AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಮೇಲೆ ಸಚಿವರು, ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್ ಕಟೀಲ್​​

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​, ಸಿಎಂ ಸಿದ್ದರಾಮಯ್ಯ ಮೇಲೆ ಸಚಿವರು, ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಶ್ವಾಸವಿಲ್ಲದ ಕಾರಣ ಬ್ರೇಕ್​ಫಾಸ್ಟ್​ ಮೀಟಿಂಗ್ ಕರೆದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೇಲೆ ಸಚಿವರು, ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ: ನಳಿನ್ ಕುಮಾರ್ ಕಟೀಲ್​​
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಸಿದ್ದರಾಮಯ್ಯ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2023 | 7:05 PM

ಬಾಗಲಕೋಟೆ, ನವೆಂಬರ್​​​​​ 04: ಸಿಎಂ ಸಿದ್ದರಾಮಯ್ಯ ಮೇಲೆ ಸಚಿವರು, ಶಾಸಕರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು (Nalin Kumar Kateel) ಕಿಡಿಕಾರಿದ್ದಾರೆ. ಜಿಲ್ಲೆಯ ಬೀಳಗಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ವಿಶ್ವಾಸವಿಲ್ಲದ ಕಾರಣ ಬ್ರೇಕ್​ಫಾಸ್ಟ್​ ಮೀಟಿಂಗ್ ಕರೆದಿದ್ದಾರೆ. ರೈತರ ಪರವಾಗಿ, ಬರದ ಕುರಿತು ನಡೆದ ಸಭೆ ಅಲ್ಲ. ಕಾಂಗ್ರೆಸ್​​ ಸರ್ಕಾರಕ್ಕೆ ರೈತರ ಶಾಪ ತಟ್ಟಿ ಆಂತರಿಕ ಜಗಳ ಜಾಸ್ತಿ ಆಗುತ್ತೆ. ಆ ಕಾರಣಕ್ಕಾಗಿಯೇ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ವಿರೋಧ ಪಕ್ಷದಲ್ಲಿ ಇರಿ ಎಂದು ಜನ ಆಶಿರ್ವಾದ ಮಾಡಿದ್ದಾರೆ

ರಾಜ್ಯದಲ್ಲಿ ಬರ ತಾಂಡವ, ಅಸಮಾಧಾನಿತ ಶಾಸಕರು ಬಿಜೆಪಿ ಬಾಗಿಲು ತಟ್ಟಿದ್ದಾರೆಂಬ ವಿಚಾರವಾಗಿ ಮಾತನಾಡಿದ ಅವರು, ನಮಗೆ ಇಂತಹ ಅನಿವಾರ್ಯತೆಗಳಿಲ್ಲ. ನಾವು ವಿರೋಧ ಪಕ್ಷದಲ್ಲಿ ಇರಿ ಎಂದು ಜನ ಆಶಿರ್ವಾದ ಮಾಡಿದ್ದಾರೆ. ನಾವು ಆ ಬಗ್ಗೆ ಹೋರಾಟಗಳನ್ನ ಮಾಡ್ತೀದ್ದಿವಿ. ಆದರೆ ಇವತ್ತು ಕಾಂಗ್ರೆಸ್​ನಲ್ಲಿ ಆಪರೇಷನ್ ಹಸ್ತ ನಡಿಯುತ್ತಿದೆ. ನಲವತೈದು ಜನ ಗುಂಪುಗಾರಿಕೆ ಆಗಿದೆ. ಡಿಕೆ ಶಿವಕುಮಾರ್​, ಸತೀಶ್ ಜಾರಕಿಹೊಳಿ ತಂಡ, ಸಿದ್ದರಾಮಯ್ಯ ತಂಡ, ಪರಮೇಶ್ವರ್ ತಂಡ ಹಾಗೂ ಪ್ರಿಯಾಂಕ್ ಖರ್ಗೆ ತಂಡ. ಹೀಗೆ ಈ ತಂಡಗಳ ಒಳಗೆ ಆಪರೇಷನ್ ಹಸ್ತ ನಡೆಯುತ್ತಿದೆ ಎಂದರು.

ಸಿದ್ದರಾಮಯ್ಯ ಅವರಿಗೆ ಭಯ ಕಾಡುತ್ತಿದೆ

ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನೋಡಿ ಯಾರಿಗೆ ಭಯ ಇರುತ್ತದೆ ಅವರು ಹೇಳುತ್ತಾರೆ. ಭಯ ಇಲ್ಲದಿದ್ದರೆ ಯಾಕೆ ಹೇಳಿಕೆ ಕೊಡಬೇಕು. ಯಾಕೆ ಕರೆದು ಕರೆದು ಹೇಳುತ್ತಾರೆ ನಾನೇ ಐದು ವರ್ಷ ಅಂತ. ಯಾಕೆಂದರೆ ಅವರಿಗೆ ಭಯ ಕಾಡುತ್ತಿದೆ. ಕಾಂಗ್ರೆಸ್​ನಲ್ಲಿ ಅವರು ಹೊರಗಿನವರಾಗಿದ್ದಾರೆ. ನಾನು ಹೊರಗಿನವ ಎಂಬ ಭಾವನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಆ ಆತಂಕದ ರಕ್ಷಣೆಗೋಸ್ಕರ ನಾನು ಸರಿಯಾಗಿ ಇದ್ದೇನೆ ಎಂದು ತೋರಿಸುವ ಪ್ರಯತ್ನ ಸಿದ್ದರಾಮಯ್ಯ ಮಾಡ್ತಿದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೊದಲು ಎನ್‌ಡಿಎನಿಂದ ಹೊರ ಬಂದು ಮಾತನಾಡಲಿ: ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟ ಡಿಕೆ ಶಿವಕುಮಾರ್‌

ಭಯ ಯಾಕೆ ಕಾಡ್ತಿದೆ ಅಂದರೆ. ಕಾಂಗ್ರೆಸ್​ನವರು ಇವರನ್ನು ಯಾರು ಒಪ್ಪಿಕೊಳ್ಳುತ್ತಿಲ್ಲ. ಇವತ್ತು ಕಾಂಗ್ರೆಸ್ ನಲ್ಲಿ ಎರಡು ತಂಡ ಕೆಲಸ ಮಾಡುತ್ತಿದೆ. ಒಂದು ಹೊರಗಿನಿಂದ ಬಂದವರ ಕಾಂಗ್ರೆಸ್. ಇನ್ನೊಂದು ಮೊದಲಿಂದ ಇದ್ದ ಕಾಂಗ್ರೆಸ್. ಮೂಲ ನಿವಾಸಿಗಳು ಹಾಗೂ ಅನಿವಾಸಿ ಕಾಂಗ್ರೆಸ್ಸಿಗರ ಮಧ್ಯೆ ಸಿದ್ದರಾಮಯ್ಯ ಸಿಲುಕಿದ್ದಾರೆ ಎಂದರು.

ಜನವರಿ ತಿಂಗಳೊಳಗೆ ರಾಜ್ಯ ಸರ್ಕಾರ ಪತನವಾಗುತ್ತೆ. ಇದನ್ನು ನಾನು ಹೇಳುತ್ತಿಲ್ಲ, ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ. ನಾವು ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿರಲಿ ಅಂತಾ ಹೇಳ್ತೀವಿ. ಅವರೇ ಅವರ ಆಪರೇಷನ್ ಹಸ್ತದಿಂದ ಬೀಳುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ