ್ವಜನಿಕರು 2026ನೇ ಸಾಲಿನಲ್ಲಿ ಕಳೆದುಕೊಂಡಿದ್ದ 30 ದುಬಾರಿ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸರ್ಕಾರದ ಸೈಬರ್ ಕ್ರೈಮ್ ತಡೆ ಉಪಕ್ರಮವಾದ ಸಿ ಇ ಐ ಆರ್ (CEIR) ಪೋರ್ಟಲ್ ತಂತ್ರಜ್ಞಾನದ ಮುಖಾಂತರ ಯಶಸ್ವಿಯಾಗಿ ಟ್ರ್ಯಾಕ್ ಮಾಡಿ ರಿಕವರಿ ಮಾಡಲಾಗಿದೆ. ಜಪ್ತಿ ಮಾಡಲಾದ ಈ ಮೊಬೈಲ್‌ಗಳ ಒಟ್ಟು ಮೌಲ್ಯ 4 ಲಕ್ಷದ 19 ಸಾವಿರ ರೂಪಾಯಿಗಳಾಗಿವೆ. ಇವೆರಡೂ ಸೇರಿ ಒಟ್ಟು 13,34,000 ರೂ. ಮೌಲ್ಯದ ಸಾರ್ವಜನಿಕರ ಸ್ವತ್ತನ್ನು ಪೊಲೀಸರು ಮೂಲ ಮಾಲೀಕರಿಗೆ ಮರಳಿ ತಲುಪಿಸಲು ಕ್ರಮ ಕೈಗೊಂಡಿದ್ದಾರೆ.

ತಂತ್ರಜ್ಞಾನದ ಸಮರ್ಪಕ ಬಳಕೆ ಹಾಗೂ ಸಮಯಪ್ರಜ್ಞೆಯಿಂದ ಕಳ್ಳರನ್ನು ಪತ್ತೆಹಚ್ಚಿ, ಮಾಲನ್ನು ವಶಪಡಿಸಿಕೊಂಡ ಮಹಾಲಿಂಗಪುರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ದಾರ್ಥ ಗೋಯಲ್ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅಲ್ಲದೆ, ಇಡೀ ತಂಡಕ್ಕೆ ಸೂಕ್ತ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ಘೋಷಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Wed, 3 June 26

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us