AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8-10 ಕ್ಷೇತ್ರಗಳ ಸರ್ವೆ ಮಾಡಿರುವೆ: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಪ್ರಮೋದ್ ಮುತಾಲಿಕ್

2023ರ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಯಾವ ಕ್ಷೇತ್ರ ಎಂದು ಡಿಸೆಂಬರ್ ಮೊದಲ ವಾರದಲ್ಲಿ ಘೋಷಣೆ ಮಾಡುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

8-10 ಕ್ಷೇತ್ರಗಳ ಸರ್ವೆ ಮಾಡಿರುವೆ: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಪ್ರಮೋದ್ ಮುತಾಲಿಕ್
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
TV9 Web
| Edited By: |

Updated on:Nov 04, 2022 | 4:50 PM

Share

ಬಾಗಲಕೋಟೆ: 2023ರ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಯಾವ ಕ್ಷೇತ್ರ ಎಂದು ಡಿಸೆಂಬರ್ ಮೊದಲ ವಾರದಲ್ಲಿ ಘೋಷಣೆ ಮಾಡುತ್ತೇನೆ ಎಂದು ಜಿಲ್ಲೆಯ ಬನಹಟ್ಟಿ ನಗರದಲ್ಲಿ ಶ್ರೀರಾಮಸೇನೆ (Sri Rama Sene) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದರು. ಶ್ರೀರಾಮಸೇನೆಯಿಂದ ಸ್ಪರ್ಧೆ ಮಾಡಲ್ಲ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ. ಇದು ನನ್ನ ಕೊನೆ ಪ್ರಯತ್ನ. ಎಂಟತ್ತು ಕ್ಷೇತ್ರಗಳಲ್ಲಿ ಈ ಬಗ್ಗೆ ಸರ್ವೆ ಮಾಡುತ್ತಿದ್ದೇವೆ. ತೇರದಾಳ, ಜಮಖಂಡಿ ಕ್ಷೇತ್ರ ಸೇರಿದಂತೆ ಉತ್ತೂರು, ಉಡುಪಿ, ಶೃಂಗೇರಿ, ಕಾರ್ಕಳ ಇವೆ. ಈಗ ಸರ್ವೆ ನಡಿತಾ ಇದೆ. ಕಾರ್ಯಕರ್ತರ ಜೊತೆ ಚರ್ಚೆ ಮಾಡುತ್ತೇನೆ. ಫೈನಲ್ ಯಾವ ಕ್ಷೇತ್ರದಿಂದ ಸ್ಪರ್ಧೆ ಅನ್ನೋದು ಡಿಸೆಂಬರ್ ಮೊದಲ ವಾರ ಘೋಷಣೆ  ಮಾಡುತ್ತೇನೆ ಎಂದರು.

ಶ್ರೀ ರಾಮ ಸೇನೆಯ ಪ್ರಮೋದ್ ಮುತಾಲಿಕ್​ಗೆ 4 ಜೀವ ಬೆದರಿಕೆ ಕರೆಗಳು

ಶ್ರೀ ರಾಮ ಸೇನೆ  ಸಂಸ್ಥಾಪಕ ಪ್ರಮೋದ್ ಮುತಾಲಿಕ್​ಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಸ್ವತಃ ಮುತಾಲಿಕ್ ಮಾಹಿತಿ ನೀಡಿದ್ದು, ನಿನ್ನೆ ರಾತ್ರಿ 4 ನಂಬರ್​ಗಳಿಂದ ಜೀವ ಬೆದರಿಕೆ ಕರೆಗಳು (Life Threat Call) ಬಂದಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ 4 ಬೇರೆ ಬೇರೆ ನಂಬರುಗಳಿಂದ ಬೆದರಿಕೆ ಕರೆಗಳು ಬಂದಿವೆ. ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಬೆದರಿಕೆ ಕರೆ ಬಂದಿದೆ. ಇಂದು ಬೆಳಗ್ಗೆಯೂ ಕೊಲೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ.

ಗುರುವಾರ ರಾತ್ರಿ ಬಂದಿರುವ 4 ಕರೆಗಳಲ್ಲಿ ಎರಡು ಕರೆಯನ್ನ ನಾನೇ ರಿಸೀವ್ ಮಾಡಿದ್ದೆ. ಕೊಚ್ಚಿ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ್ದಾರೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇಂದು ಬೆಳಗ್ಗೆ ಸಹ ಬೆದರಿಕೆ ಕರೆ ಬಂದಿದೆ. ಹೀನಾಯ ಪದ ಬಳಕೆಗಳನ್ನ ಮಾಡಿದ್ದಾರೆ. ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಇದು‌ ಮೊದಲ ಬೆದರಿಕೆಯಲ್ಲ. ಬೊಗಳುವ ನಾಯಿ ಕಚ್ಚಲ್ಲ. ಈ ರೀತಿಯ ಬೆದರಿಕೆ ಹಾಕುವ ನಾಟಕ‌ ಬಿಟ್ಟುಬಿಡಿ. ದೇಶದ ಹಿತದೃಷ್ಟಿಯಿಂದ ನಾನು ಸಂಘಟನೆ ಮಾಡ್ತಿದ್ದೀನಿ. ನನಗೆ ಬೆದರಿಕೆ ಹಾಕಲು ಬರಬೇಡಿ ಎಂದು ಮುತಾಲಿಕ್ ಗುಡುಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:47 pm, Fri, 4 November 22

Follow Us
TV9 Web
TV9 Web

TV9 Kannada

Read More
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು