ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ; ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ ಕ್ರಮವಾಗಬೇಕು: ಪ್ರಮೋದ್ ಮುತಾಲಿಕ್
ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಸುನಗ ಗ್ರಾಮದಲ್ಲಿರೋ ಮೃತರ ಕುಟುಂಬದ ಮನೆಗೆ ಭೇಟಿ ನೀಡಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ ಕ್ರಮವಾಗಲೇಬೇಕು. ಹಿಂದೂ ಸರ್ಕಾರದಲ್ಲಿ ಈ ರೀತಿಯ ಘಟನೆ ಸರಿಯಲ್ಲ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕು. ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯ ಮಾಡಿದ್ದಾರೆ.
ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಸುನಗ ಗ್ರಾಮದಲ್ಲಿರೋ ಮೃತರ ಕುಟುಂಬದ ಮನೆಗೆ ಭೇಟಿ ನೀಡಿದ್ದಾರೆ. ಮೃತ ನಾಗೇಶನ ತಂದೆ- ತಾಯಿ ಮನೆಗೆ ಬಂದ ಮುತಾಲಿಕ್ ಎದುರು ಕಣ್ಣೀರಿಟ್ಟಿದ್ದಾರೆ. ಘಟನೆ ಹಿನ್ನೆಲೆ ಮೃತ ನಾಗೇಶನ ಪಾಲಕರಿಂದ ಮುತಾಲಿಕ್ ಮಾಹಿತಿ ಪಡೆದಿದ್ದಾರೆ. ಪೋಲಿಸರ ಮಾಹಿತಿಯಂತೆ ನಾಲ್ವರ ಆತ್ಮಹತ್ಯೆಗೆ ಕಾರಣ ಆದವರ ವಿರುದ್ಧ ಕೇಸ್ ದಾಖಲಿಸುವುದಾಗಿ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಮಂಗಳೂರು: ಹೆಂಡತಿಯ ವಿರುದ್ಧವೇ ಪೊಲೀಸ್ ಠಾಣೆಗೆ ದೂರು ನೀಡಿದ ಅಬ್ದುಲ್ ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ಶಹನಾಜ್ ಎಂಬವರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಅಬ್ದುಲ್ ಎಂಬವರ ಅಂಗಡಿಗೆ ಬಂದಿದ್ದ ಶಹನಾಜ್ ಮೇಲೆ ಅಬ್ದುಲ್ ಪತ್ನಿ ಹಸೀನಾ, ಚಾಲಕ ಅಫ್ರಿದಿಯಿಂದ ಹಲ್ಲೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿ ಹೆಂಡತಿಯ ವಿರುದ್ಧವೇ ಅಬ್ದುಲ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಮತಾಂತರ ಯತ್ನವೇ ಕಾರಣ -ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗ
ಇದನ್ನೂ ಓದಿ: ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ