AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote: ಪಿಂಚಣಿಗಾಗಿ ಆಗ್ರಹಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕನ ಮನೆಗೆ ಸಿದ್ದರಾಮಯ್ಯ ಭೇಟಿ, ಕುಟುಂಬಕ್ಕೆ ಸಹಾಯಧನ

ಪಿಂಚಣಿಗಾಗಿ ಆಗ್ರಹಿಸಿ ಪ್ರತಿಭಟನಾನಿರತ ನಿವೃತ್ತ ಶಿಕ್ಷಕ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೆಮಠ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.

Bagalkote: ಪಿಂಚಣಿಗಾಗಿ ಆಗ್ರಹಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಶಿಕ್ಷಕನ ಮನೆಗೆ ಸಿದ್ದರಾಮಯ್ಯ ಭೇಟಿ, ಕುಟುಂಬಕ್ಕೆ ಸಹಾಯಧನ
ವಿಪಕ್ಷ ನಾಯಕ ಸಿದ್ದರಾಮಯ್ಯ ಬಾಗಲಕೋಟೆ ನಿವೃತ್ತ ಶಿಕ್ಷಕನ ಮನೆಗೆ ಭೇಟಿ
ವಿವೇಕ ಬಿರಾದಾರ
|

Updated on: Feb 28, 2023 | 1:29 PM

Share

ಬಾಗಲಕೋಟೆ: ಪಿಂಚಣಿಗಾಗಿ (Pension Scheme) ಆಗ್ರಹಿಸಿ ಪ್ರತಿಭಟನಾನಿರತ ನಿವೃತ್ತ ಶಿಕ್ಷಕ (Retired Teacher) ಸಿದ್ದಯ್ಯ ಹಿರೆಮಠ (Siddaiah Hiremath) ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನ ಮನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದಾರೆ. ಬಾಗಲಕೋಟೆ (Bagalkote) ಜಿಲ್ಲೆಯ ಬಾದಾಮಿ (Badami) ತಾಲೂಕಿನ ಪಟ್ಟದಕಲ್ಲಿನಲ್ಲಿರುವ ಶಿಕ್ಷಕನ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರು, ಕುಟುಂಬಕ್ಕೆ ಸಾಂತ್ವಾನ ಹೇಳಿ 2 ಲಕ್ಷ ರೂ. ನೆರವು ನೀಡಿದ್ದಾರೆ.

ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಸಿದ್ದರಾಮಯ್ಯ 2006ನೇ ಇಸ್ವಿಯಲ್ಲಿ ಹೊಸ ಪಿಂಚಣಿ ಯೋಜನೆ ಜಾರಿಗೆ ಬಂತು. ಇದನ್ನು ಕೇಂದ್ರ ಸರಕಾರ ತೀರ್ಮಾನ ಮಾಡುತ್ತೆ. ಅವರು ಮಾಡಿದ್ದನ್ನು ರಾಜ್ಯ ಸರಕಾರ ಮಾಡುತ್ತದೆ. ನಾವು ಈ ಬಗ್ಗೆ ಪರಿಶೀಲು ಹೇಳಿದ್ದೇವೆ. ಈಗ ನಾವು ಸರಕಾರದಲ್ಲಿ ಇಲ್ಲ. ಸರಕಾರದಲ್ಲಿ ಇರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರು ತೀರ್ಮಾನವನ್ನು ಮಾಡಬೇಕು ಎಂದು ಹೇಳಿದರು

ನಿವೃತ್ತ ಶಿಕ್ಷಕ ಸಿದ್ದಯ್ಯ ಸಿದ್ದಯ್ಯ ಹಿರೆಮಠ ನಿಧನಕ್ಕೆ ಕಾರಣ

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಮುಷ್ಕರದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರು ಫೆ.23 ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಆ ಪೈಕಿ ಒಬ್ಬ ನಿವೃತ್ತ ಶಿಕ್ಷಕ ಸಿದ್ದಯ್ಯ ಹಿರೇಮಠ (65) ಚಿಕಿತ್ಸೆ ಫಲಿಸದೆ ಫೆ. 24 ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮೃತ ನಿವೃತ್ತ ಶಿಕ್ಷಕ. ಮೂಲತಃ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್ಲು ನಿವಾಸಿ. ಆಮರಣ, ಅರೆಬೆತ್ತಲೆ, ಭಿಕ್ಷಾಟನೆ ಎಲ್ಲ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

1990 ರಿಂದ ಅನುದಾನರಹಿತ ಶಾಲೆಯಲ್ಲಿ ಶಿಕ್ಷಕರಾಗಿದ್ದು, 2008ರಲ್ಲಿ ಸೇವೆ ಸಲ್ಲಿಸುತ್ತಿದ್ದ ಶಾಲೆ ಅನುದಾನಕ್ಕೆ ಒಳಪಟ್ಟಿತ್ತು. ಬಳಿಕ 2012ರಲ್ಲಿ ನಿವೃತ್ತಿ ಹೊಂದಿದ್ದರು. 9 ವರ್ಷ ಮಾತ್ರ ಸರಕಾರಿ ವೇತನ ಪಡೆದಿದ್ದರು. ನಿವೃತ್ತಿ ನಂತರ ಯಾವುದೇ ಪಿಂಚಣಿಗೆ ಅರ್ಹತೆಯಾಗಲಿಲ್ಲ. ಸದ್ಯ ಪತ್ನಿ, ನಾಲ್ಕು ಜನ ಹೆಣ್ಣುಮಕ್ಕಳು ಒಬ್ಬ ಮಗನನ್ನು ಅಗಲಿದ್ದಾರೆ.

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಪಿಂಚಣಿಗಾಗಿ 141 ದಿನಗಳಿಂದ ಶಿಕ್ಷಕರು ಮುಷ್ಕರ ನಡೆಸುತ್ತಿದ್ದಾರೆ. ಸಿದ್ದಯ್ಯ ಜೊತೆಗೆ ನಿವೃತ್ತ ಶಿಕ್ಷಕ ವೆಂಕಟರಾಜು ಸಹ ಆತ್ಮಹತ್ಯೆಗೆ ಯತ್ನಿಸಿದ್ದರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?