AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆಯದ ಚರ್ಚೆ: ವಿರೋಧಪಕ್ಷಗಳ ಅಸಹಕಾರವೇ ಕಾರಣ ಎಂದ ಮುರುಗೇಶ್ ನಿರಾಣಿ

ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ನಿರಾಣಿ ಸ್ಪಷ್ಟಪಡಿಸಿದರು.

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ನಡೆಯದ ಚರ್ಚೆ: ವಿರೋಧಪಕ್ಷಗಳ ಅಸಹಕಾರವೇ ಕಾರಣ ಎಂದ ಮುರುಗೇಶ್ ನಿರಾಣಿ
ಸಚಿವ ಮುರುಗೇಶ್ ನಿರಾಣಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 25, 2021 | 5:29 PM

Share

ಬಾಗಲಕೋಟೆ: ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಮೂರು ದಿನಗಳನ್ನು ಮೀಸಲಿಡುವುದಾಗಿ ತಿಳಿಸಲಾಗಿತ್ತು. ಅದರೆ ವಿರೋಧಪಕ್ಷಗಳು ಸಹಕಾರ ನೀಡದ ಕಾರಣ ಸದನದ ಸಮಯ ವ್ಯರ್ಥವಾಯಿತು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸದನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಸರಿಯಾದ ಚರ್ಚೆ ನಡೆಯದ ಬಗ್ಗೆ ಜನರು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿಯಿದೆ ಎಂದ ಅವರು, ವಿರೋಧ ಪಕ್ಷಗಳು ಸಹಕಾರ ನೀಡದ ಕಾರಣ ಸದನದ ಸಮಯ ವ್ಯರ್ಥವಾಯಿತು. ಈ ಬಗ್ಗೆ ಸಚಿವನಾಗಿ ನನಗೂ ಬೇಸರವಿದೆ ಎಂದರು.

ಬಾಗಲಕೋಟೆಯಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಜೆಂಡಾ ಪ್ರಕಾರ ಸದನ ನಡೆಯಲು ಎಲ್ಲರೂ ಸಹಕರಿಸಬೇಕು. ಮುಂದಿನ ಬಜೆಟ್ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಲಾಗುವುದು. ಈಗ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ಈ ಬಗ್ಗೆ ಅರೋಪ-ಪ್ರತ್ಯಾರೋಪಗಳು ನಡೆಯುವುದು ಬೇಡ. ನಾವು ಹಿಂದುಳಿಯಲು ಈ ಪ್ರವೃತ್ತಿಯೇ ಮುಖ್ಯ ಕಾರಣ. ಬಾಗಲಕೋಟೆಯಲ್ಲಿ ಆಲಮಟ್ಟಿ ಜಲಾಶಯ ನಿರ್ಮಾಣವಾಗಿ 55 ವರ್ಷಗಳಾದವು. ಈ ಕಾಮಗಾರಿಗೆ ವೇಗ ಸಿಕ್ಕಿದ್ದು ಕಳೆದ 20 ವರ್ಷಗಳಲ್ಲಿ. ಈ ಹಿಂದಿನ 40 ವರ್ಷ ಇದೇ ಸಿದ್ದರಾಮಯ್ಯ ಅವರ ಪಕ್ಷದ ಸರ್ಕಾರವೇ ಇತ್ತಲ್ಲವೇ? ಆಗ ಏಕೆ ಕಾಮಗಾರಿ ನಿರ್ವಹಿಸಲಿಲ್ಲ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನ್ನ ಹಿರಿಯ ಅಣ್ಣನಂತಿದ್ದಾರೆ. 30 ವರ್ಷಗಳಿಂದಲೂ ಅವರೊಡನೆ ನನಗೆ ಆತ್ಮೀಯತೆ ಇದೆ. ಕಾರ್ಖಾನೆಗೆ ಸಂಬಂಧಿಸಿದ್ದೂ ಸೇರಿದಂತೆ ನನ್ನ ವೈಯಕ್ತಿಕ ಸಮಸ್ಯೆಗಳನ್ನೂ ಅವರೊಂದಿಗೆ ಹಂಚಿಕೊಳ್ಳುವಷ್ಟು ಆಪ್ತತೆ ಇದೆ. ಕಾಣದ ಶಕ್ತಿಗಳು ನಮ್ಮ ಸಂಬಂಧ ಹಾಳು ಮಾಡಲು ಯತ್ನಿಸುತ್ತಿವೆ. ಬಸವರಾಜ ಬೊಮ್ಮಾಯಿ ಉತ್ತಮ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಸದ್ಯಕ್ಕೆ ಇಲ್ಲ. ಸಚಿವ ಸಂಪುಟ ಪುನಾರಚನೆಯ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು.

ನಾನು ಹುಬ್ಬಳಿಗೆ ಹೋದರೆ ಬೊಮ್ಮಾಯಿ ಮನೆಗೆ ಹೋಗಿ ಚಹಾ ಕುಡಿಯದೇ ಮುಂದೆ ಹೋಗಲ್ಲ. ಬೆಂಗಳೂರಿನಲ್ಲಿ ಇದ್ದಾಗ ಅವರೂ ನಮ್ಮ ಮನೆಗೆ ಬರುತ್ತಿರುತ್ತಾರೆ. ಕಾಣದ ಶಕ್ತಿಗಳು ಈ ಸಂಬಂಧವನ್ನು ದೂರ‌ ಮಾಡಲು ಯತ್ನಿಸುತ್ತಿವೆ ಎಂದರು. ಕಾಣದ ಶಕ್ತಿಗಳು ಎಂದರೆ ನಿಮ್ಮ ಪಕ್ಷದಲ್ಲಿಯೇ ಇರುವವರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಗೊತ್ತಿಲ್ಲ, ಇರಬಹುದು ಅಥವಾ ಇರಲಿಕ್ಕಿಲ್ಲ, ಅದರ ಬಗ್ಗೆ ನಾನು ಈಗ ಪ್ರತಿಕ್ರಿಯಿಸುವುದಿಲ್ಲ. ಈ ಹಿಂದೆ ಎರಡು ಬಾರಿ ಪ್ರತಿಕ್ರಿಯಿಸಿದ್ದೆ ಎಂದರು.

ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪನವರು ಮಾತನಾಡಿದ ನಂತರ ನಾನು ಈ ಬಗ್ಗೆ ಕ್ಲ್ಯಾರಿಫೈ ಮಾಡಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಶಿಗ್ಗಾಂವಿಯಲ್ಲೂ ಹೇಳಿದ್ದೇನೆ. ಒಂದಿಲ್ಲ ಒಂದು ದಿನ ಅವರಿಗೆ ಕೇಂದ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೇನೆ. 2023ರ ಒಳಗೆ ಇಂಥ ಬೆಳವಣಿಗೆಯಾಗುತ್ತದೆ ಎಂದು ನಾನು ಹೇಳಿಲ್ಲ ಎಂದರು.

ಕಾಲುನೋವಿನ ಚಿಕಿತ್ಸೆಗಾಗಿ ಬೊಮ್ಮಾಯಿ ವಿದೇಶಕ್ಕೆ ಹೋಗುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಬೇರೆ ದೇಶಕ್ಕೆ ಹೋಗ್ತಾರೆ ಎಂದು ನಿಮಗೆ ಹೇಳಿದ್ದು ಯಾರು? ಈ ಬಗ್ಗೆ ಮುಖ್ಯಮಂತ್ರಿ ಸ್ವತಃ ಎಲ್ಲಿಯೂ ಮಾತನಾಡಿಲ್ಲ. ಈಗ ನನಗೂ ಕಾಲು ನೋವು ಇದೆ. ಕೆಲವು ಸಲ ಬಡಗಿ ಹಿಡಿದು ಹೋಗುತ್ತೇನೆ. ಹಾಗೆಂದು ಅಮೆರಿಕಾಕ್ಕೆ ಹೋಗ್ತೇನಾ ಎಂದು ಪ್ರಶ್ನಿಸಿದರು.

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕೆಲ ಕನ್ನಡಪರ ಸಂಘಟನೆಗಳು ಡಿ 31ರಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಂಇಎಸ್ ಬಗ್ಗೆ ಸರ್ವಾನುಮತದಿಂದ ವಿಧಾನಸಭೆ, ವಿಧಾನ ಪರಿಷತ್​ನಲ್ಲಿ ತೀರ್ಮಾನ ಆಗಿದೆ. ಇದಕ್ಕಾಗಿ ವಿರೋಧ ಪಕ್ಷದ ನಾಯಕರು ಮತ್ತು ಆ ಪಕ್ಷಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಕಠಿಣವಾದ ಕಾನೂನು ಬಂದಿರುವುದರಿಂದ ಮುಂದೆ ಆ ರೀತಿ ಅನಾಹುತಗಳು ಆಗುವುದಿಲ್ಲ. ಕಾನೂನಿನ ಪ್ರಕಾರ ಎಲ್ಲವನ್ನೂ ನಿಯಂತ್ರಣದಲ್ಲಿ ಇರಿಸಲು ಸಾಧ್ಯವಿದೆ. ಬಂದ್ ಬಗ್ಗೆ ನಮ್ಮ ಪಕ್ಷದ ಹಿರಿಯರು, ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‌ ಕಂಪನಿಗಳಿಗೆ ಆಹ್ವಾನ ನೀಡಿದ ಸಚಿವ ಮುರುಗೇಶ್ ನಿರಾಣಿ ಇದನ್ನೂ ಓದಿ: ನಮ್ಮ ನಾಯಕ ಮುರುಗೇಶ್ ನಿರಾಣಿ ಆದಷ್ಟು ಬೇಗ ಸಿಎಂ ಆಗುತ್ತಾರೆ: ಕೆಎಸ್ ಈಶ್ವರಪ್ಪ ಹೇಳಿಕೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ