AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಳಗಿಯಲ್ಲಿ ಮಕ್ಕಳ‌ ಮೂಲಕ ಬಿಜೆಪಿ ಪ್ರಚಾರ: ಮುರುಗೇಶ್ ನಿರಾಣಿ ಭಾವಚಿತ್ರರುವ ಗಿಫ್ಟ್ ಹಂಚಿಕೆ ಆರೋಪ, ರೈತ ಸಂಘದಿಂದ ಪ್ರತಿಭಟನೆ

ಬೀಳಗಿ ಕ್ಷೇತ್ರದ ವಿವಿಧ ಶಾಲಾ, ಕಾಲೇಜುಗಳಲ್ಲಿ ಸಚಿವ ನಿರಾಣಿ ಫೋಟೋ, ಪಕ್ಷದ ಚಿಹ್ನೆ ಇರುವ ಅಲಾರಮ್ ಗಿಫ್ಟ್ ಹಂಚಿಕೆ​ ಆರೋಪ ಮಾಡಲಾಗಿದೆ.

ಬೀಳಗಿಯಲ್ಲಿ ಮಕ್ಕಳ‌ ಮೂಲಕ ಬಿಜೆಪಿ ಪ್ರಚಾರ: ಮುರುಗೇಶ್ ನಿರಾಣಿ ಭಾವಚಿತ್ರರುವ ಗಿಫ್ಟ್ ಹಂಚಿಕೆ ಆರೋಪ, ರೈತ ಸಂಘದಿಂದ ಪ್ರತಿಭಟನೆ
ಗಿಫ್ಟ್ ಹಂಚಿಕೆ ಆರೋಪ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 27, 2023 | 4:21 PM

Share

ಬಾಗಲಕೋಟೆ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಜನಪ್ರತಿನಿಧಿಗಳನ್ನು ಮತದಾರರನ್ನು ಸೆಳೆಯಲು ವಿವಿಧ ಉಡುಗರೆಗಳನ್ನು ನೀಡುತ್ತಿದ್ದಾರೆ. ಆ ಮೂಲಕ ಗಿಫ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಸದ್ಯ ಜಿಲ್ಲೆಯ ಬೀಳಗಿ ಕ್ಷೇತ್ರದ ವಿವಿಧ ಶಾಲಾ, ಕಾಲೇಜುಗಳಲ್ಲಿ ಸಚಿವ ನಿರಾಣಿ ಫೋಟೋ, ಪಕ್ಷದ ಚಿಹ್ನೆ ಇರುವ ಅಲಾರಮ್ ಗಿಫ್ಟ್ ಹಂಚಿಕೆ​ ಆರೋಪ ಮಾಡಲಾಗಿದೆ. ಬೀಳಗಿ ಪಟ್ಟಣದ ನಿರಾಣಿ ಪಿಯು ಕಾಲೇಜ್​​ ವಿದ್ಯಾರ್ಥಿಗಳಿಗೆ  ಹಂಚಿಕೆ ಮಾಡಿದ್ದು, ಹಾಗಾಗಿ ಬಿಇಒ ಕಚೇರಿ ಮುಂದೆ ರೈತ ಸಂಘದಿಂದ ಪ್ರತಿಭಟನೆ ಮಾಡಲಾಯಿತು. ಇನ್ನೂ ಹಲವು ಕಡೆ ವಿದ್ಯಾರ್ಥಿಗಳಿಗೆ ಅಲಾರಮ್​ ಹಂಚಿಕೆ ಆರೋಪ ಮಾಡಿದ್ದಾರೆ. ಇದಕ್ಕೆ ಶಾಲಾ, ಕಾಲೇಜು ಮಂಡಳಿ ಅಧಿಕಾರಿಗಳು, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಬೆಂಬಲ ನೀಡಿದ್ದಾರೆಂದು ಆರೋಪಿಸುತ್ತಿದ್ದು, ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳುವಂತೆ ರೈತರು ಆಗ್ರಹಿಸುತ್ತಿದ್ದಾರೆ.

ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು

ಜನರ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಅಲಾರಾಮ್ ವಾಪಸ್ಸು ಕಳಿಸಿದ್ದಾಗಿ ಬೀಳಗಿ ಬಿಇಒ ಆರ್​.ಆರ್ ಸದಲಗಿ ಮಾಹಿತಿ ನೀಡಿದ್ದಾರೆ. 10 ಶಾಲೆಯಲ್ಲಿ ಅಲಾರಾಮ್ ಬಾಕ್ಸ್ ಇಳಿಸಿದ್ದರು. ಅವುಗಳನ್ನು ವಾಪಸ್ ಕೊಟ್ಟಿದ್ದೇವೆ. 16 ಶಾಲೆಗಳಿಗೆ ಕೊಡೋದಕ್ಕೆ ತಂದಾಗ ವಾಪಸ್ ಕೊಟ್ಟಿದ್ದೇವೆ. ಈ ಬಗ್ಗೆ ಸಂಬಂಧಪಟ್ಟ ಶಿಕ್ಷಕರ ಬಗ್ಗೆ ಡಿಡಿಪಿಐ ಗೂ ವರದಿ ಸಲ್ಲಿಸಿದ್ದಾಗಿ ಹೇಳಿದರು.

ಇದನ್ನೂ ಓದಿ: ಬೆಳಗಾವಿ ಕ್ಷೇತ್ರದಲ್ಲಿ ಗಿಫ್ಟ್​ ಪಾಲಿಟಿಕ್ಸ್​​: ರಮೇಶ್​ ಜಾರಕಿಹೊಳಿ ಆಪ್ತನಿಂದ ಸೀರೆ ಹಂಚಿಕೆ

ಕುಕ್ಕರ್ ಗಿಫ್ಟ್ ಬೇಡಾ, ನಾನು 10 ಕೋಟಿ ಖರ್ಚು ಮಾಡುವೆ ಬನ್ನೀ- ರಮೇಶ್ ಜಾರಕಿಹೊಳಿ

ಇನ್ನು ಇತ್ತೀಚೆಗೆ ಬೆಳಗಾವಿಯಲ್ಲಂತೋ ಮತದಾರರನ್ನು ತಮ್ಮತ್ತ ಸೆಳೆಯಲು ಅಭ್ಯರ್ಥಿಗಳು ಕುಸ್ತಿಗೆ ಬಿದ್ದಿದ್ದರು. ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್​ ಫೈಟ್ ಜೋರಾಗಿತ್ತು. ಭರಪೂರ ಗಿಫ್ಟ್ ಆಯ್ತು ಈಗ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಝಣ ಝಣ ಕಾಂಚಾಣ ಸದ್ದು ಮಾಡಿತ್ತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಮಾವೇಶಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ವಾಹನ ಚಾಲಕರಿಗೆ ಜನರ ಪ್ರಯಾಣದ ಚಾರ್ಚ್​ ಸಮೇತ ಕಂತೆ ಕಂತೆ ಹಣದ ನೋಟುಗಳನ್ನು ನೀಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಕೈಯಲ್ಲಿ ಬುಕ್ ಹಿಡಿದು ಪಟ್ಟಿ ಮಾಡಿ ಬೆಂಬಲಿಗರು ವಾಹನ ಚಾಲಕರಿಗೆ ಹಣ ನೀಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಡಿತ್ತು. ವಿಡಿಯೋ ನೋಡಿದ ಸಾರ್ವಜನಿಕರು ಟೀಕೆ ಮಾಡಿದ್ದರು.

ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮಿಕ್ಸರ್ ಹಂಚಿಕೆ

ಮತ್ತೊಂದೆಡೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಮಾವೇಶದ ಎರಡು ಕಿಮೀ ಅಂತರದಲ್ಲೇ ಮಿಕ್ಸರ್ ಹಂಚಿಕೆ ಮಾಡಲಾಗಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಶುಗರ್ಸ್ ವತಿಯಿಂದ ಗ್ರಾಮೀಣ ಉತ್ಸವ ಹೆಸರಲ್ಲಿ ಮಿಕ್ಸರ್, ಪಾತ್ರೆ ಹಂಚಿಕೆ ಮಾಡಲಾಗಿತ್ತು.

ಇದನ್ನೂ ಓದಿ: Assembly Polls: ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

ಶತಾಯ ಗತಾಯ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಅಲ್ಲದೆ ಗಿಫ್ಟ್‌ಗೆ ಪ್ರತಿಯಾಗಿ ಹಣ ನೀಡೋದಾಗಿ ಗೋಕಾಕ್ ಸಾಹುಕಾರ್ ಬಹಿರಂಗ ಘೋಷಣೆ‌ ಮಾಡಿದ್ದಾರೆ. ಟಿಫಿನ್ ಬಾಕ್ಸ್, ಮಿಕ್ಸಿ ಸೇರಿದಂತೆ ಎಲ್ಲಾ 3 ಸಾವಿರದ ಐಟಮ್​ಗಳನ್ನು ಲಕ್ಷ್ಮೀ ಹೆಬ್ಬಾಳ್ಕರ್ ನೀಡುತ್ತಿದ್ದಾರೆ. ಆದ್ರೆ ನಾವು ಆರು ಸಾವಿರ ರೂಪಾಯಿ ನೀಡುತ್ತೇವೆ ವೋಟ್ ಹಾಕಿ ಎಂದು ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಅವರು ಖರ್ಚು ಮಾಡಿದ್ದಕ್ಕಿಂತ ಹತ್ತು ಕೋಟಿ ಹೆಚ್ಚು ಖರ್ಚು ಮಾಡ್ತೀನಿ ಎಂದು ಸಮಾವೇಶದಲ್ಲಿ ರಮೇಶ್ ಜಾರಕಿಹೊಳಿ ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Fri, 27 January 23

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ