Bagalkote News: ಫೋನ್ ನಂಬರ್​ ಕೊಡುವಂತೆ ಪೀಡಿಸುತ್ತಿದ್ದ ವ್ಯಕ್ತಿ: ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ ಮಹಿಳೆ

ಫೋನ್​​ ನಂಬರ್​ ಕೊಡುವಂತೆ ಪೀಡಿಸುತ್ತಿದ್ದ ವ್ಯಕ್ತಿಯನ್ನು ಓರ್ವ ಮಹಿಳೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.

Bagalkote News: ಫೋನ್ ನಂಬರ್​ ಕೊಡುವಂತೆ ಪೀಡಿಸುತ್ತಿದ್ದ ವ್ಯಕ್ತಿ: ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ ಮಹಿಳೆ
ಮಲ್ಲಿಕಸಾಬ್ ಬೇಪಾರಿ ಹಲ್ಲೆಗೊಳಗಾದ ವ್ಯಕ್ತಿ

Updated on: May 26, 2023 | 7:46 PM

ಬಾಗಲಕೋಟೆ: ಫೋನ್​​ ನಂಬರ್​ ಕೊಡುವಂತೆ ಪೀಡಿಸುತ್ತಿದ್ದ (harassed) ವ್ಯಕ್ತಿಯನ್ನು ಓರ್ವ ಮಹಿಳೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ. ಮಲ್ಲಿಕಸಾಬ್ ಬೇಪಾರಿ ಹಲ್ಲೆಗೊಳಗಾದ ವ್ಯಕ್ತಿ. 1 ತಿಂಗಳಿಂದ ಫೋನ್ ನಂಬರ್ ಕೊಡುವಂತೆ ಪೀಡಿಸುತ್ತಿದ್ದ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಮಲ್ಲಿಕಸಾಬ್ ಬೇಪಾರಿಗೆ ತಲೆಗೆ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ 

ಗದಗ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗದಗ ತಾಲೂಕಿನ ಬಿಂಕದಕಟ್ಟಿ‌ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯಿಂದ ಕೊಪ್ಪಳ ಕಡೆ ಹೋಗುತ್ತಿದ್ದ ಕಾರ್​​​, ಸಡನ್​ ಆಗಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳು ಕೊಪ್ಪಳ ಮೂಲದವರು ಎನ್ನಲಾಗಿದೆ. ತಕ್ಷಣ ಗದಗ ಜಿಮ್ಸ್ ಆಸ್ಪತ್ರಗೆ ಪೊಲೀಸರು, ಸ್ಥಳೀಯರು ದಾಖಲಿಸಿದ್ದಾರೆ. ಗದಗ ಗ್ರಾಮೀಣ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಬೆಂಗಳೂರಲ್ಲಿ ಹಾಡಹಗಲೇ ಮಹಿಳೆ ಮೇಲೆ ಹಲ್ಲೆಗೈದು ದರೋಡೆ

ಬೆಂಗಳೂರು: ಹಾಡಹಗಲೇ ಮಹಿಳೆ ಮೇಲೆ ಹಲ್ಲೆಗೈದು ದರೋಡೆ ಮಾಡಿರುವಂತಹ ಘಟನೆ ಲಗ್ಗೆರೆ ಮುಖ್ಯರಸ್ತೆಯಪಾರ್ವತಿ ನಗರದಲ್ಲಿ ನಡೆದಿದೆ. ಬಾಡಿಗೆ ಮನೆ ನೋಡುವ ನೆಪದಲ್ಲಿ ಬಂದು ಮಹಿಳೆಯ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಚಿನ್ನಾಭರಣ ಲೂಟಿ ಮಾಡಲಾಗಿದೆ. ಮನೆಯೊಳಗೆ ಒಡತಿ ಹೋಗ್ತಿದ್ದಂತೆ ಇಬ್ಬರು ಮಹಿಳೆಯರು ಕಟ್ಟಿಗೆಯಿಂದ ಹೊಡೆದಿದ್ದಾರೆ. ಶಾಂತಮ್ಮ ತಲೆಗೆ ಹೊಡೆದು ಕತ್ತಿ‌ನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ ಶಾಸಕನ ಬೆಂಬಲಿಗರಿಂದ ಗೂಂಡಾಗಿರಿ; ಜೆಡಿಎಸ್​ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ಹಲ್ಲೆಗೊಳಗಾದ ಶಾಂತಮ್ಮರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ನಂದಿನಿ ಲೇಔಟ್ ಪೊಲೀಸರಿಂದ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ಹಲ್ಲೆಗೈದು, ಚಿನ್ನಾಭರಣ ದೋಚಿದ ಮಹಿಳೆಯರಿಗಾಗಿ ಹುಡುಕಾಟ ನಡೆಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆಯಾಗಿರುವ ಅಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು ಇದರಿಂದ ಧಾರವಾಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Mandya News: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್​ ಕುಡಚಿ ತಮ್ಮ ಮನೆ ಮುಂದೆ ಕುಳಿತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಮಚ್ಚಿನಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಮಹಮ್ಮದ್​ ಕುಡಚಿ ಮನೆ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ ಮನೆ ಎದುರೇ ಭೀಕರವಾಗಿ ಕೊಲೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.