ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ. ಸಾಂತ್ವನ ಪತ್ರ ರವಾನಿಸಿರುವ ಮೋದಿ, ತಾಯಿಯ ಮಹತ್ವದ ಬಗ್ಗೆ ಬರೆದಿದ್ದಾರೆ. ಅಲ್ಲದೇ ಮುರುಗೇಶ್ ನಿರಾಣಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ತಾಯಿ ಕಳೆದುಕೊಂಡ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 23, 2024 | 7:23 PM

ಬಾಲಕೋಟೆ, (ಜನವರಿ 23): ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಮುರುಗೇಶ್ ನಿರಾಣಿ  (Murugesh Nirani) ಅವರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಸಾಂತ್ವನ ಹೇಳಿದ್ದಾರೆ. ತಮ್ಮ ತಾಯಿ ಸುಶಿಲಾತಾಯಿ ಅವರು ವಿಧಿವಶರಾದ ಸುದ್ದಿ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಕುಟುಂಬಕ್ಕೆ ಅಗಲಿಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ, ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.

ತಾಯಿ ಹೃದಯಕ್ಕೆ ಈ ಜಗತ್ತಿನಲ್ಲಿ ಯಾವುದನ್ನು ಹೋಲಿಸೋದಕ್ಕೆ ಸಾಧ್ಯವಿಲ್ಲ. ತಾಯಿ ಎಂದು ಮರಳಿ ಸಿಗದ ಕೊಡುಗೆ ಇದ್ದ ಹಾಗೆ. ತಾಯಿ ಸದಾ ನೆರಳು ನೀಡುವ ಮರದಂತೆ. ಅವರು ಕುಟುಂಬದ ಜೊತೆ ತಮ್ಮ ನೆನಪನ್ನು ಬಿಟ್ಟು ಹೋಗಿದ್ದಾರೆ. ಅವರು ಅಜರಾಮರ ಎಂದು ಮೋದಿ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ. ಈ ಸಾಂತ್ವದ ಪತ್ರವನ್ನು ಮುರುಗೇಶ್ ನಿರಾಣಿ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡು, ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮಾತೃ ವಿಯೋಗ

ಜನವರಿ 15ರಂದು ನಿಧನರಾಗಿದ್ದ ಸುಶಿಲಾಬಾಯಿ

ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರ ತಾಯಿ ಸುಶಿಲಾಬಾಯಿ(78) ಅವರು ಜನವರಿ 15ರಂದು ನಿಧನರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುಶಿಲಾಬಾಯಿ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಪತಿ‌ ರುದ್ರಪ್ಪ ನಿರಾಣಿ, ಐವರು ಗಂಡು ಮಕ್ಕಳು,ಇಬ್ಬರು ಹೆಣ್ಣು‌ಮಕ್ಕಳು, ಐವರು ಸೊಸೆಯಂದಿರು 14 ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ