ಡೆಂಘಿ ಹಾವಳಿ‌‌ ಮಧ್ಯೆ ಬಾಗಲಕೋಟೆಯಲ್ಲಿ ಮಕ್ಕಳ‌ ಜೀವ ಹಿಂಡುತ್ತಿದೆ ವೈರಲ್ ಫೀವರ್!

ಶಾಲೆಗಳು ಆರಂಭವಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ, ಆಗಲೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಕಾರಣ ವೈರಲ್​ ಫೀವರ್​. ಭಾಗಲಕೋಟೆ ಜಿಲ್ಲೆಯಲ್ಲಿ ಪ್ರತಿದಿನ 200ಕ್ಕೂ ಹೆಚ್ಚು ಮಕ್ಕಳು ವೈರಲ್​ ಫೀವರ್​ನಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಘಿ ಹಾವಳಿ‌‌ ಮಧ್ಯೆ ಬಾಗಲಕೋಟೆಯಲ್ಲಿ ಮಕ್ಕಳ‌ ಜೀವ ಹಿಂಡುತ್ತಿದೆ ವೈರಲ್ ಫೀವರ್!
ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Jul 01, 2024 | 7:42 AM

ಬಾಗಲಕೋಟೆ, ಜುಲೈ 01: ಈಗ ಎಲ್ಲ ಕಡೆ‌ ಡೆಂಘಿ (Dengue) ಹಾವಳಿ ಜೋರಾಗಿದೆ. ಡೆಂಘಿ‌ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ (Health Department) ಅಧಿಕಾರಿಗಳು‌ ಸತತ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ವೈರಲ್ ಫೀವರ್ (Viral fever) ಕಾಟ ಶುರುವಾಗಿದೆ. ಆಸ್ಪತ್ರೆಗಳಲ್ಲಿ ಪುಟಾಣಿ ಮಕ್ಕಳ ರೋಧನ ಹೆಚ್ಚಾಗಿದೆ. ಕೆಮ್ಮು, ನೆಗಡಿ, ಕಫ, ಉಸಿರಾಟದ ತೊಂದರೆಯಿಂದ ಮಕ್ಕಳು ಬಳಲುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಡೆಂಘಿ ಹಾವಳಿ ಒಂದು ಕಡೆಯಾದರೆ, ಚಿಕ್ಕಮಕ್ಕಳಿಗೆ ವೈರಲ್ ಫೀವರ್ ಕಾಟ ಹೆಚ್ಚಾಗಿದೆ. ಮಕ್ಕಳನ್ನು ವೈರಲ್ ಫೀವರ್ ಹೈರಾಣು ಮಾಡಿದೆ. ಜಿಲ್ಲೆಯಲ್ಲಿ ಪ್ರತಿದಿನ 200ಕ್ಕೂ ಹೆಚ್ಚು ಮಕ್ಕಳು ವೈರಲ್ ಫೀವರ್​ನಿಂದ ಬಳಲುತ್ತಿದ್ದು, ಸರಕಾರಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಹೆಚ್ಚಿನ‌‌ ಮಕ್ಕಳಿಗೆ ಕೆಮ್ಮು, ಜ್ವರ, ನೆಗಡಿ, ಕಫ, ಉಸಿರಾಟದ ತೊಂದರೆ ಇದೆ. ಇದರಿಂದ ಬಾಗಲಕೋಟೆ ಜಿಲ್ಲಾದ್ಯಂತ ಆಸ್ಪತ್ರೆಗಳಿಗೆ ಮಕ್ಕಳು ದಾಖಲಾಗುತ್ತಿದ್ದಾರೆ.

ಇದನ್ನೂ ಓದಿ: ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣ ಪತ್ತೆ; ಬೆಂಗಳೂರಿನಲ್ಲಿ 2457 ಪ್ರಕರಣ

ಪೋಷಕರು ಈಗ ಮಕ್ಕಳ ಬಗ್ಗೆ ಬಹಳ ಜಾಗೃತಿ ವಹಿಸಬೇಕು. ಚಳಿಗಾಳಿ, ಬಿಸಿಲಿಗೆ ಮಕ್ಕಳು ಓಡಾಡದಂತೆ ತಡೆಯಬೇಕು. ಮಕ್ಕಳಿಗೆ ಚಳಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಮುಂಜಾಗ್ರತಾ ಕ್ರಮ ಕೈಗೊಂಡದೆ ಮಾತ್ರ ವೈರಲ್ ಫೀವರ್ ತಡೆಯಲು ಸಾಧ್ಯವಾಗುತ್ತೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ. ಪ್ರಕಾಶ್ ಬಿರಾದಾರ ಹೇಳಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ವೈರಲ್ ಫೀವರ್​ನಿಂದ ಮಕ್ಕಳ ಆಸ್ಪತ್ರೆಗಳು ಭರ್ತಿಯಾಗುತ್ತಿವೆ. ಒಪಿಡಿಯಲ್ಲಿ ಪ್ರತಿದಿನ 200ಕ್ಕೂ ಹೆಚ್ಚು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಪರಿಸ್ಥಿತಿಯ ಮಕ್ಕಳಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಶಾಲೆಗಳು ಆರಂಭವಾಗಿದ್ದು, ವೈರಲ್ ಫೀವರ್ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿದೆ.

ಆಸ್ಪತ್ರೆಗೆ ದಾಖಲಾದ ಮಗು

ವೈರಲ್ ಫಿವರ್​ನಿಂದ ಮಕ್ಕಳನ್ನು ಶಾಲೆಗೆ ಕಳಿಸಲು ಭಯ ಪಡುವಂತಾಗಿದೆ. ಶಾಲೆಗೆ ಕಳಿಸಿದರೆ ಮಕ್ಕಳಿಗೆ ವೈರಲ್ ಫೀವರ್ ಬರಬಹುದು ಎಂಬ ಆತಂಕ ಕಾಡುತ್ತಿದೆ. ಇದಕ್ಕೆ ಮಕ್ಕಳು ಮನೆಯಲ್ಲಿ ಇರುವುದೆ ಒಳ್ಳೆಯದು ಅಂತ ಅನ್ನಿಸುತ್ತಿದೆ. ಮಕ್ಕಳನ್ನು ಹೊರಗಡೆ ಬಿಡದೆ ಆದಷ್ಟು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತಿಕ್ಷಣ ಮಕ್ಕಳದ್ದೇ ಚಿಂತೆಯಾಗಿದೆ. ಜೊತೆಗೆ ವೃದ್ದರಿಗೂ ವೈರಲ್ ಫೀವರ್ ಕಾಡುತ್ತಿದೆ ಎಂದು ಪೋಷಕಿ ದೀಪಾ ಹೇಳಿದರು.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ವೈರಲ್ ಫೀವರ್ ಮಕ್ಕಳು ಹಾಗೂ ವೃದ್ದರಿಗೆ ಸಂಕಷ್ಟ ತಂದಿದೆ. ಮುಂಜಾಗ್ರತೆ ಬಹಳ‌ ಮುಖ್ಯವಾಗಿದ್ದು, ಜನರು ಮಕ್ಕಳು ಮತ್ತು ವೃದ್ದರ ಬಗ್ಗೆ ವಿಶೇಷ‌ ಗಮನ‌ ಹರಿಸಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ