AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಸರ್ಕಾರದಲ್ಲಿ ಪಂಚಮಸಾಲಿ ಮುಖಂಡರಿಗೆ ಬೆದರಿಕೆ ಹಾಕಲಾಗುತ್ತಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜದ 2A ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದ ನಡುವೆ, ಸಮಾಜದ ಮುಖಂಡರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದು, ಏನಾದರೂ ಆದರೆ ರಕ್ತ ಕ್ರಾಂತಿಯಾಗಲಿದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಪಂಚಮಸಾಲಿ ಮುಖಂಡರಿಗೆ ಬೆದರಿಕೆ ಹಾಕಲಾಗುತ್ತಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ & ಸಿದ್ದರಾಮಯ್ಯ
ರವಿ ಹೆಚ್ ಮೂಕಿ, ಕಲಘಟಗಿ
| Updated By: Ganapathi Sharma|

Updated on: Nov 30, 2024 | 5:38 PM

Share

ಬಾಗಲಕೋಟೆ, ನವೆಂಬರ್ 30: 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡುತ್ತಿರುವುದರಿಂದ ಪಂಚಮಸಾಲಿ ಸಮಾಜದ ಮುಖಂಡರಿಗೆ ಕರೆ ಮಾಡಿ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಮಗೆ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 4 ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಕರೆಗಳಿಂದ ಏನಾದರೂ ಆದರೆ ರಕ್ತ ಕ್ರಾಂತಿ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗಲೂ ಹೋರಾಟ ಮಾಡಿದ್ದೆವು. ಬೊಮ್ಮಾಯಿ ಮನೆ ಮುಂದೆಯೇ ಹೋರಾಟ ಮಾಡಿದ್ದೆವು. ಆದರೂ ನಮ್ಮ ಮೇಲೆ ಒಂದು ಕೇಸ್ ಸಹ ದಾಖಲಿಸಿರಲಿಲ್ಲ. ಆದರೆ, ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಬೆದರಿಕೆ ಕರೆಗಳ ಹಿಂದೆ ಶಾಸಕ, ಸಂಸದರು?

ಬೆದರಿಕೆ ಕರೆಗಳ ಹಿಂದೆ ಶಾಸಕರು, ಸಂಸದರು ಇದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಜಯಮೃತ್ಯುಂಜಯಶ್ರೀ ಹೇಳಿದ್ದಾರೆ. ಸ್ವಾಮೀಜಿ ಅವರ ಈ ಹೇಳಿಕೆಯು ಪಂಚಮಸಾಲಿ ಸಮಾಜದ ಮುಖಂಡರಿಗೆ ಬೆದರಿಕೆ ಹಾಕುತ್ತಿರುವುದರ ಹಿಂದೆ ಕಾಂಗ್ರೆಸ್ ಶಾಸಕ, ಸಂಸದರು ಇದ್ದಾರೆಯೇ ಎಂಬ ಅನುಮಾನ ಹುಟ್ಟುಹಾಕಿದೆ.

ಸಮಾಜದ ಜನರ ಭಾವನೆ ಜೊತೆ ಆಟವಾಡುವುದನ್ನು ಬಿಡಬೇಕು. ಬಿಜೆಪಿ ಸರ್ಕಾರ ಇದ್ದಾಗ ಶಾಸಕರು ಹಾಗೂ ಸಿಎಂ ನಮ್ಮ ಬಳಿ ಬರುತ್ತಿದ್ದರು. ಆದರೆ ಈಗ ನಾವು ಶಾಸಕರು ಮತ್ತು ಸಿಎಂ ಬಳಿ ಹೋಗುವಂತಾಗಿದೆ. ನಾವು ಯಾವುದೇ ಶಾಸಕರ ಬಳಿ ಹೋಗುವ ಅಗತ್ಯವಿಲ್ಲ. ಪಕ್ಷದ ಸೂಚನೆ, ನಿಗಮ ಮಂಡಳಿ ಒತ್ತಡಕ್ಕೆ ಒಳಗಾಗಿ ಹೀಗೆ ಮಾತನಾಡುತ್ತಿದ್ದಾರೆ. ಅವರ ಬೆಳವಣಿಗೆಗೆ ತೊಂದರೆ ಆಗಬಹುದು ಅಂತ ನಾವು ಕರೆಯಲ್ಲ ಎಂದು ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: ಬಸವಣ್ಣನ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆಂಬ ಯತ್ನಾಳ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ

ಹಿಂದಿನ ಸರ್ಕಾರ ಸರಿಯಾಗಿ ಮೀಸಲಾತಿ ನೀಡಲಿಲ್ಲ. ಈಗಿನ ಸರ್ಕಾರ ಸಹ ಮಾಡಲಿಲ್ಲ. ಸಿಎಂ ಸೌಜನ್ಯಕ್ಕೂ ನಮ್ಮ ಬಳಿ ಮಾತನಾಡಲಿಲ್ಲ. ಶಾಸಕರು, ಸಿಎಂ ಮಾತನಾಡಲಿಲ್ಲ. ವಕೀಲರ ಮೂಲಕ ಹೋರಾಟ ಮಾಡಿದ್ದೆವು. ಆಗ ಸಿಎಂ ಎರಡು ಗಂಟೆ ನಮ್ಮ ಜೊತೆ ಮಾತನಾಡಿದ್ದರು. ಆಗ ಸಿಎಂ ನೀತಿ ಸಂಹಿತೆ ನೆಪ ಮಾಡಿ ಹಾರಿಕೆ ಉತ್ತರ ಕೊಟ್ಟಿದ್ದರು. ಸಿಎಂ ಹಾಗೂ ಡಿಸಿಎಂ ಸಮಯಾವಕಾಶ ಕೊಡಲಿಲ್ಲ. ಹಿಂದಿನ ಸರ್ಕಾರದ ವರದಿಗೆ ಹಿಂಬರಹ ಸಹ ಕೊಡಲಿಲ್ಲ. ಭರವಸೆಯನ್ನೂ ನೀಡಲಿಲ್ಲ. ಕೊನೆಗೆ ಈಗ ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದೇವೆ. ಈ ಹಿಂದಿನ ಸರ್ಕಾರಗಳಿದ್ದಾಗಲೂ ಹೋರಾಟ ಮಾಡಿದ್ದೇವೆ. ನಾಡಿನಾದ್ಯಂತ ನಮ್ಮ ಸಮಾಜ ಬಂಧುಗಳು ಯಾರ ಮಾತುಗಳಿಗೂ ಕಿವಿಗೊಡಬೇಡಿ. ಮಕ್ಕಳ ಭವಿಷ್ಯ ನೋಡಿಕೊಂಡು ಹೋರಾಟದಲ್ಲಿ ಭಾಗವಹಿಸಿ, ಬೆಂಬಲಿಸಿ ಎಂದು ಸ್ವಾಮೀಜಿ ಕರೆ ನೀಡಿದರು.

ರಾಜಕೀಯಕ್ಕೆ ಬರಲ್ಲ: ಜಯಮೃತ್ಯುಂಜಯ ಶ್ರೀ

ಪಂಚಮಸಾಲಿಶ್ರೀಗಳು ಸಿಎಂ ಆಗಲಿ ಎಂಬ ಪೋಸ್ಟರ್ ವೈರಲ್ ಆಗಿರುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದರು. ನಾನು ಕಿಂಗ್ ಆಗುವುದಿಲ್ಲ, ಕಿಂಗ್​ಮೇಕರ್ ಆಗುತ್ತೇನೆ. ರಾಜಕೀಯ ಮಾಡಲು ಯತ್ನಾಳ್ ಸೇರಿದಂತೆ ನಮ್ಮ ಸಮಾಜದ ನಾಯಕರಿದ್ದಾರೆ. ನಮ್ಮ ಮೇಲೆ ಅಭಿಮಾನದಿಂದ ಅಭಿಮಾನಿಗಳು, ಭಕ್ತರು ಪೋಸ್ಟ್ ಹಾಕಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ