ಬಾಗಲಕೋಟೆ: ಕಳಪೆ ಗುಣಮಟ್ಟದ ಆಹಾರ ಸೇವಿಸಿ ಗರ್ಭಿಣಿ ಆರೋಗ್ಯದಲ್ಲಿ ಏರುಪೇರು

ಕಳಪೆ ಗುಣಮಟ್ಟದ ಆಹಾರ ಸವಿದು ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾ.ತೇರದಾಳ ಪಟ್ಟಣದಲ್ಲಿ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅತ್ಯಂತ ಕಳಪೆ ಗುಣಮಟ್ಟದ ಆಹಾರ ನೀಡಿದ್ದೇ ಇದಕ್ಕೆಲ್ಲ ಕಾರಣ ಎಂದು ಆರೋಪಿಸಲಾಗಿದೆ.

ಬಾಗಲಕೋಟೆ: ಕಳಪೆ ಗುಣಮಟ್ಟದ ಆಹಾರ ಸೇವಿಸಿ ಗರ್ಭಿಣಿ ಆರೋಗ್ಯದಲ್ಲಿ ಏರುಪೇರು
ಕಳಪೆ ಗುಣಮಟ್ಟದ ಆಹಾರ ಸವಿದು ಗರ್ಭಿಣಿ ಆರೋಗ್ಯದಲ್ಲಿ ಏರುಪೇರು
Follow us
| Updated By: Rakesh Nayak Manchi

Updated on: Sep 25, 2023 | 2:48 PM

ಬಾಗಲಕೋಟೆ, ಸೆ.25: ಕಳಪೆ ಗುಣಮಟ್ಟದ ಆಹಾರ ಸೇವಿಸಿ ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿಬನಹಟ್ಟಿ ತಾ.ತೇರದಾಳ ಪಟ್ಟಣದಲ್ಲಿ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅತ್ಯಂತ ಕಳಪೆ ಗುಣಮಟ್ಟದ ಆಹಾರ ನೀಡಿದ್ದೇ ಇದಕ್ಕೆಲ್ಲ ಕಾರಣ ಎಂದು ಆರೋಪಿಸಲಾಗಿದೆ.

ಅಂಗನವಾಡಿ ಕೇಂದ್ರದಲ್ಲಿ ಆಹಾರ ಸವಿದು ಭಾಗೀರಥಿ ಕಾಂಬಳೆ ಅಸ್ವಸ್ಥಗೊಂಡ ಗರ್ಭಿಣಿ. ತೇರದಾಳ ಪಟ್ಟಣದ ಬಸವನಗರ ನಿವಾಸಿಯಾಗಿರುವ ಭಾಗೀರಥಿ ಅವರಿಗೆ ಅಂಗನವಾಡಿ ಕೇಂದ್ರದಿಂದ ಆಹಾರ ನೀಡಲಾಗಿತ್ತು. ಈ ಆಹಾರದಲ್ಲಿ ಹುಳುಗಳಿದ್ದವು. ಇದನ್ನು ಗಮನಿಸದೇ ಭಾಗೀರಥಿ ಸೇವಿಸಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆ: ಹಾಸ್ಟೆಲ್​ನಿಂದ ಕಾಣೆಯಾಗಿದ್ದ ಫಿಜಿಯೊಥೆರಪಿಸ್ಟ್ ವಿದ್ಯಾರ್ಥಿನಿ ಶವ ರೈಲ್ವೆ ಬ್ರಿಡ್ಜ್ ಕೆಳಗೆ ಪತ್ತೆ

ಅತ್ಯಂತ ಕಳಪೆ ಗುಣಮಟ್ಟದ ಆಹಾರ ನೀಡಿದ್ದೇ ಇದಕ್ಕೆಲ್ಲ ಕಾರಣವಾಗಿದ್ದು, ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಅಂಗವಾಡಿ ಕಾರ್ಯಕರ್ತೆ ವಿರುದ್ಧ ಭಾಗೀರಥಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಭಾಗೀರಥಿ ಪತಿ ಶಿವಾನಂದ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ