ಮನ್ ಕಿ ಬಾತ್​ನಲ್ಲಿ ಬಾಗಲಕೋಟೆಯ ಗೊಂದಲಿ ಪದ ಹಾಡುಗಾರನ ಗುಣಗಾನ ಮಾಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ.25) ರಂದು 110ನೇ ಮನ್​ ಕೀ ಬಾತ್ ​ (ರೇಡಿಯೋ ಕಾರ್ಯಕ್ರಮ) ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಾಗಲಕೋಟೆಯ ಗೊಂದಲಿ ಪದ ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಹೊಗಳಿದರು.

ಬಾಗಲಕೋಟೆ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ಫೆ.25) ರಂದು 110ನೇ ಮನ್​ ಕೀ ಬಾತ್ (Mann Ki Baat)​ (ರೇಡಿಯೋ ಕಾರ್ಯಕ್ರಮ) ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಬಾಗಲಕೋಟೆಯ (Bagalakote) ಗೊಂದಲಿ ಪದ (Gondhali Pada) ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ (Venkappa Ambaji Sugtekr) ಅವರ ಗುಣಗಾನ ಮಾಡಿದರು.

“ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಬಾಗಲಕೋಟೆಯ ನವನಗರದ ನಿವಾಸಿಯಾಗಿರುವ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು ಸಾವಿರಕ್ಕೂ ಅಧಿಕ ಜನಪದ (ಗೊಂದಲಿ) ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದಾರೆ. ಹಾಗೆಯೇ, ಇವರು ಒಂದು ರೂಪಾಯಿಯನ್ನೂ ಪಡೆಯದೆ ಸಾವಿರಾರು ಜನರಿಗೆ ಜನಪದ ಹಾಡುಗಳನ್ನು ಹಾಡುವುದನ್ನು ಕಲಿಸಿದ್ದಾರೆ. ಇವರ ಸೇವೆ ಶ್ಲಾಘನೀಯವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.

ಇದನ್ನೂ ಓದಿ: ಹಳ್ಳಿಗಳಲ್ಲಿರುವ ಪ್ರತಿಯೊಂದು ಮಹಿಳೆಯನ್ನೂ ಲಕ್ಷಾಧಿಪತಿಯನ್ನಾಗಿ ಮಾಡುವುದು ನಮ್ಮ ಧ್ಯೇಯ: ಮೋದಿ

81 ವರ್ಷರ ವೆಂಕಪ್ಪ ಸುಗತೇಕರ್ ಅವರು 150ಕ್ಕೂ ಹೆಚ್ಚು ಕಥೆ ಹೇಳುವ ಸಾವಿರಕ್ಕೂ ಅಧಿಕ ಗೊಂದಲಿ ಹಾಡುಗಳನ್ನು ಹಾಡಿದ್ದಾರೆ. ಕಳೆದ 71 ವರ್ಷಗಳಿಂದ ಗೊಂದಲಿ ಪದಗಳನ್ನು ಹಾಡುತ್ತಾ ಬಂದಿದ್ದಾರೆ. ವೆಂಕಪ್ಪ ಸುಗತೇಕರ್ ಅವರು ಶಾಲೆಯ ಮೆಟ್ಟಿಲು ಹತ್ತಿಲ್ಲ. ಆದರೆ ಈ ಕಲೆ ಅವರಿಗೆ ವಂಶ ಪಾರಂಪರ್ಯವಾಗಿ ಒಲಿದಿದೆ.
ಗೊಂದಲಿ ಪದ ಸೇವೆಗೆ 2022ರಲ್ಲಿ ಜನಪದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು. 2012ರಲ್ಲಿ ರಾಜ್ಯ ಸರ್ಕಾರ “ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಿದೆ. ವೆಂಕಪ್ಪ ಸುಗತೇಕರ್ ಅವರು ಆಕಾಶವಾಣಿ, ದೂರದರ್ಶನ ಸೇರಿದಂತೆ ರಾಜ್ಯ, ಅಂತರಾಜ್ಯದಲ್ಲಿ ಸಾವಿರಾರು ಕಾರ್ಯಕ್ರಮ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us