AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಪ್ಪರಗಿಯಲ್ಲಿ ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ: ತಪ್ಪಿದ ಭಾರಿ ದುರಂತ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರಿ ದುರಂತ ತಪ್ಪಿದೆ. ಕಾರು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳ ಶೀಟ್ ಹಾರಿದ್ದು, ವೈನ್ ಶಾಪ್ ಗೋಡೆಯ ಸಿಮೆಂಟ್ ಉದುರಿದ್ದರೆ, ಬಿಯರ್ ಹಾಗೂ ಕೂಲ್ ಡ್ರಿಂಕ್ಸ್ ಬಾಟಲ್​​ಗಳು ಕೆಳಗೆ ಬಿದ್ದಿವೆ ಎನ್ನಲಾಗಿದೆ.

ಹಿಪ್ಪರಗಿಯಲ್ಲಿ ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ: ತಪ್ಪಿದ ಭಾರಿ ದುರಂತ
ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 26, 2026 | 7:15 AM

Share

ಮುಖ್ಯಾಂಶಗಳು

  • ಹಿಪ್ಪರಗಿ ಬಳಿ ಮಹಿಂದ್ರಾ XUV300 ಕಾರು ಸ್ಫೋಟ
  • ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ
  • ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಬಾಗಲಕೋಟೆ, ಜುಲೈ 26: ಬಾರ್​​ ಎದುರು ನಿಲ್ಲಿಸಿದ್ದ ಕಾರೊಂದು ಸ್ಫೋಟಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ನಡೆದಿದೆ. ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಎಂಬವರು ತಂದಿದ್ದ ಕಾರು ಸ್ಫೋಟಗೊಂಡ ತೀವ್ರತೆಗೆ ಕಾರಿನ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವೈನ್ ಶಾಪ್ ಗೋಡೆಯ ಸಿಮೆಂಟ್ ಉದುರಿದ್ದರೆ, ಬಿಯರ್ ಹಾಗೂ ಕೂಲ್ ಡ್ರಿಂಕ್ಸ್ ಬಾಟಲ್​​ಗಳು ಕೆಳಗೆ ಬಿದ್ದಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸೊಕೊ ಟೀಂ ಮತ್ತು ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವ ಕಾರಣದಿಂದ ಸ್ಪೋಟ ಆಗಿದೆ ಎಂದು ತನಿಖೆ ನಡೆಸುತ್ತಿದ್ದಾರೆ.

ಆಗಿದ್ದೇನು?

ಸ್ಪೋಟಗೊಂಡಿರುವ ಮಹಿಂದ್ರಾ XUV300 ಕಾರು ಎಂ.ಜಿ.ತೋರಗಲ್ ಎಂಬುವರ ಹೆಸರಿನಲ್ಲಿರುವುದು ಗೊತ್ತಾಗಿದ್ದು, ಕಾರು ಸ್ಫೋಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. ನಿನ್ನೆ ಸಂಜೆ 4.30ರಲ್ಲಿ ಕಾರನ್ನು ತಂದು ಬಾರ್​​ ಬಳಿ ನಿಲ್ಲಿಸಲಾಗಿತ್ತು. ರಾತ್ರಿ ಮನೆಗೆ ಹೊರಡಬೇಕು ಅಂದಾಗ ಸ್ಫೋಟದ ಶಬ್ದ ಕೇಳಿಸಿತು. ಬಾಂಬ್ ಸ್ಫೋಟ ಆಗಿರಬಹುದು ಅಂತಾ ಅನುಮಾನ ಬರುತ್ತಿದೆ. ಕಾರು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳ ಶೀಟ್ ಹಾರಿವೆ. ಘಟನೆ ವೇಳೆ ಪೂಜಾರಿ ಎಂಬ ಹುಡುಗ ಸ್ವಲ್ಪ ದೂರದಲ್ಲಿ ಇದ್ದ. ಆ ಹುಡುಗನೇ ಹೀಗೆ ಮಾಡಿರಬಹುದು ಎಂದು ಹಿಡಿದೆವು. ಆದರೆ ಆತ ನನಗೆ ಗಾಯವಾಗಿದೆ ಎಂದು ತೋರಿಸಿದ್ದಾನೆ. ಜಮಖಂಡಿ ಆಸ್ಪತ್ರೆಯಲ್ಲಿ ಆ ಹುಡುಗ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕಾರು ನಿಲ್ಲಿಸಿದ್ದ ವೈನ್ ಶಾಪ್ ಮ್ಯಾನೇಜರ್ ಹನುಮಂತ ತಿಳಿಸಿದ್ದಾರೆ.

ಇದನ್ನೂ ಓದಿ: ನಗರಸಭೆ ಆಯುಕ್ತರ ಚೇಂಬರ್‌ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”; ಬೋರ್ಡ್​ ನೋಡಿ ಉಪ ಲೋಕಾಯುಕ್ತ ಶಾಕ್

ತಪ್ಪಿದ ಭಾರಿ ಅನಾಹುತ

ಸ್ಫೋಟದ ತೀವ್ರತೆ ಗಮನಿಸಿದರೆ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಘಟನೆ ವೇಳೆ ಸುತ್ತಮುತ್ತಲಿನ ಪ್ರದೇಶದಲ್ಲಿ ಧೂಳು ತುಂಬಿಕೊಂಡು ಕೆಲ ಕಾಲ ಆತಂಕದ ವಾತಾವಣರ ನಿರ್ಮಾಣವಾಗಿತ್ತು. ಆದರೆ ಯಾವುದೇ ಜೀವಹಾನಿ ಆಗಿಲ್ಲ. ಕಾರಿನ ಸಮೀಪ ಅಥವಾ ಕಾರಲ್ಲಿ ಯಾರಾದರೂ ಇದ್ದ ವೇಳೆಯೇ ಘಟನೆ ನಡೆದಿದ್ದರೆ ಸಾವು ನೋವು ಸಂಭವಿಸುವ ಸಾಧ್ಯತೆ ಇತ್ತು. ಅಷ್ಟಕ್ಕೂ ಕಾರು ಸ್ಫೋಟಗೊಂಡಿದ್ದು ಯಾವ ಕಾರಣಕ್ಕೆ? ಇದು ದುಷ್ಕೃತ್ಯವಾ? ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿದ್ದು ಎಲ್ಲ ಆಯಾಮಗಳಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:10 am, Sun, 26 July 26

Follow Us
ರವಿ ಹೆಚ್ ಮೂಕಿ, ಕಲಘಟಗಿ
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!