AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್

ಒಂದು ಹಿಂದು ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ. ನಿಮಗೆ ರಕ್ಷಣೆ,ಉದ್ಯೋಗ ಎಲ್ಲ ಜವಾಬ್ದಾರಿ ನಮ್ಮದು ಎಂದು ಪ್ರಮೋದ್ ಮುತಾಲಿಕ್​ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಪರೋಕ್ಷವಾಗಿ ಆರ್‌ಎಸ್‍ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿಕಾರಿದ್ದಾರೆ.

ಒಂದು ಹಿಂದು ಹುಡುಗಿ ಹೋದ್ರೆ, ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ನಿಮಗೆ ರಕ್ಷಣೆ ನಮ್ಮದು ಎಂದ ಮುತಾಲಿಕ್
ಪ್ರಮೋದ್ ಮುತಾಲಿಕ್ (ಸಂಗ್ರಹ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on:Feb 19, 2023 | 7:41 PM

Share

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜ್​ ಕೀ ಜೈ ಎನ್ನುತ್ತೀರಿ. ಆದರೆ ಮನೆಯಲ್ಲಿ ಒಂದು ಬಡಿಗೆ ಇಲ್ಲ, ಚಾಕು ಸಹ ಇಲ್ಲ. ಎಲ್ಲ ಹಿಂದೂಗಳು ಮನೆಯಲ್ಲಿ ಒಂದು ತಲವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಕರೆ ಕೊಟ್ಟಿದ್ದಾರೆ. ಅಲ್ಲದೇ ಒಂದು ಹಿಂದೂ(Hindu) ಹುಡುಗಿ ಹೋದರೆ ಹತ್ತು ಮುಸ್ಲಿಂ(Muslim) ಹುಡುಗಿಯರನ್ನು ಹಾರಿಸಿಕೊಂಡು ಹೋಗಿ ಎಂದು ಹೇಳಿದ್ದಾರೆ.

ಇಂದು(ಫೆ.29) ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ , . ನಟ್, ಸ್ಕ್ರೂ ಡ್ರೈವರ್, ಕಂಪಾಸು, ಸ್ಪಾನರು, ಸುಡುಗಾಡು, ಸಂತಿ ಪೂಜಾ ಮಾಡುತ್ತೀರಿ. ಶಸ್ತ್ರ ಅಂದರೆ ತಲವಾರ್, ಕತ್ತಿ, ಕುರುಪಿ, ಕೊಡಲಿ, ಚಾಕು. ಇವನ್ನೆಲ್ಲ ಇಟ್ರೆ ಪೊಲೀಸ್​ ಬಿಡ್ತಾರೇನ್ರೀ ಅಂತೀರಿ. ಪೊಲೀಸರು ಅರೆಸ್ಟ್ ಮಾಡೋದಾದರೆ ದುರ್ಗಾಮಾತೆ ಕೈಯಲ್ಲಿ ಹತ್ತು ಶಸ್ತ್ರಗಳಿವೆ, ಮೊದಲು ದುರ್ಗೆಯನ್ನು ಅರೆಸ್ಟ್ ಮಾಡಲಿ. ಹನುಮನ ಕೈಯಲ್ಲಿ ಗದೆ ಇದೆ, ಮೊದಲು ಹನಮಂತನ ಅರೆಸ್ಟ್ ಮಾಡಲಿ, ಈಶ್ವರನ ಕೈಯಲ್ಲಿ ತ್ರಿಶೂಲ ಇದೆ, ಈಶ್ವರನನ್ನು ಅರೆಸ್ಟ್ ಮಾಡಲಿ ಎಂದು ಹೇಳಿದರು.

ಪ್ರತಿ ಹಿಂದೂ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಬೇಕು.ಆ ಖಡ್ಗ ತಲವಾರ್ ಹೊಡೆಯೋದಕ್ಕಲ್ಲ. ಗೋರಕ್ಷಣೆಗಾಗಿ, ನಮ್ಮ ಅಕ್ಕ-ತಂಗಿಯರ ರಕ್ಷಣೆಗಾಗಿ, ರಾಷ್ಟ್ರ ರಕ್ಷಣೆಗಾಗಿ, ಮಠಮಂದಿರಗಳ ರಕ್ಷಣೆಗಾಗಿ ಎಂದು ಮುತಾಲಿಕ್ ಹೇಳಿದ್ದಾರೆ.

ಇನ್ನು ಇದೇ ವೇಳೆ ಲಬ್ ಜಿಹಾದ ವಿರುದ್ಧ ಗರಂ ಆದ ಮುತಾಲಿಕ್, ಇಲ್ಲಿದ್ದಂತಹ ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ. ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ. ನಿಮಗೆ ರಕ್ಷಣೆ,ಉದ್ಯೋಗ ಎಲ್ಲ ಜವಾಬ್ದಾರಿ ನಮ್ಮದು ಎಂದ ಪ್ರಚೋದನಕಾರಿ ಹೇಳಿಕೆ ನೀಡಿದರು.

ಪರೋಕ್ಷವಾಗಿ ಮೋಹನ್ ಭಾಗವತ ವಿರುದ್ಧ ಮುತಾಲಿಕ್ ಕಿಡಿ

ಇತ್ತೀಚೆಗೆ ಒಬ್ಬ ರಾಷ್ಟ್ರಮಟ್ಟದಲ್ಲಿ ಇರುವಂತಹ ವ್ಯಕ್ತಿ ಒಂದು ಮಾತನ್ನು ಹೇಳಿದರು. ನನಗೆ ಬಹಳ ದುಃಖವಾಯಿತು. ನೋವಿನ ಜೊತೆಗೆ ಸಿಟ್ಟು ಬಂತು. ಯಾಕೆ ಅಂದರೆ ಹಿಂದೂ ಸಮಾಜ ಮುಸ್ಲಿಂರ ಜೊತೆ ಹೊಂದಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ. ಅವರು ನಾವು ಅಣ್ಣತಮ್ಮಂದಿರ ತರಹ ಇರಬೇಕು ಅಂದ್ರು. ಇದೇ ಮಾತನ್ನು ಜೀಜಾಮಾತಾ ತನ್ನ ಮಗನಿಗೆ ಹೇಳಿದ್ರೆ ಏನಾಗ್ತಿತ್ತು? ನಾನು ಆ ರಾಷ್ಟ್ರೀಯ ಚಿಂತಕರಿಗೆ ಹೇಳುತ್ತೇನೆ. ನೀವು ತಪ್ಪು ಹೆಜ್ಜೆ ಇಡುತ್ತಿದ್ದೀರಾ. ಗೋಹಂತಕರ ಜೊತೆ ಹೊಂದಿಕೊಂಡು ಹೋಗಬೇಕಾ? ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಮಸೀದಿ‌ ಮೇಲೆ‌ ಮೈಕ್ ಹಾಕೊಂಡು ಅಲ್ಲಾ ಎನ್ನುವವರ ಜೊತೆ ಹೊಂದಿಕೊಂಡು ಹೋಗಬೇಕಾ ಎಂದು ಪರೋಕ್ಷವಾಗಿ ಹೆಸರು ಹೇಳದೇ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ ವಿರುದ್ಧ ಕಿಡಿಕಾರಿದರು.

Published On - 7:32 pm, Sun, 19 February 23