ಬಾಗಲಕೋಟೆ: ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 200 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಂದಾಯ ಇಲಾಖೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಬಾರಪೇಟ ಗಲ್ಲಿಯ ಗೋಡೌನ್ನಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸುಲೇಮಾನ್ ಎಂಬುವರ ಗೋಡೌನ್ನಲ್ಲಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಪಡಿತರ ಅಕ್ಕಿ ಸೇರಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಅಕ್ಕಿಯನ್ನು ಸುಲೇಮಾನ್ ಎಂಬುವವರು ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದರು. ಗೋದಾಮಿನಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿರುವ ಬಗ್ಗೆ ನಿನ್ನೆ ರಾತ್ರಿ ಅನಾಮಿಕರಿಂದ ಆಹಾರ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಆಹಾರ ಇಲಾಖೆ ಡಿಡಿ ಶ್ರೀಶೈಲ್ ಕಂಕಣವಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದರು. ಸದ್ಯ ಅಧಿಕಾರಿಗಳು ಗೋಡೌನ್ನ ಸೀಜ್ ಮಾಡಿಕೊಂಡಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಅಕ್ಕಿ
ಇನ್ನು ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೋದೂರಿನ ಟೋಲ್ ಪ್ಲಾಜಾ ಬಳಿ ಅಕ್ಟೋಬರ್ 1ಕ್ಕೆ ನಡೆದಿದೆ. ಆಹಾರ ಇಲಾಖೆ ನಿರೀಕ್ಷಕ ನಿತಿನ್ ಅಗ್ನಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, 340 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿತ್ತು. ಗಂಗಾವತಿಯಿಂದ ಗುಜರಾತ್ಗೆ ಹೊರಟಿದ್ದ ಲಾರಿ ವಶಕ್ಕೆ ಪಡೆದಿದ್ದು, ಸುಮಾರು 8.10 ಲಕ್ಷ ರೂಪಾಯಿ ಅಕ್ಕಿ ವಶಕ್ಕೆ ಪಡೆಯಲಾಗಿತ್ತು.
ಇದನ್ನೂ ಓದಿ
ಪುನೀತ್ ರಾಜ್ಕುಮಾರ್ ಒಡೆತನದ ಪಿಆರ್ಕೆ ಪ್ರೊಡಕ್ಷನ್ ಏನಾಗಲಿದೆ?
ನಾರಿಶಕ್ತಿಗೆ ಉತ್ತಮ ಉದಾಹರಣೆ, ಭಾರತದ ಉಕ್ಕಿನ ಮಹಿಳೆ: ಇಂದಿರಾ ಗಾಂಧಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್
Published On - 1:57 pm, Sun, 31 October 21