Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ; ಬೈಕ್‌ ಸಾವಾರರಿಬ್ಬರೂ ಸ್ಥಳದಲ್ಲೇ ಸಾವು

ಬೈಕ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸಾವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಆನದಿನ್ನಿ ಕ್ರಾಸ್ ಬಳಿಯ ಯಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೈಕ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ; ಬೈಕ್‌ ಸಾವಾರರಿಬ್ಬರೂ ಸ್ಥಳದಲ್ಲೇ ಸಾವು
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 05, 2022 | 9:38 PM

ಬಾಗಲಕೋಟೆ: ಬೈಕ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸಾವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ತಾಲೂಕಿನ ಆನದಿನ್ನಿ ಕ್ರಾಸ್ ಬಳಿಯ ಯಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಟ್ರಕ್ ವಿಜಯಪುರ ಮಾರ್ಗದಿಂದ ಗದ್ದನಕೇರಿ ಕ್ರಾಸ್ ಕಡೆಗೆ ಬರ್ತಿತ್ತು. ಬೈಕ್ ಸವಾರರು ಗದ್ದನಕೇರಿ ಕ್ರಾಸ್ ದಿಂದ ಬೀಳಗಿ ಕಡೆಗೆ ಹೊರಟಿದ್ದಾರೆ. ಅತೀ ವೇಗದಿಂದ ಬಂದ ಬೈಕ್ ಸಾವರರು, ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತೂರು ಗ್ರಾಮದಲ್ಲಿ ಮನೆ ಕುಸಿದು ಮಹಿಳೆ ಸಾವು

ಕೊಪ್ಪಳ: ಮನೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮತ್ತೂರು ಗ್ರಾಮದಲ್ಲಿ ಘಟನೆಮತ್ತೂರು ಗ್ರಾಮದಲ್ಲಿ ನಡೆದಿದೆ. ಬಸಮ್ಮ ಡಂಬರಳ್ಳಿ(55) ಮೃತ ದುರ್ದೈವಿ. ಮನೆಯಲ್ಲಿದ್ದ ಮತ್ತಿಬ್ಬರನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಶಂಕರಮ್ಮ, ಶಿವನಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುರ್ಗಾ ಮಾತೆ ವಿಗ್ರಹ ವಿಸರ್ಜನೆಗೆ ತೆರಳಿದ್ದ ಯುವಕರು ನೀರುಪಾಲು

ಬೆಂಗಳೂರು: ದಸರಾ ನಿಮಿತ್ತ ದುರ್ಗಾ ಮಾತೆ ವಿಗ್ರಹ ವಿಸರ್ಜನೆಗೆ ತೆರಳಿದ್ದ ಯುವಕರು ನೀರುಪಾಲಾಗಿದ್ದಾರೆ. ಮಹಾರಾಷ್ಟ್ರ ಮೂಲದ ಸೋಮೇಶ್(21), ಜಿತು(22) ಮೃತ ದುರ್ದೈವಿಗಳು. ದಸರಾ ನಿಮಿತ್ತ ದುರ್ಗಾ ಮಾತೆ ವಿಗ್ರಹ ವಿಸರ್ಜನೆಗೆ ಎಂದು ಐವರು ಕೆಂಗೇರಿಯ ಸುಣಕಲ್ ಪಾಳ್ಯಕೆರೆಗೆ ಹೋಗಿದ್ದಾರೆ. ಆಗ ಕೆರೆಯಲ್ಲಿ ಐವರು ಯುವಕರು ಇಳಿದಿದ್ದಾರೆ. ಈ ವೇಳೆ ಐವರ ಪೈಕಿ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಐವರು ಸೆಂಟ್ರಿಂಗ್ ಕೆಲಸ ಮಾಡಿಕೊಂಡು ಆರ್.ಆರ್.ನಗರದಲ್ಲಿ‌ ವಾಸವಿದ್ದರು. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯಾ ನಡೆದಿದೆ. ಸದ್ಯ ಕತ್ತಲಾಗಿರುವುದರಿಂದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ.

ನಿನ್ನೆ ಹೆಂಡತಿ ಇಂದು ಗಂಡ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಧನಮಿಟ್ಟೇನಹಳ್ಳಿಯಲ್ಲಿ ನಿನ್ನೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿನ್ನೆ ಮನೆಯಲ್ಲಿ ವಿಷ ಸೇವಿಸಿ ಪತ್ನಿ ಸುನಿತಾ(25) ಆತ್ಮಹತ್ಯೆ ಹಿನ್ನೆಲೆ ಪತಿ ಮೋಹನ್ ಕುಮಾರ್​ನನ್ನು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸಿ ಕಳಿಸಿದ್ದರು. ಇಂದು ಮನೆಗೆ ಬಂದು ಮೋಹನ್​ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ ವಿರುದ್ಧ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವಕನನ್ನ ಅಪಹರಸಿ, ಕೊಲೆ ಮಾಡಿದ ದುಷ್ಕರ್ಮಿಗಳು

ಕಲಬುರಗಿ: ದುಷ್ಕರ್ಮಿಗಳು ಯುವಕನನ್ನ ಅಪಹರಸಿ, ಕೊಲೆ ಮಾಡಿರುವ ಘಟನೆ ಕಲಬುರಗಿ ಪಟ್ಟಣದ ಶರಣಸಿರಸಗಿ ಮಡ್ಡಿ ಬಳಿ ನಡೆದಿದೆ. ಕಲಬುರಗಿ ನಗರದ ಆಶ್ರಯ ಕಾಲೋನಿ ನಿವಾಸಿ ಪ್ರವೀಣ್(21) ಮೃತ ದುರ್ದೈವಿ. ದುಷ್ಕರ್ಮಿಗಳು ಪ್ರವೀಣನನ್ನು ಕೈನಿಂದ ಗುದ್ದಿ ಕೊಲೆ ಮಾಡಿದ್ದಾನೆ. ಯುವತಿಯೋರ್ವಳನ್ನು ಚುಡಾಯಿಸಿದ್ದಕ್ಕೆ ಅಕ್ಟೋಬರ್ 2 ರಂದು ಮನೆ ಮುಂದೆ ಇದ್ದ ಪ್ರವೀಣ್​ನನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಆಶ್ರಯ ಕಾಲೋನಿಯ ಸಾಗರ್ ಮತ್ತು ಆತನ ಸ್ನೇಹಿತರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Wed, 5 October 22

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !